UPSC 2022: ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

By Girish Goudar  |  First Published Dec 6, 2022, 11:59 PM IST

2022 ರ ಸಿವಿಲ್ ಸರ್ವೀಸಸ್ (ಮುಖ್ಯ) ಪರೀಕ್ಷೆಯ ಫಲಿತಾಂಶವನ್ನ ಪ್ರಕಟಿಸಿದ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 


ನವದೆಹಲಿ(ಡಿ.07): 2022 ರ ಸಿವಿಲ್ ಸರ್ವೀಸಸ್ (ಮುಖ್ಯ) ಪರೀಕ್ಷೆಯ ಫಲಿತಾಂಶವನ್ನ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಇಂದು(ಮಂಗಳವಾರ) ಪ್ರಕಟಿಸಿದೆ.

ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಇತರರನ್ನು ಆಯ್ಕೆ ಮಾಡಲು ನಾಗರಿಕ ಸೇವೆಗಳ ಪರೀಕ್ಷೆಯನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತದೆ. 

Tap to resize

Latest Videos

undefined

ವೀಲ್ ಚೇರ್ ನಲ್ಲಿ ಕುಳಿತು UPSC ಪರೀಕ್ಷೆಯಲ್ಲಿ ಸಾಧನೆ ಮಾಡಿದ ಇಸ್ರೋ ವಿಜ್ಞಾನಿ!

ಮುಖ್ಯ ಪರೀಕ್ಷೆ ಸೆಪ್ಟೆಂಬರ್ 16 ರಿಂದ ಸೆಪ್ಟೆಂಬರ್ 25 ರವರೆಗೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌(www.Upsc.Gov.In) ನಲ್ಲಿ ಪರಿಶೀಲಿಸಬಹುದಾಗಿದೆ. ಅರ್ಹತೆ ಪಡೆದವರನ್ನು ಸಂದರ್ಶನ/ವ್ಯಕ್ತಿತ್ವ ಪರೀಕ್ಷೆಗೆ ಶಾರ್ಟ್‌ಲಿಸ್ಟ್‌ ಮಾಡಲಾಗುತ್ತದೆ. ಸಂದರ್ಶನ 275 ಅಂಕಗಳನ್ನು ಒಳಗೊಂಡಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರಿಯಾದ ಸಮಯದಲ್ಲಿ ವ್ಯಕ್ತಿತ್ವ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು. 
 

click me!