SAI Recruitment 2022: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ, ಮಾಸಿಕ 1 ಲಕ್ಷದವರೆಗೆ ವೇತನ

By Suvarna News  |  First Published Dec 22, 2021, 6:22 PM IST
  • ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ
  • ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ. 5 ಕೊನೆಯ ದಿನ
  • 18 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ 

ಬೆಂಗಳೂರು (ಡಿ.22): ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಜೂನಿಯರ್ ಕನ್ಸಲ್ಟೆಂಟ್ (Junior Consultant) ಹುದ್ದೆಗಳು ಖಾಲಿ ಇದೆ. ಡಿಸೆಂಬರ್ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.  ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ sportsauthorityofindia.nic.in ಗೆ ಭೇಟಿ ನೀಡಲು ಕೋರಲಾಗಿದೆ.

 ಭಾರತೀಯ ಕ್ರೀಡಾ ಪ್ರಾಧಿಕಾರ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಎಂಬಿಎ, ಪಿಜಿಡಿಎಂ ಪೂರ್ಣಗೊಳಿಸಿರಬೇಕು. ಯಾವುದೇ ಕ್ರೀಡಾ ವಿಭಾಗಗಳಲ್ಲಿ (Sports Quota) ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.

Tap to resize

Latest Videos

undefined

ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು  ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ. ಮತ್ತು ಮಾಸಿಕ  75,000-1,00,000 ರೂ ವೇತನ ನೀಡಲಾಗುತ್ತದೆ.

RRI RECRUITMENT 2022: ಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಕ್ರೀಡಾ ಕೋಟದ ಅಡಿಯಲ್ಲಿ ವಿವಿಧ ಹುದ್ದೆಗಳ  ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಅಂಚೆ ಇಲಾಖೆ: ಅಂಚೆ ಇಲಾಖೆ, ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಬಿಹಾರ ವೃತ್ತದಲ್ಲಿ (Bihar Postal Circle Recruitment 2021) ಖಾಲಿ ಇರುವ ವಿವಿಧ 60 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 'ಸ್ಪೋರ್ಟ್ಸ್ ಕೋಟಾ' (Sports Quota)ಅಡಿಯಲ್ಲಿ  ನೇರ ನೇಮಕಾತಿಗಾಗಿ ಖಾಲಿ ಹುದ್ದೆಗಳನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಅಂಚೆ ಇಲಾಖೆ, ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಬಿಹಾರ ವೃತ್ತ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

RRI Recruitment 2022: ಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆ

ಅಂಚೆ ಸಹಾಯಕ(Postal Assistant (PA)) - 31, ವಿಂಗಡಣೆ ಸಹಾಯಕ (Sorting Assistant (SA)) - 11, ಪೋಸ್ಟ್‌ಮ್ಯಾನ್(Postman)-05,  ಎಂಟಿಎಸ್ (ಮಲ್ಟಿ-ಟಾಸ್ಕಿಂಗ್ ಸ್ಟಾಫ್)೯MTS)-13 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದ್ದು 31.12.2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ/ಸಂಸ್ಥೆಯಿಂದ 10ನೇ, 12ನೇ ತರಗತಿ ಅಥವಾ ತತ್ಸಮಾನ ತೇರ್ಗಡೆಯಾಗಿರಬೇಕು.

RUDSETI Self Employment Training: ಸ್ವ ಉದ್ಯೋಗ ಉಚಿತ ತರಬೇತಿಗೆ ರುಡ್‌ಸೆಟ್‌ ಅರ್ಜಿ

ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್: ಅಭ್ಯರ್ಥಿಯು 18 ರಿಂದ 27 ವರ್ಷ ವಯಸ್ಸಿನವರಾಗಿರಬೇಕು.
ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ: ಅಭ್ಯರ್ಥಿಯು 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು.
ಪೋಸ್ಟ್‌ ಮ್ಯಾನ್: ಅಭ್ಯರ್ಥಿಯು 18 ರಿಂದ 27 ವರ್ಷ ವಯಸ್ಸಿನವರಾಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?
ಲಕೋಟೆಗಳನ್ನು "ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್ / ಪೋಸ್ಟ್‌ಮ್ಯಾನ್ / ಎಂಟಿಎಸ್ ಹುದ್ದೆಗೆ ನೇಮಕಾತಿಗಾಗಿ ಅರ್ಜಿಯನ್ನು ಬಿಹಾರ ಪೋಸ್ಟಲ್ ಸರ್ಕಲ್‌ನಲ್ಲಿ ಸ್ಪೋರ್ಟ್ಸ್ ಕೋಟಾದಡಿಯಲ್ಲಿ" ಎಂದು ಬರೆಯಬೇಕು ಮತ್ತು ನೋಂದಾಯಿತ / ಸ್ಪೀಡ್ ಪೋಸ್ಟ್ ಮೂಲಕ  5th Floor, O/O the Chief Postmaster General, BIHAR Circle, PATNA – 800001 ಈ ವಿಳಾಸಕ್ಕೆ ಅರ್ಜಿ ಕಳುಹಿಸಬೇಕು,

click me!