TFRI Recruitment 2022: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ

By Suvarna News  |  First Published Feb 26, 2022, 9:01 PM IST

ಉಷ್ಣವಲಯದ ಅರಣ್ಯ ಸಂಶೋಧನಾ ಸಂಸ್ಥೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 5ರೊಳಗೆ ಅರ್ಜಿ ಸಲ್ಲಿಸಬೇಕು.


ಬೆಂಗಳೂರು(ಫೆ.26): ಉಷ್ಣವಲಯದ ಅರಣ್ಯ ಸಂಶೋಧನಾ ಸಂಸ್ಥೆ (Tropical Forest Research Institute-TFRI) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಸ್ಟೆನೋಗ್ರಾಫರ್, ತಾಂತ್ರಿಕ, ಸಹಾಯಕ, ತಂತ್ರಜ್ಞ ಸೇರಿ ವಿವಿಧ 42  ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 5ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆಯ  tfri.icfre.gov.in ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 42 ಹುದ್ದೆಗಳ ಮಾಹಿತಿ ಇಂತಿದೆ
ಸ್ಟೆನೋಗ್ರಾಫರ್ (Stenographer ) – 9 ಹುದ್ದೆಗಳು
ತಾಂತ್ರಿಕ ಸಹಾಯಕ (Technical Assistant ) – 2 ಹುದ್ದೆಗಳು
LDC (Lower Division Clerk) – 9 ಹುದ್ದೆಗಳು
ತಂತ್ರಜ್ಞ  (Technician) – 3 ಹುದ್ದೆಗಳು
ಫಾರೆಸ್ಟ್ ಗಾರ್ಡ್ (Forest Guard) – 3 ಹುದ್ದೆಗಳು
MTS (Multi Tasking Staff) – 16 ಹುದ್ದೆಗಳು

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಉಷ್ಣವಲಯದ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  10ನೇ ತರಗತಿ ಪಾಸಾಗಿರಬೇಕು. ಜೊತೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ITI, ಡಿಪ್ಲೊಮಾ ಪಾಸಾಗಿರಬೇಕು.

ONGC DIRECTOR RECRUITMENT 2022: ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಿದ ಒಎನ್‌ಜಿಸಿ

ವಯೋಮಿತಿ: ಉಷ್ಣವಲಯದ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ವರ್ಷದಿಂದ 30 ವರ್ಷದೊಳಗೆ ಇರಬೇಕು. OBC ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷ, SC-ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಉಷ್ಣವಲಯದ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಟ್ರೇಡ್ ಟೆಸ್ಟ್​ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಉಷ್ಣವಲಯದ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 1300 ರೂ. ಮತ್ತು SC/ST/ಮಹಿಳೆಯರು/ ಮಾಜಿ ಸೈನಿಕರಿಗೆ 800 ರೂ. ಅರ್ಜಿ ಶುಲ್ಕ ಪಾವತಿಸಬೇಕು.

Indian Army Recruitment 2022: 10ನೇ ತರಗತಿಯಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗವಕಾಶ 

ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಿದ ಒಎನ್‌ಜಿಸಿ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ (Oil and Natural Gas Corporation Limited-ONGC) ಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿಯ ಅಧಿಸೂಚನೆಯಂತೆ ಹಲವಾರು ಮಾನವ ಸಂಪನ್ಮೂಲ ನಿರ್ದೇಶಕ (Director Human Resources) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್‌ಲೈನ್ ಎರಡೂ ಪ್ರಕಾರವಾಗಿ ಕೂಡ ಅರ್ಜಿ ಸಲ್ಲಿಸಬಹುದು. ಈ ಹುದ್ದಗೆ ಅರ್ಜಿ ಸಲ್ಲಿಸಲು ಮೇ 5, 2022ರವೆಗೂ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖೆ ಅಧಿಕೃತ ವೆಬ್‌ತಾಣ ongcindia.com ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೋಮಾ, ಪದವಿ, ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅನುಭವ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಪ್ರತಿಷ್ಠಿತ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ/ ಸಿಬ್ಬಂದಿ ನಿರ್ವಹಣೆ/ ಕೈಗಾರಿಕಾ ಸಂಬಂಧಗಳ ವಿವಿಧ ವಿಷಯಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಕನಿಷ್ಠ ಐದು ವರ್ಷಗಳ  ಅನುಭವವನ್ನು ಹೊಂದಿರಬೇಕು.

click me!