ಭಾರತೀಯ ಕ್ರೀಡಾ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 4 ಹುದ್ದೆಗಳ ಭರ್ತಿಗೆ ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನವಾಗಿದೆ.
ಬೆಂಗಳೂರು (ಮಾ.17): ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority of India - SAI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಕನ್ಸಲ್ಟೆಂಟ್ (Junior Consultant), ಯಂಗ್ ಪ್ರೊಫೆಷನಲ್ (Young Professional) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಮೇಲ್ (email) ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ sportsauthorityofindia.nic.in ಗೆ ಭೇಟಿ ನೀಡಲು ಕೋರಲಾಗಿದೆ. ಅರ್ಜಿ ಸಲ್ಲಿಸಬೇಕಾದ email ವಿಳಾಸ: jobs.saibangalore@gmail.com
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಯಾವುದೇ ವಿಭಾಗದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ MBA/ ಕ್ರೀಡಾ ವಿಭಾಗದ ಡಿಪ್ಲೊಮಾದಲ್ಲಿ ಸ್ನಾತಕೋತ್ತರ ಪದವಿ, LLB / PGDM ವಿದ್ಯಾಭ್ಯಾಸ ಮಾಡಿರಬೇಕು. ಜೊತೆಗೆ ಆಯಾಯ ಕ್ಷೇತ್ರದಲ್ಲಿ 1 ರಿಂದ 5 ವರ್ಷಗಳ ಅನುಭವ ಹೊಂದಿರಬೇಕು.
undefined
ವೇತನ ವಿವರ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40,000 ದಿಂದ ₹1,00,000 ವರೆಗೆ ವೇತನ ದೊರೆಯಲಿದೆ.
Raichur Anganwadi Recruitment 2022: ರಾಯಚೂರು ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ
ಆಯ್ಕೆ ಪ್ರಕ್ರಿಯೆ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೆಲಸದ ಅನುಭವದ ಮೇಲೆ ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುವುದು. ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವಯೋಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 35 ರಿಂದ 55 ವರ್ಷದ ಒಳಗಿರಬೇಕು.
ಉದ್ಯೋಗ ಸ್ಥಳ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕದ ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶವಿದೆ.
NIT Karnataka Recruitment 2022: ಸಮ್ಮರ್ ಇಂಟರ್ನ್‌ಶಿಪ್ ಗೆ NIT ನೇಮಕಾತಿ
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ, ಮಾಸಿಕ 1 ಲಕ್ಷದವರೆಗೆ ವೇತನ: ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 28 ಉಪನಿರ್ದೇಶಕರು ( Deputy Director) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ sportsauthorityofindia.nic.in ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬೇಕು ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣಕ್ಕೆ ಬೇಟಿ ನೀಡಿ, ಅಧಿಸೂಚನೆ ಓದಿಕೊಂಡು ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಕೇಳಿರುವ ಮಾಹಿತಿಯನ್ನು ತುಂಬಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಡೈರೆಕ್ಟರ್
ಭಾರತೀಯ ಕ್ರೀಡಾ ಪ್ರಾಧಿಕಾರ
ಮುಖ್ಯ ಕಚೇರಿ
ಗೇಟ್ ಸಂಖ್ಯೆ 10(ಪೂರ್ವ ದ್ವಾರ)
ಜವಾಹರ್ಲಾಲ್ ನೆಹರೂ ಸ್ಟೇಡಿಯಂ
ಲೋಧಿ ರಸ್ತೆ
ನವದೆಹಲಿ-110003
Deputy Director (Pers.)
Sports Authority of India
Head Office, Gate No.10 (East Gate)
Jawaharlal Nehru Stadium
Lodhi Road, New Delhi – 110003