
ಮುಂಬೈ: ಕಾರ್ಯಕ್ರಮಗಳು ಮತ್ತು ಸಿನಿಮಾ ನಿರ್ಮಾಣದಲ್ಲಿ ಬಂಡವಾಳ ಹಾಕಿದರೆ ಉತ್ತಮ ಲಾಭ ಕೊಡಿಸುವುದಾಗಿ ಹೇಳಿ ನಟ ವಿವೇಕ್ ಒಬೆರಾಯ್ ಅವರಿಂದ 1.55 ಕೋಟಿ ರು. ಪಡೆದ ಮೂವರು ಬಳಿಕ ಅವರಿಗೆ ವಂಚಿಸಿರುವ ಪ್ರಕರಣ ನಡೆದಿದೆ. ಬುಧವಾರ ನಟ ವಿವೇಕ್ ಅವರ ಅಕೌಂಟೆಂಟ್ ಅಂಧೇರಿಯಲ್ಲಿ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ನಟನಿಂದ ಹಣ ಪಡೆದ ಬಳಿಕ ಮೂವರು ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ಚಲನಚಿತ್ರ ನಿರ್ಮಾಪಕ ಸೇರಿದಂತೆ ಮೂವರು ಆರೋಪಿಗಳು ನಟನ ವ್ಯವಹಾರದ ಪಾಲುದಾರರಾಗಿದ್ದಾರೆ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಾಸ್ಕ್, ಹೆಲ್ಮೆಟ್ ಇಲ್ಲದೆ ಪತ್ನಿ ಜತೆ ಜಾಲಿರೈಡ್ : ನಟನ ವಿರುದ್ಧ ಕೇಸ್
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.