ಕೇಂದ್ರ ಲೋಕಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಹಾಕಿ

By Suvarna NewsFirst Published Aug 17, 2021, 4:08 PM IST
Highlights

* ಕೇಂದ್ರ ಲೋಕಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
* ಪ್ರಿನ್ಸಿಪಾಲ್, ಉಪ ನಿರ್ದೇಶಕ ಹಾಗೂ ಸಹಾಯಕ ಸೇರಿದಂತೆ ಒಟ್ಟು 155  ಹುದ್ದೆಗಳ ನೇಮಕಾತಿ
* ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಹಾಕಬಹುದು

ನವದೆಹಲಿ, (ಆ.16): ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) 2021-22ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಪ್ರಿನ್ಸಿಪಾಲ್, ಉಪ ನಿರ್ದೇಶಕ ಹಾಗೂ ಸಹಾಯಕ ಸೇರಿದಂತೆ ಒಟ್ಟು 155  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸೆಪ್ಟೆಂಬರ್ 02, 2021ರೊಳಗೆ ಅರ್ಜಿ ಸಲ್ಲಿಸಬಹುದು.

UPSC: 10 ಸಲ ರೇಪ್ ಆದ್ರೂ ಸಾಕ್ಷಿ ಇಲ್ಲ, ಆರೋಪಿಯನ್ನು ಗುಂಡಿಟ್ಟು ಕೊಲ್ತೀರಾ? ಹೀಗಿತ್ತು ಉತ್ತರ!

* ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ. ಐಎಂಎ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯ ಹುದ್ದೆಗಳಿಗೆ ಪದವಿ ಪಡೆದಿರಬೇಕು.

ಭಾರತೀಯ ನೌಕಾಪಡೆ ಅಕಾಡೆಮಿಯ ಹುದ್ದೆಗಳಿಗೆಇಂಜಿನಿಯರಿಂಗ್ ಪದವಿ ಪಡೆದಿರಬೇಕು. ವಾಯುಪಡೆ ಅಕಾಡೆಮಿ ಹುದ್ದೆಗಳಿಗೆ ಆಯ್ಕೆಯಾಗಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿರಬೇಕು ಹಾಗೂ 10+2ರಲ್ಲಿ ಭೌತಶಾಸ್ತ್ರ ಹಾಗೂ ಗಣಿತ ವಿಷಯ ವ್ಯಾಸಂಗ ಮಾಡಿರತಕ್ಕದ್ದು.

ಕೋಚಿಂಗ್ ಗೆ ಲಕ್ಷಗಟ್ಟಲೇ ಖರ್ಚು ಮಾಡದೇ UPSC ಪಾಸ್ ಆಗಲು ಇಲ್ಲಿದೆ ಉತ್ತಮ ಸಲಹೆಗಳು

* ವಯೋಮಿತಿ: ಕನಿಷ್ಠ ವಯೋಮಿತಿ: 35 ವರ್ಷ ಗರಿಷ್ಠ ವಯೋಮಿತಿ: 50 ವರ್ಷ.  ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC, ST, ಮಾಜಿ ಯೋಧ ಅಭ್ಯರ್ಥಿಗಳಿಗೆ 5 ವರ್ಷಗಳ ತನಕ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

* ಅರ್ಜಿಶುಲ್ಕ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 200 ರು. ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆಯರಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
 

click me!