ದತ್ತಪೀಠ ವಿವಾದವನ್ನು ನ್ಯಾಯಾಲಯದ ಹೊರಗೆ ಚರ್ಚೆ ಮೂಲಕ ಬಗೆಹರಿಸಿಕೊಳ್ಳಲು ಮುಂದಾಗುವಂತೆ ವಾದಿಗಳಾದ ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.
ಬೆಂಗಳೂರು [ಅ.15]: ಬಾಬಾಬುಡನ್‌ಗಿರಿಯ ದತ್ತಪೀಠ ವಿವಾದವನ್ನು ನ್ಯಾಯಾಲಯದ ಹೊರಗೆ ಚರ್ಚೆ ಮೂಲಕ ಬಗೆಹರಿಸಿಕೊಳ್ಳಲು ಮುಂದಾಗುವಂತೆ ವಾದಿಗಳಾದ ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.
ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿಯ ಯೋಗೀಶ್ ರಾಜ್ ಅರಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಇದೊಂದು ಅತ್ಯಂತ ಸೂಕ್ಷ್ಮ ವಿಚಾರ. ಈ ರೀತಿಯ ಪ್ರಕರಣಗಳನ್ನು ಅರ್ಜಿದಾರರು ಮತ್ತು ಪ್ರತಿವಾದಿಗಳು ಚರ್ಚೆ ನಡೆಸಿ ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕು. ಅದನ್ನು ಹೊರತು ಪಡಿಸಿ ವಿನಾಕಾರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದು ಸರಿಯಲ್ಲ ಎಂದು ನ್ಯಾಯಪೀಠ ತಿಳಿಸಿತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ವಿಚಾರಣೆ ವೇಳೆ ದತ್ತಾತ್ರೇಯ ಪೀಠದ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕರೆಡ್ಡಿ, ವಿವಾದಿತ ಸ್ಥಳದಲ್ಲಿನ ಪೂಜಾ ಕೈಂಕರ್ಯ ನೆರವೇರಿಸುವ ಗೊಂದಲಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಉಪ ಸಮಿತಿ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿತ್ತು.
ಈ ಸಮಿತಿಯು ನೀಡಿದ ವರದಿಯನ್ನು ಸರ್ಕಾರ ಅಂಗೀಕರಿಸಿ 2018ರ ಮಾಚ್‌ರ್ 19ರಂದು ಅಧಿಸೂಚನೆ ಹೊರಡಿಸಿದೆ. ಸಮಿತಿ ನೀಡಿದ ವರದಿಯ ಆಧಾರದ ಮೇಲೆ ದತ್ತಪೀಠ ಪೂಜೆ ನೆರವೇರಿಸಲು ಮುಜಾವರ್ ನೇಮಕ ಮಾಡಿದೆ. ಆದರೆ, ದತ್ತಪೀಠವನ್ನು ಹಿಂದೂ ಅರ್ಚಕರೇ ಪೂಜೆ ಮಾಡಬೇಕು. ಸರ್ಕಾರದ ನಿರ್ಧಾರ ಹಿಂದೂಗಳ ಭಾವನೆಗೆ ವಿರುದ್ಧವಾಗಿದೆ ಎಂದು ವಾದ ಮಂಡಿಸಿದರು.ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.
- ಅರ್ಜಿದಾರರು, ಸರ್ಕಾರಕ್ಕೆ ಹೈಕೋರ್ಟ್