UPSC ನೇಮಕಾತಿ: ಕೇಂದ್ರ ಗೃಹ ಇಲಾಖೆಯ ವಿವಿಧ ಹುದ್ದೆಗಳಿಗೆ ಆರ್ಜಿ ಆಹ್ವಾನ

By Suvarna NewsFirst Published Sep 15, 2021, 6:15 PM IST
Highlights

ಕೇಂದ್ರ ಗೃಹ ಇಲಾಖೆಯಲ್ಲಿ ಖಾಲಿ ಇರುವ ಉಪ ಕೇಂದ್ರ ಗುಪ್ತಚರ ಅಧಿಕಾರಿಗಳ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆನ್ನು ಆರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

ಯುಪಿಎಸ್‌ಸಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಉಪ ಕೇಂದ್ರ ಗುಪ್ತಚರ ಅಧಿಕಾರಿಗಳ (ತಾಂತ್ರಿಕ) ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಷನ್ ಬಿಡುಗಡೆ ಮಾಡಿದೆ. ಆನ್‌ಲೈನ್ ಅಪ್ಲಿಕೇಶನ್ ಲಿಂಕ್, ಶೈಕ್ಷಣಿಕ ಅರ್ಹತೆ, ಅನುಭವ, ಆಯ್ಕೆ ಮಾನದಂಡ ಮತ್ತು ಇತರ ವಿವರಗಳನ್ನು upsc.gov.in ನಲ್ಲಿ ಪರಿಶೀಲಿಸಬಹುದು.

ಕೇಂದ್ರ ಲೋಕಸೇವಾ ಆಯೋಗವು ಉಪ ಕೇಂದ್ರ ಗುಪ್ತಚರ ಅಧಿಕಾರಿ, ಸಹಾಯಕ ಪ್ರಾಧ್ಯಾಪಕ, ಹಿರಿಯ ವೈಜ್ಞಾನಿಕ ಅಧಿಕಾರಿ ಗ್ರೇಡ್- II, ಕಿರಿಯ ಸಂಶೋಧನಾ ಅಧಿಕಾರಿ ಮತ್ತು ಸಹಾಯಕ ಎಂಜಿನಿಯರ್/ಸಹಾಯಕ ಸರ್ವೇಯರ್, ಎಂಜಿನಿಯರಿಂಗ್ ಸಹಾಯಕ (ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 

ಭಾರತದಲ್ಲಿ IBM ನೇಮಕಾತಿ: ಫ್ರೆಶರ್ಸ್‌ಗೆ ಅವಕಾಶ

ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ ಕೆಲವು ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. Upsconline.nic.in ನಲ್ಲಿ ಈಗಾಗಲೇ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದ್ದು, 

ಪ್ರಾದೇಶಿಕ ನಿರ್ದೇಶಕ - 1 ಹುದ್ದೆ , ಉಪ ಕೇಂದ್ರ ಗುಪ್ತಚರ ಅಧಿಕಾರಿ (ತಾಂತ್ರಿಕ) (DCIO/Tech)- 10 ಹುದ್ದೆಗಳು, ಸಹಾಯಕ ಪ್ರಾಧ್ಯಾಪಕರು- 8 ಹುದ್ದೆಗಳು, ಹಿರಿಯ ವೈಜ್ಞಾನಿಕ ಅಧಿಕಾರಿ ಗ್ರೇಡ್- II - 3 ಹುದ್ದೆಗಳು, ಕಿರಿಯ ಸಂಶೋಧನಾ ಅಧಿಕಾರಿ- 3 ಹುದ್ದೆಗಳು, ಸಹಾಯಕ ಎಂಜಿನಿಯರ್/ಸಹಾಯಕ ಸರ್ವೇಯರ್ ಆಫ್ ವರ್ಕ್ಸ್/ಎಂಜಿನಿಯರಿಂಗ್ ಅಸಿಸ್ಟೆಂಟ್ (ಸಿವಿಲ್)- 3 ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಇನ್ನು ಪ್ರಾದೇಶಿಕ ನಿರ್ದೇಶಕರ ಹುದ್ದೆ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಮೈಕ್ರೋಬಯಾಲಜಿಯಲ್ಲಿ ಎಂ ಎಸ್ಸಿ ಅಥವಾ ಸಸ್ಯಶಾಸ್ತ್ರದಲ್ಲಿ ಎಂಎಸ್ಸಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಮೈಕಾಲಜಿಯಲ್ಲಿ ಸ್ಪೆಷಲೈಜೇಷನ್ ಅಥವಾ ಎಂ.ಎಸ್ಸಿ, ಮಣ್ಣು ವಿಜ್ಞಾನ ಅಥವಾ ಕೃಷಿ ರಸಾಯನಶಾಸ್ತ್ರ ಅಥವಾ ಕೃಷಿ ವಿಜ್ಞಾನ ಅಥವಾ ಸೂಕ್ಷ್ಮ ಜೀವವಿಜ್ಞಾನ ಅಥವಾ ಸಸ್ಯ ರೋಗಶಾಸ್ತ್ರ ಅಥವಾ ತೋಟಗಾರಿಕೆ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕೃಷಿ ವಿಸ್ತರಣೆಯಲ್ಲಿ ಕೃಷಿ ವಿಜ್ಜಾನ ಪೂರೈಸಿರಬೇಕು. 

HALನಲ್ಲಿ ಅಪ್ರೆಂಟಿಶಿಪ್: ಡಿಪ್ಲೋಮಾ, ಪದವೀಧರರಿಗೆ ಅವಕಾಶ

ಹಾಗೇ ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಟೆಕ್ನಿಕಲ್) (DCIO/Tech)- ಎಲೆಕ್ಟ್ರಾನಿಕ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ಸ್ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ B.Sc ಕಂಪ್ಯೂಟರ್ ಸೈನ್ಸ್ ಅಥವಾ ಕಂಪ್ಯೂಟರ್ ಎಂಜಿನಿಯರಿಂಗ್ ಅಥವಾ ಕಂಪ್ಯೂಟರ್ ಟೆಕ್ನಾಲಜಿ ಅಥವಾ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಅಥವಾ ಮಾಹಿತಿ ತಂತ್ರಜ್ಞಾನ ಅಥವಾ ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್‌ನಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಎಎಂಐಇ),  ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ ಅಥವಾ ಮಾಸ್ಟರ್ ಆಫ್ ಸೈನ್ಸ್ ಇನ್ ಫಿಸಿಕ್ಸ್ ಇನ್ ಎಲೆಕ್ಟ್ರಾನಿಕ್ಸ್ ಅಥವಾ ಟೆಲಿಕಮ್ಯುನಿಕೇಶನ್ ಅಥವಾ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ (ಎಂಸಿಎ) ಪದವಿ ಹೊಂದಿರಬೇಕು.
 

ಹಿರಿಯ ವೈಜ್ಞಾನಿಕ ಅಧಿಕಾರಿ ಗ್ರೇಡ್- II ಹುದ್ದೆಗೆ M.Sc ಭೌತಶಾಸ್ತ್ರ,  ಎಲೆಕ್ಟ್ರಾನಿಕ್ಸ್ ಅಥವಾ ಬಿ.ಇ. / ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಜೂನಿಯರ್ ರಿಸರ್ಚ್ ಆಫೀಸರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಖ್ಯಾಶಾಸ್ತ್ರ ಅಥವಾ ಆಪರೇಷನ್ ರಿಸರ್ಚ್ ಅಥವಾ ಗಣಿತ ಅಥವಾ ಅಪ್ಲೈಡ್ ಸ್ಟಾಟಿಸ್ಟಿಕ್ಸ್ ಅಥವಾ ಅಪ್ಲೈಡ್ ಮ್ಯಾಥಮೆಟಿಕ್ಸ್ ಅಥವಾ ಮ್ಯಾಥಮೆಟಿಕಲ್ ಸ್ಟಾಟಿಸ್ಟಿಕ್ಸ್ ನಲ್ಲಿ ಸ್ನಾತಕೋತ್ತರ ಪದವಿ, ಅರ್ಥಶಾಸ್ತ್ರ ಅಥವಾ ಸಮಾಜಶಾಸ್ತ್ರ ಅಥವಾ ಮನೋವಿಜ್ಞಾನ ಅಥವಾ ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
 

ಸಹಾಯಕ ಎಂಜಿನಿಯರ್/ಸಹಾಯಕ ಸರ್ವೇಯರ್ ಆಫ್ ವರ್ಕ್ಸ್/ಎಂಜಿನಿಯರಿಂಗ್ ಅಸಿಸ್ಟೆಂಟ್ (ಸಿವಿಲ್) ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಆಗಿರಬೇಕು.

ವೆಸ್ಟರ್ನ್‌ ಕೋಲ್ ಫೀಲ್ಡ್‌ನಲ್ಲಿ 965 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾದೇಶಿಕ ನಿರ್ದೇಶಕ ಹುದ್ದೆಗೆ 50 ವರ್ಷ ವಯೋಮಿತಿ, ಉಪ ಕೇಂದ್ರ ಗುಪ್ತಚರ ಅಧಿಕಾರಿ (ತಾಂತ್ರಿಕ) (DCIO/Tech)- 35 ವರ್ಷಗಳು. ಹಿರಿಯ ವೈಜ್ಞಾನಿಕ ಅಧಿಕಾರಿ ಗ್ರೇಡ್- II - 35 ವರ್ಷಗಳು, ಜೂನಿಯರ್ ರಿಸರ್ಚ್ ಆಫೀಸರ್, ಅಸಿಸ್ಟೆಂಟ್ ಇಂಜಿನಿಯರ್/ಅಸಿಸ್ಟೆಂಟ್ ಸರ್ವೇಯರ್ ಆಫ್ ವರ್ಕ್ಸ್/ಇಂಜಿನಿಯರಿಂಗ್ ಅಸಿಸ್ಟೆಂಟ್ (ಸಿವಿಲ್)- 30 ವರ್ಷ ಗರಿಷ್ಟ ವಯೋಮಿತಿ ಇರಲಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೋಡ್ ಮೂಲಕ 30 ಸೆಪ್ಟೆಂಬರ್ ಒಳಗೆ ಅರ್ಜಿ ಸಲ್ಲಿಸಬಹುದು.

click me!