ಚಳ್ಳಕೆರೆ: ಓಮಿನಿ- ಬುಲೇರೋ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು

Published : Oct 28, 2019, 02:45 PM IST
ಚಳ್ಳಕೆರೆ: ಓಮಿನಿ- ಬುಲೇರೋ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು

ಸಾರಾಂಶ

ಓಮಿನಿ- ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ| ಇಬ್ಬರು ಮೃತಪಟ್ಟು, ಮತ್ತಿಬ್ಬರಿಗೆ ಗಾಯ| ಚಳ್ಳಕೆರೆ ತಾ. ಬುಕ್ಲೋರಹಳ್ಳಿ ಬಳಿ ನಡೆದ ಘಟನೆ| ಮೃತರು ಸಂಬಂಧಿಕರ ಊರಿಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ನಡೆದ ದುರ್ಘಟನೆ| 

ಚಿತ್ರದುರ್ಗ(ಅ.28): ಓಮಿನಿ- ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮತ್ತಿಬ್ಬರಿಗೆ ಗಾಯಗಳಾದ ಘಟನೆ ಜಿಲ್ಲೆಯ ಚಳ್ಳಕೆರೆ ತಾ. ಬುಕ್ಲೋರಹಳ್ಳಿ ಬಳಿ ನಡೆದಿದೆ. ಮೃತರನ್ನು ಅಶ್ವತ್ ರೆಡ್ಡಿ (32), ಪ್ರಶಾಂತ್ ರೆಡ್ಡಿ (25) ಎಂದು ಗುರುತಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೃತರು ಸಂಬಂಧಿಕರ ಊರಿಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಾಳುಗಳಾದ ವಿನಯ್, ಮಹೇಶ್ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬುಲೇರೋ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. 

ಸ್ಥಳಕ್ಕೆ ತಳಕು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!