ಚಿತ್ರದುರ್ಗ: ಭೀಕರ ಅಪಘಾತ, ಇಬ್ಬರು ಮಕ್ಕಳು ಸೇರಿ ಐವರು ಸಾವು

Published : May 01, 2019, 09:34 PM IST
ಚಿತ್ರದುರ್ಗ: ಭೀಕರ ಅಪಘಾತ, ಇಬ್ಬರು ಮಕ್ಕಳು ಸೇರಿ ಐವರು ಸಾವು

ಸಾರಾಂಶ

ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ, [ಮೇ.01]: ಲಾರಿ ಹಾಗೂ ಇನ್ನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ. 

ತಾಯಮ್ಮ (60), ಲತಾ(26), ಸುಶ್ಮಿತಾ (23), ವರ್ಣಿಕಾ(09), ಜಾಹ್ನವಿ (03) ಮೃತರು. ಕಾರ್​ನ ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. 

ಪರಿಣಾಮ ಇಬ್ಬರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

'ಹೃದಯ ಜಾರಿತು ಪ್ರೀತಿ ಉಳಿಯಿತು' ನಾಟಕ ವೇಳೆ ಹೃದಯಾಘಾತ, ರಂಗಮಂಟಪದಲ್ಲೇ ಉಸಿರು ಬಿಟ್ಟ ಕಲಾವಿದ
ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಬೆಂಗಳೂರಿನಲ್ಲಿ ದುರಂತ ಸಾವು