ರಣವೀರ್ ಸಿಂಗ್ ಅಭಿನಯದ ‘83’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. 1983ರಲ್ಲಿ ವಿಶ್ವಕಪ್ ಗೆದ್ದ ಕತೆಯನ್ನು ಹೊಂದಿರುವ ಸಿನಿಮಾ ಇದು. ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ. ಕಬೀರ್ ಖಾನ್ ನಿರ್ದೇಶನ ಮಾಡಿದ್ದಾರೆ. ಹಿಂದಿ ಮತ್ತು ಕನ್ನಡದಲ್ಲಿ ಬಿಡುಗಡೆಯಾಗುತ್ತಿರುವ ಈ ಸಿನಿಮಾದ ಜೊತೆ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರದ ದೃಶ್ಯಗಳು ಪ್ರಸಾರವಾಗಲಿವೆ.
ಕನ್ನಡದಲ್ಲೂ ಸಿನಿಮಾ ಬಿಡುಗಡೆ:
undefined
'83 ಡಿಸೆಂಬರ್ 24, 2021 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಕಪಿಲ್ ದೇವ್ ಪತ್ನಿ ರೋಮಿ ದೇವ್ ಆಗಿ ತೆರೆಮೇಲೆ ಕಾಣಿಸಿಕೊಳ್ಳಲು ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದಾರೆ ಎಂದು ಬರೆದಿದ್ದಾರೆ.
ಸಿನಿಮಾದ ಚಿತ್ರೀಕರಣವು 2019 ರಲ್ಲಿ ಪ್ರಾರಂಭವಾಯಿತು. ಚಿತ್ರದ ಆರಂಭಿಕ ಬಿಡುಗಡೆ ದಿನಾಂಕವು ಏಪ್ರಿಲ್ 10, 2020 ಎಂದು ನಿಗದಿಯಾಗಿತ್ತು. ಆದರೂ ಕೊರೋನಾದಿಂದಾಗಿ ರಿಲೀಸನ್ನು ಕ್ರಿಸ್ಮಸ್‌ಗೆ ಮುಂದೂಡಲಾಯಿತು. ಕೊರೋನಾ ಮತ್ತು ಲಾಕ್‌ಡೌನ್‌ಗಳಿಂದಾಗಿ ಬಿಡುಗಡೆಯ ದಿನಾಂಕಗಳಲ್ಲಿ ಹಲವಾರು ಬಾರಿ ಬದಲಾವಣೆಗಳಾದ ನಂತರ, ಸಿನಿಮಾ ಕೊನೆಗೂ ಡಿಸೆಂಬರ್ 21, 2021 ರಂದು ತೆರೆಗೆ ಬರಲಿದೆ.
ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್, '83' ಹವಾ ಜೋರು..!
ಬಾಜಿರಾವ್ ಮಸ್ತಾನಿ ಚಿತ್ರದ ನಂತರ ಬಾಲಿವುಡ್ (Bollywood) ಚಿತ್ರರಂಗದ ಸ್ಟೈಲಿಷ್ ನಟ ರಣವೀರ್ ಸಿಂಗ್ (Ranveer Singh) ಮತ್ತು ಮಡದಿ ಡಿಂಪಲ್ ಹುಡುಗಿ ದೀಪಿಕಾ ಪಡುಕೋಣೆ (Deepika Padukone) ಅಭಿನಯದ 83 ಚಿತ್ರವು ಇದೇ ಡಿಸೆಂಬರ್ 24ರಂದು ಹಿಂದಿ, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಗ್ರ್ಯಾಂಡ್ ರಿಲೀಸ್ ಆಗಲಿದೆ. ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ್ದು, ಚಿತ್ರದ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿದೆ. ಇದೀಗ 83 ಚಿತ್ರತಂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು (Press Meet) ನಡೆಸಿದೆ.
ಹೌದು! ಬೆಳ್ಳಿ ಪರದೆ ಮೇಲೆ ಭಾರತೀಯ ಕ್ರಿಕೆಟ್ ಇತಿಹಾಸದ ರೋಚಕ ಕಥೆಯನ್ನು ಹೊಂದಿರುವ ರಣವೀರ್ ಸಿಂಗ್ ನಟನೆಯ 83 ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವಾಗಿ ಕರ್ನಾಟಕದ ಸಿನಿ ಪ್ರೇಕ್ಷಕರಿಗೆ 83 ಸಿನಿಮಾವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅರ್ಪಿಸುತ್ತಿದ್ದಾರೆ. 1983ರಲ್ಲಿ ವಿಶ್ವಕಪ್ ಗೆದ್ದ ರೋಚಕ ಸ್ಟೋರಿಯ 83 ಸಿನಿಮಾವನ್ನು ಕನ್ನಡದಲ್ಲಿ ಸುದೀಪ್ ರಿಲೀಸ್ ಮಾಡುತ್ತಿದ್ದಾರೆ. ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಮಿಂಚಿದ್ದು, ಕಬೀರ್ ಖಾನ್ (Kabir Khan) ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುದೀಪ್, ರಣವೀರ್ ಸಿಂಗ್, ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ (Kapil Dev) ಇದ್ದರು.
83 ಚಿತ್ರದ ಬಗ್ಗೆ ಸುದೀಪ್ ಅವರು '1983ರ ವಿಶ್ವಕಪ್ ಬಗ್ಗೆ ಮಾತನಾಡಲು ಹಲವು ವಿಚಾರಗಳಿವೆ. ಅದರಲ್ಲೊಂದು ಕಥೆ ಇದೆ ಎಂದು ಒಂದು ತಂಡ ನಂಬಿದೆ. ಆ ಕಥೆ ಮಹತ್ವದ್ದಾಗಲಿದೆ ಎಂಬ ನಂಬಿಕೆ ಆ ತಂಡಕ್ಕೆ ಇದೆ. ಆ ನಂಬಿಕೆಯೇ ನನಗೆ ಒಂದು ಅದ್ಭುತ ಕಥೆಯಂತೆ ಕಾಣಿಸುತ್ತಿದೆ. ಒಬ್ಬ ಕ್ರಿಕೆಟ್ ಪ್ರೇಮಿಯಾಗಿ, ಭಾರತೀಯನಾಗಿ ಚಿತ್ರಮಂದಿರದಲ್ಲಿ ಈ ಚಿತ್ರವನ್ನು ನೋಡಿ ಎಂಜಾಯ್ ಮಾಡಲು ಬಯಸುತ್ತೇನೆ. ಇಂತಹ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ನಿರ್ದೇಶಕ ಕಬೀರ್ ಖಾನ್ ಮತ್ತು ಇಡೀ ತಂಡಕ್ಕೆ ನನ್ನ ಅಭಿನಂದನೆಗಳು. ಭಾರತ ವಿಶ್ವಕಪ್ ಗೆದ್ದಾಗ ಎಷ್ಟು ಖುಷಿ ಆಗಿತ್ತೋ ಅದೇ ರೀತಿ ಈ ಸಿನಿಮಾ ಬಿಡುಗಡೆಯಾಗುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಹೇಳಿರುವ ವಿಡಿಯೋವೊಂದನ್ನು ತಮ್ಮ ಟ್ವೀಟರ್ (Twitter) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕಬೀರ್ ಖಾನ್ ನಿರ್ದೇಶನದ ಸಿನಿಮಾ ಕಪಿಲ್ ದೇವ್ ನೃತೃತ್ವದಲ್ಲಿ 1983ರಲ್ಲಿ ಭಾರತದ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದ ಕುರಿತಾಗಿದೆ. ರಣವೀರ್ ಸಿಂಗ್ ಕಪಿಲ್ ದೇವ್ ಅವರ ಪಾತ್ರ ಮಾಡಿದರೆ, ಅವರ ನಿಜವಾದ ಪತ್ನಿ ದೀಪಿಕಾ ಪಡುಕೋಣೆ ಕಪಿಲ್ ದೇವ್ ಅವರ ಪತ್ನಿ ರೋಮಿ ಭಾಟಿಯಾ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಪಂಕಜ್ ತ್ರಿಪಾಠಿ, ಬೊಮನ್ ಇರಾನಿ, ಹಾರ್ಡಿ ಸಂಧು, ಆಮಿ ವಿರ್ಕ್ ಸೇರಿ ಹಲವಾರು ಕಲಾವಿದರು ನಟಿಸಿದ್ದಾರೆ. ಕಪಿಲ್ ದೇವ್ ಪಾತ್ರದಲ್ಲಿ ನಟಿಸಲು ರಣವೀರ್ ಸಿಂಗ್ ತುಂಬ ಶ್ರಮಪಟ್ಟಿದ್ದಾರೆ. ಟೀಸರ್ ಮತ್ತು ಪೋಸ್ಟರ್ಗಳಲ್ಲಿ ಅವರ ಲುಕ್ ಗಮನ ಸೆಳೆದಿದೆ.