ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು

Published : Oct 08, 2019, 12:00 PM IST
ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು

ಸಾರಾಂಶ

ನೀರಿನಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಮುಳುಗಿ ಸಾವಿಗೀಡಾಗಿದ್ದಾರೆ. 

ಚಿಕ್ಕಮಗಳೂರು (ಅ.08): ಹಬ್ಬದ ಸಂಭ್ರಮದಲ್ಲಿ ಕೆರೆಗೆ ಈಜಲು ಹೋಗಿ ಮೂವರು ಸಾವಿಗೀಡಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆ ಬಿಳೇಕಲ್ಹಳ್ಳಿಯ ಮೂವರು ಬಾಲಕರು ಸೈಕಲ್ ತೊಳೆಯಲು ಕೆರೆಗೆ ತೆರಳಿದ್ದರು. ಈ ವೇಳೆ ಈಜಲೆಂದು ಕೆರೆಗೆ ಇಳಿದಿದ್ದು, ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಇದರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಂದು ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮುರುಳಿ[15], ಜೀವಿತ್ [14]  ಶಿರಾಜ್ [15] ಮೃತಪಟ್ಟಿದ್ದು, ಶಿರಾಜ್ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳೀಯರು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಡಿಕೆಶಿ ಎರಡು ವರ್ಷ ಪೂರ್ಣಾವಧಿ ಅಧಿಕಾರ ನಡೆಸಲಿ: ಸಿಎಂ ಪರ ಆ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ!
ಪ್ರವಾಸಿ ತಾಣ ಮುಳ್ಳಯ್ಯನಗಿರಿಯಲ್ಲಿ ಅಕ್ರಮ ರಸ್ತೆ ನಿರ್ಮಾಣ; ಗುಡ್ಡದ ಮಣ್ಣು ಅಕ್ರಮ ಸಾಗಾಣೆಗೆ ಪರಿಸರವಾದಿಗಳ ಆಕ್ರೋಶ!