UIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

By Suvarna News  |  First Published Mar 15, 2022, 1:25 PM IST

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.    ಒಟ್ಟು 27 ಹುದ್ದೆಗಳು ಖಾಲಿ ಇದ್ದು, ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನವಾಗಿದೆ. 


ಬೆಂಗಳೂರು(ಮಾ.15):  ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (Unique Identification Authority of India - UIDAI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.   ಸೆಕ್ಷನ್ ಆಫೀಸರ್, ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಸೇರಿ ಒಟ್ಟು 27 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಮಾರ್ಚ್   ಆಫ್​ಲೈನ್ (Offline) ಮೂಲಕ ​ ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮತ್ತು  ಅರ್ಜಿ ನಮೂನೆಗೆ ಅಧಿಕೃತ ವೆಬ್‌ಸೈಟ್ uidai.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಒಟ್ಟು 27 ಹುದ್ದೆಗಳ ಮಾಹಿತಿ ಇಂತಿದೆ
ಸಹಾಯಕ ನಿರ್ದೇಶಕ (Assistant Directo): 1 ಹುದ್ದೆ
ಕಿರಿಯ ಭಾಷಾಂತರ ಅಧಿಕಾರಿ (Junior Translation Officer): 1 ಹುದ್ದೆ
ಸಹಾಯಕ ವಿಭಾಗಾಧಿಕಾರಿ (Assistant Section Officer) 9: ಹುದ್ದೆಗಳು
ಸಹಾಯಕ ಖಾತೆ ಅಧಿಕಾರಿ (Assistant Account Officer):2 ಹುದ್ದೆಗಳು
ಖಾಸಗಿ ಕಾರ್ಯದರ್ಶಿ (Private Secretary): 7 ಹುದ್ದೆಗಳು
ಸೆಕ್ಷನ್ ಆಫೀಸರ್ (Section Officer):3 ಹುದ್ದೆಗಳು
ಉಪನಿರ್ದೇಶಕರು (Deputy Director    ) : 3 ಹುದ್ದೆಗಳು
ಲೆಕ್ಕಪರಿಶೋಧಕ (Accountant): 1 ಹುದ್ದೆ

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಸಾರವಾಗಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಪದವಿ, CA/ ICWA/MBA ವಿದ್ಯಾರ್ಹತೆ ಪಡೆದಿರಬೇಕು.

UPSC RECRUITMENT 2022: ಉಪನ್ಯಾಸಕ ಸೇರಿ ವಿವಿಧ ಹುದ್ದೆಗಳಿಗೆ ಯುಪಿಎಸ್‌ಸಿ ನೇಮಕಾತಿ

ಆಯ್ಕೆ ಪ್ರಕ್ರಿಯೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣದಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಸೂಕ್ತ ದಾಖಲೆಗಳೊಂದಿಗೆ 
ಸಹಾಯಕ ನಿರ್ದೇಶಕ ಜನರಲ್ (HR),
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ಪ್ರಾದೇಶಿಕ ಕಚೇರಿ (UIDAI)
ಬಾಂಗ್ಲಾ ಸಾಹೀಬ್ ರೋಡ್ ಕಾಳಿ ಮಂದಿರದ ಹಿಂದೆ
ಗೋಲೆ ಮಾರ್ಕೆಟ್ , ನವದೆಹಲಿ.

Indian Navy Recruitment 2022: ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ ಹುದ್ದೆಗೆ ನೌಕಾಸೇನೆ ನೇಮಕಾತಿ 

ನರ್ಸಿಂಗ್ ಟ್ಯೂಟರ್ ಹುದ್ದೆಗೆ ಬಿಇಸಿಐಎಲ್‌ ನೇಮಕಾತಿ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (Broadcast Engineering Consultants India Limited) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.  ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ನರ್ಸಿಂಗ್ ಟ್ಯೂಟರ್ (Nursing Tutor)  ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.becil.com ಆಸಕ್ತರು ಭೇಟಿ ನೀಡಬಹುದು. 

ಶೈಕ್ಷಣಿಕ ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  ಬಿಎಸ್‌ಸಿ, ಡಿಪ್ಲೊಮಾ,  ಸಿಸ್ಟರ್ ಟ್ಯೂಟರ್ ಕೋರ್ಸ್‌ ಮಾಡಿರಬೇಕು.  ಸ್ಟಾಫ್ ನರ್ಸ್  ಅಥವಾ ಹೋಮ್ ಸಿಸ್ಟರ್ ಆಗಿ  ಐದು ವರ್ಷಗಳ ಪ್ರಾಯೋಗಿಕ ಅನುಭವ ಹೊಂದಿರಬೇಕು.

ವಯೋಮಿತಿ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30.  ಸರಕಾರದ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

click me!