ಸಂಬಂಧಿಕರ ಮನೆಯಿಂದ ಮರಳುವಾಗ ಮಹಿಳೆಗೆ ಮುಳುವಾದ ಸೀರೆ, ಕ್ಷಣಾರ್ಧದಲ್ಲೇ ಹೋಯ್ತು ಪ್ರಾಣ

Published : Apr 07, 2026, 10:37 PM IST
Saree

ಸಾರಾಂಶ

ಸಂಬಂಧಿಕರ ಮನೆಯಿಂದ ಮರಳುವಾಗ ಮಹಿಳೆಗೆ ಮುಳುವಾದ ಸೀರೆ, ಕ್ಷಣಾರ್ಧದಲ್ಲೇ ಹೋಯ್ತು ಪ್ರಾಣ, ಕಾರ್ಯಕ್ರಮ ಮುಗಿಸಿ ಸಂಭ್ರಮದಲ್ಲಿದ್ದ ಮಹಿಳೆಗೆ ಈಕೆಯ ಸೀರೆಯೇ ಪ್ರಾಣಕ್ಕೆ ಕುತ್ತು ತಂದಿದೆ. 

ಚಾಮರಾಜನಗರ (ಏ.07) ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಪ್ರಮುಖವಾಗಿ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಅತೀವ ಕಾಳಜಿ ಅತ್ಯಗತ್ಯ. ಟ್ರಾಫಿಕ್ ನಿಯಮ ಪಾಲನೆ ಜೊತೆಗೆ ಕೆಲ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಬೇಕು. ಹೀಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯ ಸೀರೆ ಸೆರಗು ಹಿಂಬದಿ ಚಕ್ರಕ್ಕೆ ಸಿಲುಕಿದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದಿದ್ದಾಳೆ. ಬೈಕ್ ಹಿಂದೆಯೇ ಇದ್ದ ಟ್ರಕ್ ಮಹಿಳೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ನಡೆದಿದೆ.

ಮೃತ ಮಹಿಳೆಯನ್ನು ಶಿವಮ್ಮ ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಗೆ ತೆರಳಿ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಶಿವಮ್ಮ ತನ್ನ ಸೀರೆ ಸೆರಗಿನ ಕುರಿತು ಹೆಚ್ಚಿನ ಗಮನ ಕೊಟ್ಟಿಲ್ಲ. ಇತ್ತ ಬೈಕ್ ರೈಡ್ ಮಾಡುತ್ತಿದ್ದ ವ್ಯಕ್ತಿ ಕೂಡ ಗಮನಿಸಲಿಲ್ಲ. ಪರಿಣಾಮ ದುರಂತ ನಡೆದು ಹೋಗಿದೆ. ಸೀರೆ ಸೆರೆಗು ಚಕ್ರಕ್ಕೆ ಸಿಲುಕಿದ ಪರಿಣಾಮ ಶಿವಮ್ಮ ಚಲಿಸುತ್ತಿದ್ದ ಬೈಕ್‌ನಿಂದ ರಸ್ತೆ ಮೇಲೆ ಬಿದ್ದಿದ್ದಾರೆ. ಕ್ಷಣಾರ್ಧದಲ್ಲಿ ಟ್ರಕ್ ಹರಿದಿದಿದೆ. ಬೋಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್ ಕಾರು ನಡುವೆ ಡಿಕ್ಕಿ

ಇಂದು ಬೆಳಗ್ಗೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಂಗಳ ಮಾರ್ಗದ ಬಸವಪುರ ಬಳಿ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಕಾರು ಜಖಂಗೊಂಡಿತ್ತು. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಲೋಡ್ ಹೊತ್ತು ತಮಿಳುನಾಡಿನತ್ತ ಸಾಗುತ್ತಿದ್ದ ಟಿಪ್ಪರ್‌ಗೆ ವಿರುದ್ದ ದಿಕ್ಕಿನಲ್ಲಿ ಕಾರು ಬಂದು ಅಪಘಾತ ಸಂಭವಿಸಿತ್ತು. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸ್ಥಳದಲ್ಲೇ ತಂದೆ ಮಗಳ ದುರ್ಮರಣ

ಕಲಬುರಗಿ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ತಂದೆ ಹಾಗೂ ಮಗಳು ಮೃತಪಟ್ಟಿದ್ದಾರೆ. ತಂದೆ ಹಾಗೂ ಮಗಳು ಸಂಚರಿಸುತ್ತಿದ್ದ ಬೈಕ್‌ಗೆ ಟ್ಯಾಂಕರ್ ಡಿಕ್ಕಿಯಾಗಿ ದುರಂತ ನಡೆದಿದೆ. ಅಪಘಾತದಲ್ಲಿ ತಂದೆ ರಾಜುಕುಮಾರ್ (45) ಮಗಳು ಸುಮಾ (14) ಸ್ಥಳದಲ್ಲೆ ಸಾವು ಕಂಡಿದ್ದಾರೆ. ಬೈಕ್ ಮೇಲೆ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ ಹೊಡೆದು ಸ್ಥಳದಲ್ಲಿ ಸಾವು ಕಂಡಿದ್ದಾರೆ. ಮೃತರು ನಗರದ ರಾಣೋಜಪೀರ ದರ್ಗಾ ಪ್ರದೇಶದ ನಿವಾಸಿಗಳಾಗಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.

 

PREV
Read more Articles on
click me!

Recommended Stories

ಮಲೆ ಮಹದೇಶ್ವರ ಬೆಟ್ಟದಲ್ಲಿ ನೀರಿನ ಸಂಕಷ್ಟ: ಅರಣ್ಯ ಇಲಾಖೆಯಿಂದ ವನ್ಯಜೀವಿಗಳಿಗೆ ಟ್ಯಾಂಕರ್ ನೀರು
ಚಾಮರಾಜನಗರ: ಪ್ರೀತಿಗೆ ಮನೆಯವರ ವಿರೋಧ; ಒಂದೇ ಹಗ್ಗಕ್ಕೆ ಕೊರಳೊಡ್ಡಿದ ಆದಿವಾಸಿ ಯುವ ಪ್ರೇಮಿಗಳು!