ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಫೆ13): ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ (Telecommunications Consultants India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ (Technician Apprentice Trainee) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ dot.gov.in ಗೆ ಅಥವಾ https://tcilindia.com/ಗೆ ಭೇಟಿ ನೀಡಬಹುದು.
ಒಟ್ಟು 6 ಹುದ್ದೆಗಳ ಮಾಹಿತಿ:
ಆರ್ಕಿಟೆಕ್ಚರ್ (Architecture) -01
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ (Electrical Engineering) -01
ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಇಂಜಿನಿಯರಿಂಗ್ (Electronics & Communication Engineering)- 01
ಮಾಹಿತಿ ತಂತ್ರಜ್ಞಾನ (Information Technology) -01
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (Computer Science & Engineering) -01
ಸಿವಿಲ್ ಇಂಜಿನಿಯರಿಂಗ್ (Civil Engineering) - 01
undefined
ಶೈಕ್ಷಣಿಕ ವಿದ್ಯಾರ್ಹತೆ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು.
KSP ET PST EXAM POSTPONED: ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ET, PST ಪರೀಕ್ಷೆ ಮುಂದೂಡಿಕೆ
ವಯೋಮಿತಿ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 28 ವಯಸ್ಸಿನವರಾಗಿರಬೇಕು. SC/ST/OBC ಅಭ್ಯರ್ಥಿಗಳೀಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಟೆಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
GKVK Bangalore Recruitment 2022: ಅಸಿಸ್ಟೆಂಟ್ ಪ್ರೊಫೆಸರ್ ಸೇರಿ ಒಟ್ಟು 19 ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8000 ರೂ ಸ್ಟೈಪೆಂಡ್ ನೀಡಲಾಗುವುದು.
ಉದ್ಯೋಗ ಸ್ಥಳ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.
NPCIL Recruitment 2022: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ನರ್ಸ್ ಸೇರಿ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಬೇಕಾದ ವಿಳಾಸ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲಿಗೆ http://www.mhrdnats.gov.in/ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. https://tcilindia.com/ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ಬಳಿಕ ಅಗತ್ಯ ದಾಖಲಾತಿಗಳೊಂದಿಗೆ ಫೆ.15ಕ್ಕೆ ಮೊದಲು tcilapprentice2021@gmail.com ಈ ಮೇಲ್ ಮಾಡಬೇಕು.