ಕೊನೆಗೂ ಶಂಕರ್ ನಾಗ್ ಕನಸು ನನಸು ಮಾಡಿದ ಸಿಎಂ: ₹93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್‌ ವೇ!

By Kannadaprabha News  |  First Published Mar 27, 2023, 10:30 PM IST

ಬಹುದಿನಗಳ ಬೇಡಿಕೆಯಾಗಿದ್ದ ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್‌ ರೋಪ್‌ ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯ ಮಂತ್ರಿ ಬಸವರಾಜ ಎಸ್‌ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು.


ಚಿಕ್ಕಬಳ್ಳಾಪುರ (ಮಾ.27) : ಬಹುದಿನಗಳ ಬೇಡಿಕೆಯಾಗಿದ್ದ ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್‌ ರೋಪ್‌ ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯ ಮಂತ್ರಿ ಬಸವರಾಜ ಎಸ್‌ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟ(Nandi hills)ದಲ್ಲಿ ರೋಪ್‌ ವೇ(Ropeway) ಅಭಿವೃದ್ಧಿಪಡಿಸುವ ಈ ಯೋಜನೆಗೆ 93.40 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಸುಮಾರು 2.93 ಕಿ.ಮೀ ದೂರದ ರೋಪ್‌ ವೇ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.

Tap to resize

Latest Videos

undefined

ಅಂತೂ ಇಂತೂ ನಂದಿಬೆಟ್ಟ ರೋಪ್‌ವೇಗೆ ಕಾಲ ಕೂಡಿಬಂತು: ಅಂಜನಾದ್ರಿ ಬೆಟ್ಟಕ್ಕೂ ರೋಪ್‌ ವೇ

ಡೈನಾಮಿಕ್‌ ಸಂಸ್ಥೆ ಜತೆ ಒಪ್ಪಂದ

ರೋಪ್‌ ವೇ ಕಾಮಗಾರಿ(Ropeway project) ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಡೈನಾಮಿP್ಸ… ರೋ ಪ್‌ ವೇ ಪ್ರೈವೇಟ್‌ ಲಿಮಿಟೆಡ್‌ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಡೈನಾಮಿಕ್‌ ರೋಪ್‌ ವೇ ಪ್ರೈವೇಟ್‌ ಲಿಮಿಟೆಡ್‌ 30 ವರ್ಷಗಳ ರಿಯಾಯಿತಿ ಅವಧಿಯೊಂದಿಗೆ ನಿರ್ಮಾಣ, ವಿನ್ಯಾಸ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ ಚೌಕಟ್ಟಿನ ಮೇಲೆ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು.

ರೋಪ್‌ ವೇ ನಿರ್ಮಾಣದಿಂದಾಗಿಯೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಲಿದೆ. ದೇವನಹಳ್ಳಿ ಕೋಟೆ, ನಂದಿ, ಭೋಗನಂದೀಶ್ವರ, ಘಾಟಿ ಸುಬ್ರಹ್ಮಣ್ಯ, ವಿದುರಾಶ್ವತ್ಥ, ಮುದ್ದೇನಹಳ್ಳಿ ಮುಂತಾದ ಪ್ರವಾಸಿ ತಾಣಗಳು ಅಭಿವೃದ್ಧಿಯಾಗಲಿವೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಹಳ ಹತ್ತಿರವಿರುವ ಕಾರಣ ದೇಶಿಯ ಹಾಗೂ ವಿದೇಶಿ ಪ್ರವಾಸಿಗರನ್ನು ಸೆಳೆಯಲಿದೆ ಎಂದರು.

ಪ್ರವಾಸಿಗರಿಗೆ ಮೂಲ ಸೌಕರ್ಯ

ನಂದಿ ಬೆಟ್ಟಟ್ರಕ್ಕಿಂಗ್‌, ಸೈಕ್ಲಿಂಗ್‌ ಮತ್ತು ಪ್ಯಾರಾಗ್ರೆಡಿಂಗ್ನಂತಹ ಸಾಹಸ ಕ್ರೀಡೆಗಳಿಗೆ ಪ್ರಸಿದ್ಧಿ ಪಡೆದಿದೆ. ಇಂತಹ ತಾಣ ತಲುಪಲು ರೋಪ್‌ ವೇ ವೇಗ ಮತ್ತು ಪರಿಸರ ಸ್ನೇಹಿ ಸಾರಿಗೆ ಸೌಲಭ್ಯ, ಅನುಕೂಲ ಕಲ್ಪಿಸುವುದರೊಂದಿಗೆ ತಲುಪುವ ಸಮಯ ಉಳಿಸಲಾಗುತ್ತದೆ. ಪ್ರವಾಸಿಗರಿಗೆ ಸುತ್ತಮುತ್ತಲಿನ ಪ್ರದೇಶದ ಮೈಮಾನಿಕ ಚಿತ್ರಣ ನೀಡುವುದರ ಜೊತೆಗೆ ಈ ಭಾಗದಲ್ಲಿ ಮಾಲಿನ್ಯ ಕಡಿಮೆ ಮಾಡಲು ಸಹಕಾರಿಯಾಗಿದೆ.

ಬೆಟ್ಟದ ಮೇಲಿನ ಮತ್ತು ಕೆಳಗಿನ ಲ್ಯಾಂಡಿಂಗ್‌ ಸ್ಟೇಷಷನ್‌ಗಳಲ್ಲಿ ವಿವಿಧ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಸಲಾಗುತ್ತದೆ. ಬೆಟ್ಟದ ಕೆಳಗಿನ ಟರ್ಮಿನಲ್‌ ನಲ್ಲಿ- 480 ದ್ವಿಚಕ್ರ, 410 ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ, ಪುಡ್‌ ಕೋರ್ಟ, ಕುಡಿಯುವ ನೀರಿನ ಘಟಕಗಳು, ಶೌಚಾಲಯ ವ್ಯವಸ್ಥೆ, ಟಿಕೆಟ್‌ ಕೌಂಟರ್‌, ವಿಶ್ರಾಂತಿ ಕೊಠಡಿಗಳು, ರೆಸ್ಟೋರೆಂಚ್‌, ಮಳಿಗೆಗಳು ಇರುತ್ತವೆ ಎಂದರು.

ರೋಪ್‌ ವೇ ಪ್ರಯಾಣ 15 ನಿಮಿಷ

ರೋಪ್‌ ವೇ ಗೆ ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣ ತಲುಪಲು ಅಂದಾಜು 14-15 ನಿಮಿಷಗಳು ಆಗಲಿದೆ. ಪ್ರತಿ ಗಂಟೆಗೆ ಅಂದಾಜು 1,000 ಜನರನ್ನು ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣಕ್ಕೆ ಕರೆದೊಯ್ಯಬಹುದು. 50 ಕ್ಯಾಬಿನ್‌ಗಳನ್ನು ಅಳವಡಿಸಲಾಗುತ್ತಿದ್ದು, ಪ್ರತಿ ಕ್ಯಾಬಿನ್‌ನಲ್ಲಿ 10 ಪ್ರಯಾಣಿಕರನ್ನು ಕರೆದೊಯ್ಯಬಹುದು. ಈ ಯೋಜನೆಯಿಂದಾಗಿ ನೇರವಾಗಿ 500 ಜನರಿಗೆ, ಪರೋಕ್ಷವಾಗಿ 5,000 ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್‌. ನಾಗರಾಜ…, ಕಂದಾಯ ಸಚಿವ ಆರ್‌. ಅಶೋಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ. ಕೆ. ಸುಧಾಕರ್‌, ವಿವಿಧ ಇಲಾಖೆಯ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ನಂದಿಬೆಟ್ಟದ ರೋಪ್‌ ವೇಗೆ ಈ ತಿಂಗಳಲ್ಲಿ ಭೂಮಿಪೂಜೆ; ಸಚಿವ ಸುಧಾಕರ್

ಶಂಕರ್‌ ನಾಗ್‌ ಕನಸು ಈಡೇರಲಿದೆ

ಅಸಂಖ್ಯಾತ ಪ್ರವಾಸಿಗರ ಬಹು ದಿನಗಳ ಕನಸನ್ನು ನನಸಾಗಿಸುವ ಕಾರ್ಯಕ್ಕೆ ಇಂದು ನಾವು ಚಾಲನೆ ನೀಡಿದ್ದು, ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಶಂಕರ್‌ ನಾಗ್‌ ಅವರು ಪಂಚಗಿರಿ ನಂದಿಗಿರಿದಾಮದಲ್ಲಿ ರೋಪ್‌ ವೇ ನಿರ್ಮಿಸಬೇಕು ಎಂದು ಒತ್ತಾಸೆಪಟ್ಟಿದ್ದರು. ಅವರ ಆಶಯ ಕೆಲವೇ ತಿಂಗಳಲ್ಲಿ ಈಡೇರಲಿದೆ.

- ಬಸವರಾಜ್‌ ಬೊಮ್ಮಾಯಿ, ಮುಖ್ಯಮಂತ್ರಿ.

click me!