Staff Selection Commission Recruitment 2022: ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ ಪರೀಕ್ಷೆ ಅಧಿಸೂಚನೆ ಪ್ರಕಟ

By Suvarna News  |  First Published Feb 7, 2022, 9:29 PM IST

ಸಿಬ್ಬಂದಿ ನೇಮಕಾತಿ ಆಯೋಗವು  2022ರ  ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸುವ  ಕಂಬೈನ್ಡ್ ಹೈಯರ್ ಸೆಕೆಂಡರಿ  ಲೆವೆಲ್ ಪರೀಕ್ಷೆ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಮಾರ್ಚ್ 07 ರಾತ್ರಿ 11 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.  


ಬೆಂಗಳೂರು(ಫೆ.7): ಸಿಬ್ಬಂದಿ ನೇಮಕಾತಿ ಆಯೋಗವು (Staff Selection Commission -SSC) 2022ರ  ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ  ಕಂಬೈನ್ಡ್ ಹೈಯರ್ ಸೆಕೆಂಡರಿ (10+2 or PUC) ಲೆವೆಲ್ ಪರೀಕ್ಷೆ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆ ಬಗ್ಗೆ ತಿಳಿದುಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಲು ಮಾರ್ಚ್‌ 7, 2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್  https://ssc.nic.in/ ಗೆ ಭೇಟಿ ನೀಡಲು ಕೋರಲಾಗಿದೆ. 2022ರ ಮೇ ನಲ್ಲಿ  ಕಂಬೈನ್ಡ್ ಹೈಯರ್ ಸೆಕೆಂಡರಿ  ಲೆವೆಲ್ ಪರೀಕ್ಷೆ  ನಡೆಯಲಿದೆ.

ಸಿಬ್ಬಂದಿ ನೇಮಕಾತಿ ಆಯೋಗದ ಕೆಳ ವಿಭಾಗದ ಗುಮಾಸ್ತ (lower division clerk -LDC)/ಕಿರಿಯ ಕಾರ್ಯದರ್ಶಿ ಸಹಾಯಕ (junior secretariat assistant -JSA), ಅಂಚೆ ಸಹಾಯಕ (postal assistant)/ಆರಂಭಿಕ ಸಹಾಯಕ (starting assistant) ಮತ್ತು ಡೇಟಾ ಎಂಟ್ರಿ ಆಪರೇಟರ್‌ಗಳ ಹುದ್ದೆಗಳಿಗೆ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 07 ರಾತ್ರಿ 11 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.  ಮಾರ್ಚ್ 08 ರಾತ್ರಿ 11 ಗಂಟೆಯೊಳಗೆ ಶುಲ್ಕ ಪಾವತಿಸಲು ಸಮಯ ನೀಡಲಾಗಿದೆ.  ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಮುಂಬರುವ ಮೇ ತಿಂಗಳಲ್ಲಿ ನಡೆಯಲಿದೆ.

Tap to resize

Latest Videos

undefined

UPSC Indian Forest Service Recruitment 2022: ಐಎಎಸ್‌, ಐಪಿಎಸ್‌, ಐಎಫ್‌ಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ವಿದ್ಯಾರ್ಹತೆ:
ಸಿಬ್ಬಂದಿ ನೇಮಕಾತಿ ಆಯೋಗದಲ್ಲಿನ ಕೆಳ ವಿಭಾಗದ ಗುಮಾಸ್ತ, ಕಿರಿಯ ಕಾರ್ಯದರ್ಶಿ ಸಹಾಯಕ, ಅಂಚೆ ಸಹಾಯಕ, ಆರಂಭಿಕ ಸಹಾಯಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ಸಮಾನ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಡೇಟಾ ಎಂಟ್ರಿ ಆಪರೇಟರ್‌ಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಗಣಿತಶಾಸ್ತ್ರದ ವಿಷಯವಾಗಿ ವಿಜ್ಞಾನ ಸ್ಟ್ರೀಮ್‌ನಲ್ಲಿ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ  ಸಮನಾದ  ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

Bank of Maharashtra Recruitment 2022: ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ ವಿವರ: ಸಿಬ್ಬಂದಿ ನೇಮಕಾತಿ ಆಯೋಗದಲ್ಲಿನ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ. 
ಕೆಳ ವಿಭಾಗದ ಗುಮಾಸ್ತ, ಕಿರಿಯ ಕಾರ್ಯದರ್ಶಿ ಸಹಾಯಕ, ಅಂಚೆ ಸಹಾಯಕ, ಆರಂಭಿಕ ಸಹಾಯಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 19,900 ರಿಂದ ರೂ 63,200 ವೇತನ ದೊರೆಯಲಿದೆ.
ಡೇಟಾ ಎಂಟ್ರಿ ಆಪರೇಟರ್ (data entry operator) ಹುದ್ದೆಗೆ 25,500 ರೂ ನಿಂದ 92,300 ರೂ ವೇತನ ದೊರೆಯಲಿದೆ.  ಡೇಟಾ ಎಂಟ್ರಿ ಆಪರೇಟರ್, ಗ್ರೇಡ್ 'ಎ' ರೂ 25,500  ರಿಂದ ರೂ 81,100 ದೊರೆಯಲಿದೆ.

ESIC Recruitment 2022: ಒಟ್ಟು 3847 ಹುದ್ದೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನ

ಅರ್ಜಿ ಶುಲ್ಕ ಮತ್ತು ವಯೋಮತಿ: ಸಿಬ್ಬಂದಿ ನೇಮಕಾತಿ ಆಯೋಗದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  100 ರೂ ಅರ್ಜಿ ಶುಲ್ಕ ಪಾವತಿಸಬೇಕು ಮತ್ತು ಅಭ್ಯರ್ಥಿಗಳಿಗೆ ಕನಿಷ್ಟ 18ವರ್ಷ ಮತ್ತು ಗರಿಷ್ಠ 27 ವರ್ಷ ವಯಸ್ಸಾಗಿರಬೇಕು.

click me!