
ಚಿತ್ರದುರ್ಗ(ಅ.15) : ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವಿಗೀಡಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಕ್ಯಾದಿಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ, ನಜ್ಜುಗುಜ್ಜಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಚಾಲಕನ ಗುರುತಿ ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.