ಸುಂದರ ತಾಣ ವೀಕ್ಷಿಸಿ ಅದೇ ಸವಿಯಲ್ಲಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಬಸ್ ಅಪಘಾತಕ್ಕೀಡಾಗಿದೆ. ಚಾಲನಕ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಚಿಕ್ಕಮಗಳೂರು(ಜ.15): ಪಿಯುಸಿ ಕಾಲೇಜು ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಬಸ್ ಅಪಘಾತಕ್ಕೀಡಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಠವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುತ್ತಿಗೆಪುರದ ಹರೀಶ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಮೂಡಿಗೆ ತಾಲೂನಿಕ ಪ್ರಸಿದ್ಧ ಪ್ರವಾಸಿ ಹಾಗೂ ಸಣ್ಣ ಚಾರಣ ತಾಣ ದೇವರ ಮನೆ ಗುಡ್ಡಕ್ಕೆ ಪಿಕ್ನಿಕ್ ತೆರಳಿದ್ದರು. ಪಿಕ್ನಿಕ್ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬಸ್ ಪಲ್ಟಿಯಾಗಿದೆ.
ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡ ಅತ್ಯಂತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಅತೀ ಹೆಚ್ಚಿನ ಮಂದಿ ಈ ಗುಡ್ಡಕ್ಕೆ ಭೇಟಿ ನೀಡುತ್ತಾರೆ. ಈ ರಸ್ತೆಯಲ್ಲಿ ಸಾಗುವಾಗ ಎಚ್ಚರಿಕೆ ವಹಿಸಬೇಕಾದ ಅಗತ್ಯತೆಯೂ ಇದೆ. ಆದರೆ ಯಾವುದೇ ಸಮಸ್ಯೆ ಇಲ್ಲದೆ ಪಿಕ್ನಿಕ್ ಮುಗಿಸಿದ ವಿದ್ಯಾರ್ಥಿಗಳು ಅಷ್ಟೇ ಸಂಭ್ರಮದೊಂದಿಗೆ ಮರಳಿದ್ದಾರೆ. ಆದರೆ ಮರಳುವಾಗ ಈ ಘಟನೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ಧಾವಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.