ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪುರಸಭೆಗೆ ನಡೆದ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆದರೆ ಬಿಜೆಪಿ ಅಧಿಕಾರಕ್ಕೆ ಬರೋದು ಪಕ್ಕಾ ಆಗಿದೆ.
ಚಿಕ್ಕಮಗಳೂರು (ನ.14): ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.
ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಚಿಕ್ಕಮಗಳೂರಿನ ಬೀರೂರು ಪುರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಬೀರೂರು ಪುರಸಭೆಯ 23 ವಾರ್ಡುಗಳಲ್ಲಿ ಈಗಾಗಲೇ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 8 ಸ್ಥಾನದಲ್ಲಿ ಗೆಲುವು ಪಡೆದಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಬಿಜೆಪಿ 11 ಸ್ಥಾನ ಪಡೆದ ಬಿಜೆಪಿ ಅಧಿಕಾರಕ್ಕೆ ಏರಲು ಸಜ್ಜಾಗಿದೆ. ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ಪಡೆದಿದ್ದರೆ, ಇಬ್ಬರು ಪಕ್ಷೇತರರಿಗೆ ಜಯ ಒಲಿದಿದೆ.
ಸದ್ಯ ಬಿರೂರು ಕ್ಷೇತ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಆದರೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಪಕ್ಷೇತರರ ಬೆಂಬಲ ಪಡೆದುಕೊಂಡು ಬಿಜೆಪಿ ಅಧಿಕಾರಕ್ಕೆ ಏರಲು ಸಜ್ಜಾಗಿದೆ.
ರಾಜ್ಯದ ಎರಡು ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ. 3 ಪಟ್ಟಣ ಪಂಚಾಯತ್ ಚುನಾವಣೆ ನಡಯುತ್ತಿದೆ.