ಆಸ್ಟ್ರೇಲಿಯಾ ಕಾಡ್ಗಿಚ್ಚು ನಿಯಂತ್ರಣಕ್ಕೆ 1 ಮಿಲಿಯನ್‌ ನೀಡಿದ ನಟ!

Suvarna News   | Asianet News
Published : Jan 07, 2020, 12:23 PM IST
ಆಸ್ಟ್ರೇಲಿಯಾ ಕಾಡ್ಗಿಚ್ಚು ನಿಯಂತ್ರಣಕ್ಕೆ  1 ಮಿಲಿಯನ್‌ ನೀಡಿದ  ನಟ!

ಸಾರಾಂಶ

ಕಾಂಗರೂ ನಾಡಿನಲ್ಲಿ ಹಿಂದೆಂದೂ ಕಾಣದಂತಹ ಭೀಕರ ಕಾಡ್ಗಿಚ್ಚು ಹರಡಿದೆ. ಅಪಾರ ಪ್ರಮಾಣದ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಅಸಂಖ್ಯಾತ ಪ್ರಾಣಿ- ಒಕ್ಷಿಗಳು ಬೆಂಕಿಗಾಹುತಿಯಾಗುತ್ತಿವೆ. ಅವುಗಳ ರೋದನ ಮುಗಿಲು ಮುಟ್ಟಿದೆ. ಪ್ರಕೃತಿ ವಿಕೋಪಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಅರಣ್ಯ ರಕ್ಷಣೆಗೆ ಅಲ್ಲಿನ ಜನರು ಧಾವಿಸುತ್ತಿದ್ದಾರೆ. ಸಹಾಯಕ್ಕೆ ನಿಲ್ಲುತ್ತಿದ್ದಾರೆ.   

ಬಾಲಿವುಡ್ ನಟ ಕ್ರಿಸ್ ಹೆಮ್ಸ್ವರ್ತ್ ಸಹಾಯಕ್ಕೆ ಮುಂದಾಗಿದ್ದಾರೆ. ಕಾಡ್ಗಿಚ್ಚು ನಿಯಂತ್ರಣಕ್ಕೆ  10 ಲಕ್ಷ ರೂ ದೇಣಿಗೆ ನೀಡಿದ್ದಾರೆ. ಜೊತೆಗೆ ಬೇರೆಯವರಿಗೂ ಕೈ ಜೋಡಿಸುವಂತೆ ಕೇಳಿಕೊಂಡಿದ್ದಾರೆ. 

ಸಿಡ್ನಿಯ ತಾಪಮಾನ ವಿಶ್ವದಲ್ಲೇ ಅಧಿಕ!

'ಹಾಯ್ ಗೆಳೆಯರೇ , ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆ ಅಸ್ಟ್ರೇಲಿಯಾದ ಕಾಡ್ಗಿಚ್ಚು ನಮ್ಮ ಕಾಡನ್ನು ನಾಶ ಮಾಡಿದೆ. ಇದನ್ನು ನಿಯಂತ್ರಣಕ್ಕೆ ತರಲು ನಾವೆಲ್ಲರೂ ಆರ್ಥಿಕವಾಗಿ ಕೈ ಜೋಡಿಸಬೇಕಿದೆ. ಈ ಹಣವು ಅಗ್ನಿಶಾಮಕ ದಳದವರಿಗೆ ತಲುಪುತ್ತದೆ. ಮನೆ ಕಳೆದುಕೊಂಡವರಿಗೆ ಹಾಗೂ ಪ್ರಾಣಪಾಯದಿಂದ ಪಾರಾದ ಪ್ರಾಣಿಗಳಿಗೆ ಸಹಾಯವಾಗುತ್ತದೆ ' ಎಂದು ಹೇಳಿದ್ದಾರೆ.

ಇದಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಯುವರಾಜ್‌ ಸಿಂಗ್ ಭೀಕರ ಘಟನೆ ಬಗ್ಗೆ ಟ್ಟಿಟರ್‌ನಲ್ಲಿ ಬರೆದುಕೊಂಡಿದ್ದಾರೆ.  ಇದು ಬೇಗ ನಿಯಂತ್ರಣಕ್ಕೆ ಬರಲಿ ಎಂದು ಪ್ರಾರ್ಥಿಸಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಾಜ್ ನಿಧಿಮೋರುಗಾಗಿ ಧರ್ಮ ಬದಲಾಯಿದ್ರಾ ಸಮಂತಾ? ಮದುವೆಯ ರಹಸ್ಯ ರಿವೀಲ್!
ಧುರಂಧಾರ್ ಚಿತ್ರೀಕರಣ ಪಾಕಿಸ್ತಾನದಲ್ಲಿ ಆಗಿತ್ತಾ? ಸಿನಿಮಾದಲ್ಲಿನ ದೃಶ್ಯಗಳ ರಹಸ್ಯ ಬಯಲು ಮಾಡಿದ ನಟ!