SSCಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಹಾಕಿ

By Suvarna News  |  First Published Dec 6, 2019, 3:36 PM IST

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಎಚ್‌ಎಸ್‌ಎಲ್‌) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.


ಬೆಂಗಳೂರು, (ಡಿ.06): ಕೆಳ ದರ್ಜೆಯ ಗುಮಾಸ್ತ/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 10,2020 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. 

Tap to resize

Latest Videos

undefined

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

* ಹುದ್ದೆಗಳ ವಿವರ: ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಗೆ 19,900 ರಿಂದ 63,200ರೂ ತಿಂಗಳಿಗೆ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

* ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ (Level-4) ಹುದ್ದೆಗಳಿಗೆ 25,500-81,100 ರು. ಸಂಬಳ ತಿಂಗಳಿಗೆ.
*  ಡಾಟಾ ಎಂಟ್ರಿ ಆಪರೇಟರ್ ಗ್ರೇಡ್-A 25,500-81,100 ರೂ. ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

* ವಿದ್ಯಾರ್ಹತೆ: ದ್ವಿತೀಯ ಪಿಯುಸಿ 

ವಯೋಮಿತಿ: ನೇಮಕಾತಿ ನಿಯಮಾನುಸಾರ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಓಬಿಸಿ,2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. 

ಅರ್ಜಿ ಸಲ್ಲಿಕೆ: ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

ಪರೀಕ್ಷಾ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರು. ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

click me!