SBI Recruitment 2022: ಮ್ಯಾನೇಜರ್ ಸೇರಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

Published : Dec 28, 2021, 09:23 PM IST
SBI Recruitment 2022: ಮ್ಯಾನೇಜರ್  ಸೇರಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಸಾರಾಂಶ

SBIನಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜರ್,ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನಾಂಕವಾಗಿದೆ.

ಬೆಂಗಳೂರು(ಡಿ.28): ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಮ್ಯಾನೇಜರ್ (Manager), ಡೆಪ್ಯುಟಿ ಮ್ಯಾನೇಜರ್(deputy manager), ಚೀಫ್​​ ಮ್ಯಾನೇಜರ್ (Chief Manager)  ಹೀಗೆ ಒಟ್ಟು 15 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್​, LLB, CA, ಎಂಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಒಟ್ಟು 15 ಹುದ್ದೆಗಳ ಮಾಹಿತಿ ಇಂತಿದೆ:
ಚೀಫ್​​ ಮ್ಯಾನೇಜರ್ -2
ಮ್ಯಾನೇಜರ್-6
ಡೆಪ್ಯುಟಿ ಮ್ಯಾನೇಜರ್-7

ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, LLB, CA, ಎಂಬಿಎ ಪೂರ್ಣಗೊಳಿಸಿರಬೇಕು.

BMCRI Recruitment 2022: ಬೆಂಗಳೂರು ಮೆಡಿಕಲ್​ ಕಾಲೇಜಿನ ಡೈರೆಕ್ಟರ್​ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನ

ಅರ್ಜಿ ಶುಲ್ಕ: ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ ಮತ್ತು ವೇತನ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,170 ರಿಂದ 89,890 ರೂ ವೇತನ ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟಿಂಗ್​ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.

Vijayapura Panchayat Recruitment 2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

ವಿಶೇಷ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್​ ಆಫ್​ ಇಂಡಿಯಾ: ಬ್ಯಾಂಕ್ ಆಫ್​ ಇಂಡಿಯಾ (Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ವಿಶೇಷ ಭದ್ರತಾ ಅಧಿಕಾರಿ (Special Security Officer) ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 7, 2022 ಆಗಿದೆ. ಅಭ್ಯರ್ಥಿಗಳು ಬ್ಯಾಂಕ್​ ಆಫ್​ ಇಂಡಿಯಾದ ಅಧಿಕೃತ ವೆಬ್​ ತಾಣ ​ www.bankofindia.co.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಗೆ ತಿಳಿದುಕೊಳ್ಳಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಯಾವುದಾದರು ಒಂದು  ವಿಷಯದಲ್ಲಿ ಪದವಿ ಪಡೆದಿರಬೇಕು.  ಮತ್ತು ಅಭ್ಯರ್ಥಿಗಳ ವಯಸ್ಸು 25-40 ವರ್ಷದೊಳಗಿರಬೇಕು.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ವಿಶೇಷ ಭದ್ರತಾ ಅಧಿಕಾರಿ ಹುದ್ದೆಗಳಿಗೆ  ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು  ಮಹಾರಾಷ್ಟ್ರದ ಮುಂಬೈನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ವಿಶೇಷ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

PREV
Read more Articles on
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್