ಭಾರತೀಯ ರೈಲ್ವೆಯ ನೈಋತ್ಯ ವಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಗಳ ವಿವರವನ್ನು ತಿಳಿಯಲು ಮುಂದೆ ಓದಿ.
ಬೆಂಗಳೂರು,(ಜ.19): ಭಾರತೀಯ ರೈಲ್ವೆಯ ನೈಋತ್ಯ ವಲಯದಲ್ಲಿ ಖಾಲಿ ಇರುವ 81 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ.
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಅಭ್ಯರ್ಥಿಗಳು ಫೆಬ್ರವರಿ 1.2019 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
undefined
ರೈಲ್ವೇ ಇಲಾಖೆಯಲ್ಲಿ 14033 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಈ ಹುದ್ದೆಗಳಿಗೆ ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕುರಿತಂತೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.
ವಿವಿಧ ಹುದ್ದೆಗಳ ನೇಮಕಾತಿಗೆ UPSC ಅರ್ಜಿ ಆಹ್ವಾನ
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 24 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿ ಯನ್ನು ಸಲ್ಲಿಸಬಹುದು.
ವೇತನ ಶ್ರೇಣಿ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000 ರಿಂದ 37,000 ರೂ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ಶುಲ್ಕ 100/- ರೂ ಮತ್ತು SC/ST/PH ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಈ ಹುದ್ದೆಗಳ ಇನ್ನಷ್ಟು ಮಾಹಿತಿಗಾಗಿ ಇಲ್ಲಿ