ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ

Published : Dec 07, 2025, 07:56 AM IST
congress leader ganesh gowda murder

ಸಾರಾಂಶ

ಚಿಕ್ಕಮಗಳೂರಿನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರ ಸಾವಿನಿಂದ ಕುಟುಂಬದ ಸದಸ್ಯರಷ್ಟೇ ನಾನು ದುಖಿಃತನಾಗಿದ್ದೇನೆ. ಕೊಲೆಗೈದವರನ್ನು ಪತ್ತೆ ಮಾಡಿ ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆಗೆ ಒಳಪಡಿಸುವ ಮೂಲಕ ಅವರ ಸಾವಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ 'ಎಕ್ಸ್‌' ಖಾತೆಯ ಘಟನೆಗೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, 'ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡನನ್ನು ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ, ಹಂತಕರ ವಿರುದ್ದ ನಮ್ಮ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇವೆ' ಎಂದಿದ್ದಾರೆ.

ಹಾಗೆಯೇ ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, 'ಈ ದಾಳಿಯ ಹಿಂದಿನ ಕಾರಣಗಳನ್ನು ತನಿಖೆಯಿಂದ ನಿರ್ಧರಿಸಲಾಗುವುದು. ಘಟನೆಯ ಹಿಂದೆ ಯಾರು ಭಾಗಿಯಾಗಿದ್ದಾರೆ ಮತ್ತು ಯಾರಿದ್ದಾರೆ ಎಂಬುದು ತನಿಖೆಯ ನಂತರ ತಿಳಿಯಲಿದೆ' ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸುದ್ದಿಗಾರರ ಜೊತೆ ಮಾತನಾಡಿ, 'ಈ ಘಟನೆ ಜಿಲ್ಲೆಗೆ ಅತ್ಯಂತ ದುಃಖಕರವಾಗಿದ್ದು ಭಿನ್ನಾಭಿಪ್ರಾಯ ಗಳಿಂದಾಗಿ ನಡೆದ ಈ ಹತ್ಯೆ ಘೋರ ಮತ್ತು ಖಂಡನೀಯ. ತಪ್ಪಿತಸರಿಗೆ ಶಿಕ್ಷೆಯಾ ಗಲಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.

ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಗ್ರಾಮದಲ್ಲಿ ದತ್ತ ಜಯಂತಿ ಬಂಟಿಂಗ್ಸ್ ವಿಚಾರಕ್ಕೆ 2 ಗುಂಪು ಮಧ್ಯೆ ಗಲಾಟೆ ನಡೆದು ಗ್ರಾಪಂ ಸದಸ್ಯ ಕಾಂಗ್ರೆಸ್‌ನ 38 ವರ್ಷದ ಗಣೇಶ್ ಗೌಡ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ದತ್ತ ಜಯಂತಿ ಸಂದರ್ಭದಲ್ಲಿ ಅಳವಡಿಸಲಾದ ಬಂಟಿಂಗ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣೇಶಗೌಡ ಮತ್ತು ಸಂಜಯ್ ಎನ್ನುವವರ ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ನಾಗಭೂಷಣ ಮತ್ತು ಇತರರ ಮೇಲೆ ಹಲ್ಲೆ ಕೂಡ ನಡೆದಿತ್ತು. ಗಲಾಟೆ ಅಷ್ಟಕ್ಕೆ ಮುಗಿಯದೆ ಗ್ರಾಮದ ಬಾರ್‌ ಬಳಿ ಸಂಜಯ್ ಸಹಚರರು ಗಣೇಶ್ ಮೇಲೆ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ: ಬಿಜೆಪಿಗರ ಬಳಿ 1 ಕೋಟಿ 2 ಕೋಟಿ ಮೊತ್ತದ ದುಬಾರಿ ವಾಚ್‌ಗಳಿವೆ ಚೆಕ್ ಮಾಡಿ: ಕಾಂಗ್ರೆಸ್ ಶಾಸಕ

ರಾತ್ರಿ ಸಖರಾಯಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಕಲ್ಲರುಡಿ ಮಠದ ಬಳಿ ಕಾರ್‌ನಲ್ಲಿ ಬಂದ ಗಣೇಶ್ ತಂಡದ ಮೇಲೆ ಸಂಜಯ್ ಸಹಚರರು ಕಲ್ಲು ತೂರಾಟ ನಡೆಸಿದಾಗ ಗಣೇಶ ಜೊತೆಗಿದ್ದವರು ಓಡಿ ಹೋಗಿದ್ದರು. ಈ ವೇಳೆ ಒಂಟಿಯಾಗಿ ಸಿಕ್ಕ ಗಣೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಗಣೇಶ್‌ನನ್ನು ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ

ಶನಿವಾರ ಶವವನ್ನು ಸಖರಾಯಪಟ್ಟಣಕ್ಕೆ ತಂದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಸ್ತೆ ತಡೆದು ನ್ಯಾಯ ಕೊಡಿಸುವಂತೆ ಆಗ್ರಹಿಸಿದರು. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳು, ಸಹಾಯಕ ವರಿಷ್ಠಾಧಿಕಾರಿಗಳು, ತರೀಕೆರೆ ಡಿವೈಎಸ್ಪಿ ಭೇಟಿ ನೀಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಘಟನೆಗೆ ಕಾಂಗ್ರೆಸ್ ಮುಖಂಡರ ಖಂಡನೆ:

ಗಣೇಶ್ ಕೊಲೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಶಾಸಕ ಎಚ್ ಡಿ ತಮ್ಮಯ್ಯ, ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಬಿ.ಎಲ್.ಶಂಕರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ ಸೇರಿ ಹಲವು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.

PREV
Read more Articles on
click me!

Recommended Stories

ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!