'ಸಿದ್ದರಾಮಯ್ಯನೇ ಮೊದಲ ಅತೃಪ್ತ ಶಾಸಕ': ಸಂಸದ ವಾಗ್ದಾಳಿ

By Kannadaprabha News  |  First Published Nov 5, 2019, 9:44 AM IST

ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಇದೀಗ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನೇ ಮೊದಲ ಅತೃಪ್ತ ಶಾಸಕ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಮನವಿಗಳಿಗೆ ಸ್ಪಂದಿಸುತ್ತಿಲ್ಲ ಎಂದು ಮೊದಲು ಅತೃಪ್ತಿ ವ್ಯಕ್ತಪಡಿಸಿದ್ದೇ ಈ ಸಿದ್ದರಾಮಯ್ಯ ಎಂದು ಆರೋಪಿಸಿದ್ದಾರೆ.


ಚಾಮರಾಜನಗರ(ನ.05): ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಇದೀಗ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನೇ ಮೊದಲ ಅತೃಪ್ತ ಶಾಸಕ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಡಿ ಬೇಡಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಗೆದ್ದುಬಿಟ್ಟು ಇಲ್ಲದ ಆಟ ಆಡ್ತಿದ್ದಾನೆ ಎಂದು ಅವರು ಏಕವಚನದಲ್ಲೆ ವಾಗ್ದಾಳಿ ನಡೆಸಿದರು.

Latest Videos

undefined

ರಾಹುಲ್‌ ಓಡಿ ಹೋಗಿದ್ದಾರೆ:

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಮನವಿಗಳಿಗೆ ಸ್ಪಂದಿಸುತ್ತಿಲ್ಲ ಎಂದು ಮೊದಲು ಅತೃಪ್ತಿ ವ್ಯಕ್ತಪಡಿಸಿದ್ದೇ ಈ ಸಿದ್ದರಾಮಯ್ಯ ಎಂದ ಅವರು, ನಂತರ ಇತರ ಅತೃಪ್ತ ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದಾರೆ. ಕಾಂಗ್ರೆಸ್‌ ಸತ್ತು ಸುಣ್ಣವಾಗಿದೆ. ಆ ಪಕ್ಷದಲ್ಲಿ ಯಾರಿಗೂ ಹೊಂದಾಣಿಕೆ ಇಲ್ಲ. ರಾಹುಲ… ಗಾಂಧಿ ಲೋಕಸಭಾ ಚುನಾವಣೆ ನಂತರ ರಾಜೀನಾಮೆ ನೀಡಿ ಓಡಿ ಹೋಗಿದ್ದಾರೆ ಎಂದು ಪ್ರಸಾದ್‌ ಟೀಕಿಸಿದ್ದಾರೆ.

‘ಬಿಜೆಪಿ ಇದ್ರೆ ದೇಶ ಸರ್ವನಾಶ ಆಗೋದು ಗ್ಯಾರಂಟಿ’

ಐತಿಹಾಸಿಕ ತೀರ್ಪು

ಉಪ ಚುನಾವಣೆ ಬಳಿಕ ಸರ್ಕಾರ ಬೀಳಲಿದೆ, ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಪ್ರತಿಪಕ್ಷಗಳ ಮಾತಿನಲ್ಲಿ ಹುರುಳಿಲ್ಲ. ಮಧ್ಯಂತರ ಚುನಾವಣೆ ಎಂಬುದು ಕನಸು. ಕರ್ನಾಟಕದ ಅನರ್ಹ ಶಾಸಕರ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗಂಭೀರವಾಗಿ ಪರಿಗಣಿಸಿದ್ದು, ಐತಿಹಾಸಿಕ ತೀರ್ಪು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್‌ವೈ ಮಾತನಾಡಿರೋದಲ್ಲಿ ತಪ್ಪಿಲ್ಲ:

ವೈರಲ್ ಆಗಿರುವ ಆಡಿಯೋದಲ್ಲಿ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪರ ಸಂಸದ ಪ್ರಸಾದ್‌ ಬ್ಯಾಟಿಂಗ್‌ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಪಾಲ್ಗೊಳ್ಳುವ ಮುನ್ನ ಆಡಿಯೋ ವೈರಲ್ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅತೃಪ್ತ ಶಾಸಕರ ಬಗ್ಗೆ ಯಡಿಯೂರಪ್ಪ ಮಾತನಾಡಿರುವುದರಲ್ಲಿ ತಪ್ಪೇನು ಇಲ್ಲ. ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಾಧ್ಯವಾಯ್ತು. ಈ ವಿಷಯವನ್ನು ಹೇಳಿರುವುದರಲ್ಲಿ ತಪ್ಪೇನಿದೆ. ಕೋರ್‌ ಕಮಿಟಿ ಸಭೆ ಯಲ್ಲಿ ಮುಖ್ಯಮಂತ್ರಿ ಆದವರು ಪಕ್ಷದ ಆಂತರಿಕ ವಿಷಯಗಳನ್ನು ತಿಳಿಸಬೇಕಾಗುತ್ತದೆ. ಆ ಸಭೆಯಲ್ಲಿ ಯಡಿಯೂರಪ್ಪ ಮುಕ್ತವಾಗಿ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ಬರಲು ಯಾರು ಕಾರಣ ಎಂದು ಮುಕ್ತವಾಗಿ ಹೇಳಿದ್ದಾರೆ ಇದರಲ್ಲಿ ತಪ್ಪೇನಿದೆ ಎಂದು ಪ್ರಸಾದ್‌ ಪ್ರಶ್ನಿಸಿದ್ದಾರೆ.

ಸುಮ್ಮನಹಳ್ಳಿ ಮೇಲ್ಸೇತುವೆ ಗುಂಡಿ ಪರಿಶೀಲನೆಗೆ ಡ್ರೋನ್‌

ಆಡಿಯೋ ಕುರಿತು ಅಸಲಿಯೋ ನಕಲಿಯೋ ಎಂದು ಜಿಜ್ಞಾಸೆಯಿದೆ. ಒಂದು ವೇಳೆ ಅವರು ಮಾತನಾಡಿದರೂ ತಪ್ಪೇನಿಲ್ಲ. ಯಾರಿಂದ ಸರ್ಕಾರ ರಚಿಸಿದ್ದೇವೆ ಎಂದು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾಗೂ ಅತೃಪ್ತ ಶಾಸಕರ ರಾಜೀನಾಮೆಗೂ ಸಂಬಂಧವಿಲ್ಲ ಎಂದು ಅವರು ಇದೇ ವೇಳೆ ಅವರು ಸ್ವಷ್ಟಪಡಿಸಿdfdAre.

click me!