ಬೆಂಗಳೂರಿನ ಕಾರು ಚಿಕ್ಕಮಗಳೂರಿನಲ್ಲಿ ಉರುಳಿ ಬಿದ್ದು ಮೂವರು ಸಾವು

By Web Desk  |  First Published Oct 25, 2019, 5:07 PM IST

ಇನೋವಾ ಕಾರು ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಳೆಯೇ ಈ ಅವಘಡಕ್ಕೆ ಕಾರಣ ಎಂದು ತಿಳಿದುಬಂದಿದೆ.


ಚಿಕ್ಕಮಗಳೂರು, ]ಅ.25]: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಹಳ್ಳಕ್ಕೆ ಉರುಳಿಬಿದ್ದಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. 

ಈ ಘಟನೆ ಇಂದು [ಶುಕ್ರವಾರ] ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆಯ ನೀರಗುಂಡಿ ಗ್ರಾಮದಲ್ಲಿ ನಡೆದಿದೆ. ಯಶೋಧ(82), ಪ್ರಕಾಶ್(61), ಅನಿರುದ್ದ್( 24) ಮೃತರು. 

Latest Videos

undefined

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇನ್ನು ಅನುರೂಪ, ನರಸಿಂಹರಾವ್ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಹೆಬ್ಬಾಳ ಮೂಲದವರು ಎಂದು ತಿಳಿದುಬಂದಿದೆ. 

ಯಶೋಧ ಕುಟುಂಬದವರು ಪ್ರವಾಸಕ್ಕೆ ತೆರಳಿದ್ದು, ಹೊರನಾಡಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾಗ ನೀರುಗಂಡಿ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. 

ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಿಸದೇ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಣಕಲ್​ ಠಾಣೆಯಲ್ಲಿ ದೂರು ದಾಖಲಾಗಿದೆ. 

click me!