3585 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಡಿ.02): 3585 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ದಕ್ಷಿಣ ರೈಲ್ವೆ ಇಲಾಖೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಭಾರತೀಯ ಅಂಚೆ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
undefined
ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ಸಂಸ್ಥೆಯಿಂದ SSLC/ತತ್ಸಮಾನ ವಿದ್ಯಾರ್ಹತೆ, ದ್ವಿತೀಯ ಪಿಯುಸಿ/10+2 ಮತ್ತು ಐಟಿಐ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ: ಕನಿಷ್ಟ 15 ರಿಂದ ಗರಿಷ್ಟ 22/24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
1104 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ: SSLC ಪಾಸಾದವರೂ ಅರ್ಜಿ ಹಾಕ್ಬಹುದು
ವೇತನ ಶ್ರೇಣಿ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಕ್ಷಿಣ ರೈಲ್ವೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಇರಲಿದೆ.
ಅರ್ಜಿ ಶುಲ್ಕ: ಅರ್ಜಿದಾರರು 100 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ದಕ್ಷಿಣ ರೈಲ್ವೆಯ ಅಧಿಕೃತ ವೆಬ್‌ಸೈಟ್ https://sr.indianrailways.gov.in/ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡತಕ್ಕದ್ದು.
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ