SAI Recruitment 2022: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ, ಮಾಸಿಕ 1 ಲಕ್ಷದವರೆಗೆ ವೇತನ

By Contributor Asianet  |  First Published Feb 26, 2022, 9:53 PM IST

 ಭಾರತೀಯ ಕ್ರೀಡಾ ಪ್ರಾಧಿಕಾರವು  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.  ಒಟ್ಟು 28 ಉಪನಿರ್ದೇಶಕರು ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನಾಂಕವಾಗಿದೆ.


ಬೆಂಗಳೂರು (ಫೆ.26): ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.  ಒಟ್ಟು 28 ಉಪನಿರ್ದೇಶಕರು ( Deputy Director) ಹುದ್ದೆಗಳು ಖಾಲಿ ಇದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನಾಂಕವಾಗಿದೆ.  ಅಭ್ಯರ್ಥಿಗಳು ಆಫ್​​​ಲೈನ್ (Offline)​​ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ sportsauthorityofindia.nic.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ  ಬಗ್ಗೆ ತಿಳಿಯಲು  ನೇಮಕಾತಿ ಅಧಿಸೂಚನೆಯನ್ನು ಓದಬೇಕು ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ 

Tap to resize

Latest Videos

undefined

ವಯೋಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷವಾಗಿರಬೇಕು.

TFRI Recruitment 2022: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಆಯ್ಕೆ ಪ್ರಕ್ರಿಯೆ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಸ್ಥಳ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ನವದೆಹಲಿಯಲ್ಲಿ  ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

ವೇತನ ವಿವರ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ₹ 67,700 ರಿಂದ  ₹ 2,08,700 ವೇತನ ಪಡೆಯಲಿದ್ದಾರೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣಕ್ಕೆ ಬೇಟಿ ನೀಡಿ, ಅಧಿಸೂಚನೆ ಓದಿಕೊಂಡು ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಕೇಳಿರುವ ಮಾಹಿತಿಯನ್ನು ತುಂಬಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಡೈರೆಕ್ಟರ್
ಭಾರತೀಯ ಕ್ರೀಡಾ ಪ್ರಾಧಿಕಾರ
ಮುಖ್ಯ ಕಚೇರಿ
ಗೇಟ್​ ಸಂಖ್ಯೆ 10(ಪೂರ್ವ ದ್ವಾರ)
ಜವಾಹರ್​ಲಾಲ್​ ನೆಹರೂ ಸ್ಟೇಡಿಯಂ
ಲೋಧಿ ರಸ್ತೆ
ನವದೆಹಲಿ-110003
Deputy Director (Pers.)
Sports Authority of India
Head Office, Gate No.10 (East Gate)
Jawaharlal Nehru Stadium
Lodhi Road, New Delhi – 110003

Indian Army Recruitment 2022: 10ನೇ ತರಗತಿಯಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗವಕಾಶ

 ಕ್ರೀಡಾ ಕೋಟದಲ್ಲಿ ಹೆಡ್‌ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ  (Central Industrial Security Force-CISF) ಖಾಲಿ ಇರುವ ಹೆಡ್‌ ಕಾನ್ಸ್ಟೇಬಲ್  ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ.  ಹೆಚ್ಚಿನ ಮಾಹಿತಿಗೆ  https://www.cisf.gov.in/cisfeng/  ಗೆ  ಭೇಟಿ ನೀಡಿ. ಕ್ರೀಡಾ ಕೋಟದ ಆಧಾರದಲ್ಲಿ ಒಟ್ಟು 249 ಹೆಡ್‌ ಕಾನ್ಸ್ಟೇಬಲ್ (Head Constable)  ಹುದ್ದೆ ಖಾಲಿ ಇದ್ದು, ಈ 249 ಹೆಡ್‌ ಕಾನ್ಸ್ಟೇಬಲ್ ಹುದ್ದೆಗಳಲ್ಲಿ  68 ಮಹಿಳಾ ಅಭ್ಯರ್ಥಿಗಳಿಗೆ ಮತ್ತು 181 ಪುರುಷ ಅಭ್ಯರ್ಥಿಗಳಿಗೆ ಹುದ್ದೆಗಳನ್ನು  ಮೀಸಲಿಡಲಾಗಿದೆ.

 

click me!