ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Published : Oct 26, 2019, 11:30 AM IST
ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಸಾರಾಂಶ

ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜಿಲ್ಲಾಧಿಕಾರಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದು, ಕಾರಣ ಇಲ್ಲಿದೆ. 

ಚಿಕ್ಕಮಗಳೂರು (ಅ.26): ತಾಲೂಕು ಮಲ್ಲೇನಹಳ್ಳಿಯ ಬಿಂಡಿಗ ಗ್ರಾಮದಲ್ಲಿ ಆದಿಶಕ್ತ್ಯಾತ್ಮಕ ಶ್ರೀದೇವಿರಮ್ಮ ಅವರ ದೀಪೋತ್ಸವ ಮತ್ತು ಜಾತ್ರಾ ಮಹೋತ್ಸವ ನಡೆಯಲಿದೆ.

ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡಂತೆ 1 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಮತ್ತು ಸಾರ್ವಜನಿಕರು ಆಗಮಿಸಲಿದೆ. 

ಕೆಲವರು ಮದ್ಯಪಾನ ಮಾಡಿ, ಶಾಂತಿಯನ್ನು ಕದಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಸಾರ್ವಜನಿಕರ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಚಿಕ್ಕಮಗಳೂರು ತಾಲ್ಲೂಕು, ಮಲ್ಲೇನಹಳ್ಳಿ ಮತ್ತು ಹೊಸಪೇಟೆ ಗ್ರಾಮ ಸೇರಿದಂತೆ ಸುತ್ತಮುತ್ತ 10 ಕೀ.ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು ಅ.26 ರಂದು ಮಧ್ಯಾಹ್ನ 2 ಗಂಟೆಯಿಂದ ಅ.27ರಂದು ಮಧ್ಯಾಹ್ನ 2 ಗಂಟೆಯವರೆಗೆ ಮುಚ್ಚುವಂತೆ ಹಾಗೂ ಮದ್ಯ, ಬೀಯರ್‌, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಬಗಾದಿ ಗೌತಮ್‌ ಆದೇಶ ಹೊರಡಿಸಿದ್ದಾರೆ.

PREV
click me!

Recommended Stories

ಅಡಿಕೆ ತೋಟದ ದುರಂತ: ಗೊನೆ ಕೊಯ್ಯುವಾಗ ಆಯತಪ್ಪಿ ಬಿದ್ದ ಕಾರ್ಮಿಕ ಸಾವು
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!