SAI Recruitment 2022; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By Gowthami K  |  First Published Aug 23, 2022, 12:47 PM IST

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ವಿವಿಧ  ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 8ರೊಳಗೆ ಅರ್ಜಿ ಸಲ್ಲಿಸಿ.


ಬೆಂಗಳೂರು (ಆ.22) : ಭಾರತೀಯ ಕ್ರೀಡಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಗುತ್ತಿಗೆ ಆಧಾರದ ಮೇಲೆ ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್ (ಭೌತಚಿಕಿತ್ಸಕರು, ಶಕ್ತಿ ಮತ್ತು ಕಂಡೀಷನಿಂಗ್ ತಜ್ಞರು, ಶರೀರಶಾಸ್ತ್ರಜ್ಞರು, ಮನೋವಿಜ್ಞಾನಿಗಳು, ಬಯೋಮೆಕಾನಿಕ್ಸ್ ಮತ್ತು ಪೌಷ್ಟಿಕತಜ್ಞರು) ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತದೆ.  ಒಟ್ಟು 138 ಹುದ್ದೆಗಳು  ಖಾಲಿ ಇದ್ದು,  SAI ವಿಶ್ಲೇಷಕ ಉದ್ಯೋಗಗಳಿಗಾಗಿ ನಿಯೋಜಿಸಲಾಗಿದೆ. ದೆಹಲಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ ಹೆಸರು ನೋಂದಣಿಯನ್ನು ಮಾಡಿ. ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಆನ್‌ಲೈನ್  ನಲ್ಲಿ ಸೆಪ್ಟೆಂಬರ್ 5ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ  https://sportsauthorityofindia.gov.in/sai/ ಗೆ ಭೇಟಿ ನೀಡಲು ಕೋರಲಾಗಿದೆ. 

ಶೈಕ್ಷಣಿಕ ಅರ್ಹತೆ: ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.   

Tap to resize

Latest Videos

undefined

ವಯೋಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿ   45 ವರ್ಷದ ಒಳಗಿರಬೇಕು. 

ಆಯ್ಕೆ ಪ್ರಕ್ರಿಯೆ:  ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಮೊದಲು ಶಾರ್ಟ್‌ಲಿಸ್ಟಿಂಗ್ ಮಾಡಿ ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Karnataka High Court Recruitment 2022; 150 ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನಿರ್ದೇಶಕ, ಉಪ ನಿರ್ದೇಶಕ ಸೇರಿ ವಿವಿಧ 30 ಹುದ್ದೆಗಳಿಗೆ ಅರ್ಜಿ ಆಹ್ವಾನ
 ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ನಿರ್ದೇಶಕ, ಉಪ ನಿರ್ದೇಶಕ  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 30 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 8 ಆಗಿದೆ.  ಈಗಾಗಲೇ ಸರ್ಕಾರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿ, ನಿವೃತ್ತರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಆಯ್ಕೆ ಪ್ರಕ್ರಿಯೆ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ನಿರ್ದೇಶಕ, ಉಪ ನಿರ್ದೇಶಕ  ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ವೇತನ ವಿವರ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 67700 ರೂ ನಿಂದ 209200 ರೂ ತಿಂಗಳ ವೇತನ ದೊರೆಯಲಿದೆ. 

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಉದ್ಯೋಗ ನೇಮಕಾತಿಗೆ ಅಧಿಸೂಚನೆ, ಇಲ್ಲಿದೆ ಅರ್ಜಿ

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
ಅರ್ಜಿ ಸಲ್ಲಿಕೆ ವಿಳಾಸ
ಡೈ. ನಿರ್ದೇಶಕರು (ನೇಮಕಾತಿ),
ಭಾರತೀಯ ಕ್ರೀಡಾ ಪ್ರಾಧಿಕಾರ, ಪ್ರಧಾನ ಕಛೇರಿ, ಗೇಟ್ ನಂ.10 (ಪೂರ್ವ ದ್ವಾರ),
ಜವಾಹರಲಾಲ್ ನೆಹರು ಕ್ರೀಡಾಂಗಣ, ಲೋಧಿ ರಸ್ತೆ, ನವದೆಹಲಿ-110003
 

click me!