ನೈರುತ್ಯ ರೈಲ್ವೆ ಖಾಲಿ ಇರುವ ವಿವಿಧ 147 ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ.
ಬೆಂಗಳೂರು (ಏ.13): ನೈಋತ್ಯ ರೈಲ್ವೆ ( South Western Railway) ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 147 ಗೂಡ್ಸ್ ಟ್ರೈನ್ ಮ್ಯಾನೇಜರ್ (Goods Train Manager) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ rrchubli.in ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ನೈಋತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬಹುದು.
undefined
ವಯೋಮಿತಿ: ನೈಋತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮತ್ತು SC/ST ಅಭ್ಯರ್ಥಿಗಳೀಗೆ 47 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ನೈಋತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಮೆಡಿಕಲ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ನೈಋತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
KPSC RDWSD RECRUITMENT 2022 ಒಟ್ಟು 136 ಕಿರಿಯ ಇಂಜಿನಿಯರ್ ಹುದ್ದೆಗೆ ನೇಮಕಾತಿ
BHEL ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ನೇಮಕಾತಿ ,ಏಪ್ರಿಲ್ 15 ಕೊನೆಯ ದಿನ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (Bharat Heavy Electricals Limited - BHEL) ನವದೆಹಲಿ, ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 4 ಕಾರ್ಯನಿರ್ವಾಹಕ (ಹಣಕಾಸು) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಏಪ್ರಿಲ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು www.bhel.com ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು.
EXIM Bank Recruitment 2022 ವಿವಿಧ ವಿಭಾಗದ 30 ಹುದ್ದೆಗಳಿಗೆ ನೇಮಕಾತಿ
ಕೆಲಸದ ಅನುಭವ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹಣಕಾಸು ಕ್ಷೇತ್ರದಲ್ಲಿ ಡೇಟಾ ವಿಶ್ಲೇಷಣೆ/ವಿಶ್ಲೇಷಣಾತ್ಮಕ ಕಾರ್ಯಯೋಜನೆಗಳನ್ನು ನಿಭಾಯಿಸುವ ಬಗ್ಗೆ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
ವಯೋಮಿತಿ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಟ 32 ವರ್ಷವಾಗಿರಬೇಕು.
ಅರ್ಜಿ ಶುಲ್ಕ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹354 ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹71040 ವೇತನ ದೊರೆಯಲಿದೆ.