ಅನರ್ಹ ಶಾಸಕ ಸುಧಾಕರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಿಕ್ಕಬಳ್ಳಾಪುರದಲ್ಲಿ ಹಾಡಿ ಹೊಗಳಿದ್ದಾರೆ. ಹಾಗೆಯೇ ಬಿಜೆಪಿ ರಾಜಕಾರಣದ ಕಾರ್ಯವೈಖರಿಯ ಬಗ್ಗೆ ಮಾತನಾಡಿ, ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ .
ಚಿಕ್ಕಬಳ್ಳಾಪುರ(ನ.06): ಅನರ್ಹ ಶಾಸಕ ಸುಧಾಕರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಿಕ್ಕಬಳ್ಳಾಪುರದಲ್ಲಿ ಹಾಡಿ ಹೊಗಳಿದ್ದಾರೆ. ಹಾಗೆಯೇ ಬಿಜೆಪಿ ರಾಜಕಾರಣದ ಕಾರ್ಯವೈಖರಿಯ ಬಗ್ಗೆ ಮಾತನಾಡಿ, ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ .
ಚಿಕ್ಕಬಳ್ಳಾಪುರದಲ್ಲಿ ನಡೆದ ಸಿಎಂ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ಪ್ರಧಾನಿ ಮೋದಿ ರೈತರು,ಬಡವರು, ದಲಿತರ ಬಗ್ಗೆ ಕಾಳಜಿಉಳ್ಳವರು. ಆರ್ ಸಿಇಪಿ ಒಪ್ಪಂದಕ್ಕೆ ಸಹಿಹಾಕಲ್ಲ ಎಂದು ಮೋದಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಅರ್ಥವಾಗಲ್ವ ಎಂದು ಪ್ರಶ್ನಿಸಿದ್ದಾರೆ.
ಎಲ್ಲ ಸಿಎಂಗಳ ಕಾಲದಲ್ಲೂ ಫೋನ್ ಕದ್ದಾಲಿಕೆ ಆಗಿದೆ ಎಂದ ಮಾಜಿ ಶಾಸಕ
ರೈತರ ಕಷ್ಟ ಅರ್ಥ ವಾಗದವರು 350 ರಿಂದ 44 ಗೆ ಬಂದಿದ್ದಾರೆ. ರೈತರನ್ನು ಅರ್ಥಮಾಡಿಕೊಂಡವರು 2 ರಿಂದ 303 ಸ್ಥಾನಗಳಿಗೆ ಬಂದಿದ್ದಾರೆ. ಅಂಬೇಡ್ಕರ್ ಅವರನ್ನು ಮೋದಿ ಆದರ್ಶವಾಗಿಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ದಲಿತರನ್ನು ವೋಟ್ ಬ್ಯಾಂಕ್ ಆಗಿ ಇಟ್ಟುಕೊಂಡಿದೆ. ಧರ್ಮ, ಜಾತಿಗಳನ್ನು ಎತ್ತುಕಟ್ಟುವುದು ಒಳ್ಳೆಯದಲ್ಲ ಎಂದು ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.
ಕ್ಷೇತ್ರಕ್ಕೆ ಅರ್ಧ ಆಸ್ತಿ ಬರೆದುಕೊಡ್ತೀನಿ, ನೀವ್ ಕೊಡ್ತೀರಾ: ಅನರ್ಹ ಶಾಸಕ ಸವಾಲು