ಉದ್ಯೋಗಾಕ್ಷಿಂಗಳಿಗೆ ಗುಡ್‌ನ್ಯೂಸ್: 5846 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By Suvarna News  |  First Published Sep 1, 2020, 2:28 PM IST

ಪೊಲೀಸ್ ವಿಭಾಗದಲ್ಲಿ ಖಾಲಿ ಇರುವ 5846 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.


ನವದೆಹಲಿ, (ಸೆ.01): ಸಿಬ್ಬಂದಿ ನೇಮಕಾತಿ ಆಯೋಗವು 5846 ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 7,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Tap to resize

Latest Videos

 ವಿದ್ಯಾರ್ಹತೆ:  12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

4499 ಹುದ್ದೆಗೆ ಅರ್ಜಿ ಆಹ್ವಾನ: SSLC ಪಾಸಾದವರಿಗೆ ಇದು ಸುವರ್ಣವಕಾಶ

ವಯೋಮಿತಿ: ಜುಲೈ 1,2020ಕ್ಕೆ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ: ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ. ತಿಂಗಳಿಗೆ .

ರಾಷ್ಟ್ರೀಯ ನೇಮಕಾತಿ ಏಜೆನ್ಸಿಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಬೆರಳಚ್ಚು ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. 

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9,2020ರೊಳಗೆ ಪಾವತಿಸಬೇಕಿರುತ್ತದೆ. ಮಹಿಳೆ, ಮಾಜಿ ಸೈನಿಕ, ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅಭ್ಯರ್ಥಿಗಳು ಎಸ್‌ಎಸ್‌ಸಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

click me!