
ಚಿತ್ರದುರ್ಗ: (ಜ.11) ಪ್ರವಾಸ ಮುಗಿಸಿ ಮರಳುತ್ತಿದ್ದ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಹಾಗು ಕುಟಂಬಸ್ಥರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಪೊಲೀಸ್ ಅಧಿಕಾರಿ ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, ವೈಷ್ಣವಿ ತಾಯಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಾಯಳುಗಳನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ತಾಯಿ 65 ವರ್ಷದ ಕಮಲ ಹರಿಬಾಬು ಹಾಗೂ ಕಾರು ಚಾಲಕ 40 ವರ್ಷದ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಅಧಿಕಾರಿ ವೈಷ್ಣವಿ ಅವರನ್ನು ಚಿತ್ರದುರ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು, ವೈಷ್ಣವಿ ಕುಟುಂಬಸ್ಥರು ಚಿತ್ರದುರ್ಗಕ್ಕೆ ದಾವಿಸಿದ್ದಾರೆ.
ತಮಿಳುನಾಡು ಪ್ರವಾಸ ಮುಗಿಸಿ ಕೊಲ್ಲಾಪರಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಲ್ಲಾಪುರಕ್ಕೆ ತೆರಳುವ ವೇಳೆ ತಮಟಕಲ್ಲು ಬಳಿ ನಡೆದ ಅಪಘಾತ ನಡೆದಿದೆ. ವೇಗವಾಗಿ ಬುರುತ್ತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ. ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ACB DYSP ಆಗಿರುವ ವೈಷ್ಣವಿ ದಕ್ಷ ಅಧಿಕಾರಿಯಾಗಿ ಗಮನಸೆಳೆದಿದ್ದಾರೆ. ಹೆಚ್ಚುವರಿ, ಇತರ ರಜೆಗಳನ್ನು ಪಡೆಯದ ಸದಾ ಕರ್ತವ್ಯದಲ್ಲಿರುತ್ತಿದ್ದ ವೈಷ್ಣವಿ ಇತ್ತೀಚೆಗೆ ರಜೆ ಪಡೆದು ಕುಟುಂಬದ ಜೊತೆಗೆ ಪ್ರವಾಸಕ್ಕೆ ತೆರಳಿದ್ದರು. ತಮಿಳುನಾಡು ಪ್ರವಾಸ ಮುಗಿಸಿ ಮರಳಿ ಕೊಲ್ಲಾಪುರಕ್ಕೆ ಮರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಯಂತ್ರಣ ತಪ್ಪಿ ಬಣ್ಣದ ಬಾಕ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಲಾರಿ ಪಲ್ಟಿ ಹಿನ್ನೆಲೆ ವಾಹನದಲ್ಲಿದ್ದ ಅಂದಾಜು 16 ಲಕ್ಷ ರೂಪಾಯಿ ಮೌಲ್ಯದ ಬಣ್ಣ ಹಾನಿಯಾಗಿದೆ.
ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅದೃಷ್ಠವಶಾತ್ ಅನಾಹುತ ತಪ್ಪಿದೆ. ಕಿತ್ತೂರು ಪಟ್ಟಣದ ಸರ್ಕೀಟ್ ಹೌಸ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಲಾರಿ ಉರುಳಿ ಬಿದ್ದಿದೆ. ಲಾರಿ ಸಂಪೂರ್ಣ ನಜ್ಜು ಗುಜ್ಜಾಗಿದೆ. ಕಿತ್ತೂರು ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.