ಗ್ಯಾಂಗ್‌ಸ್ಟಾರ್‌ನಿಂದ ಬೆದರಿಕೆ ಎದುರಿಸುತ್ತಿರುವ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ಸದ್ದು

Published : Apr 14, 2024, 09:07 AM IST
ಗ್ಯಾಂಗ್‌ಸ್ಟಾರ್‌ನಿಂದ ಬೆದರಿಕೆ ಎದುರಿಸುತ್ತಿರುವ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ಸದ್ದು

ಸಾರಾಂಶ

ಈಗಾಗಲೇ ಗ್ಯಾಂಗ್‌ಸ್ಟಾರ್‌ಗಳಿಂದ ಬೆದರಿಕೆ ಎದುರಿಸುತ್ತಿರುವ ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆ ಮುಂದೆ ಗುಂಡಿನ ಸದ್ದು ಕೇಳಿ ಬಂದಿದೆ.

ಮುಂಬೈ: ಈಗಾಗಲೇ ಗ್ಯಾಂಗ್‌ಸ್ಟಾರ್‌ಗಳಿಂದ ಬೆದರಿಕೆ ಎದುರಿಸುತ್ತಿರುವ ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆ ಮುಂದೆ ಗುಂಡಿನ ಸದ್ದು ಕೇಳಿ ಬಂದಿದೆ. ಇಂದು ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿ ಸ್ಥಳದಿಂದ ವೇಗವಾಗಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಸಲ್ಮಾನ್ ಖಾನ್ ಮನೆ ಮುಂದೆ ಹೀಗೆ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯ ಸುಳಿವು ಪತ್ತೆಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ. 

ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ನೀಡಿದ ಮಾಹಿತಿ ಪ್ರಕಾರ, ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಅವರ 10 ಪ್ರಮುಖ ಟಾರ್ಗೆಟ್‌ಗಳಲ್ಲಿ ಸಲ್ಮಾನ್ ಖಾನ್ ಟಾಪ್‌ ಮೋಸ್ಟ್ ಆಗಿದ್ದಾರೆ ಎಂದು ವರದಿಯಾಗಿದೆ. ಭಾಯಿಜಾನ್ ಹತ್ಯೆಗೆ ಲಾರೆನ್ಸ್ ಬಿಷ್ಣೋಯ್ ಸಂಚು ರೂಪಿಸಿದ್ದು, ಈಗಾಗಲೇ ಸಲ್ಮಾನ್ ಖಾನ್‌ಗೆ ಹಲವು ಬೆದರಿಕೆ ಕರೆಗಳು ಬರುತ್ತಲೇ ಇವೆ.  

ಗಾಯಕ ಗಿಪ್ಪಿ ಗ್ರೆವಾಲ್ ಬಂಗಲೆ ಮೇಲೆ ಗುಂಡಿನ ದಾಳಿ: ನಟ ಸಲ್ಮಾನ್​ ಖಾನೇ ಟಾರ್ಗೆಟ್​?

ಗ್ಯಾಂಗ್‌ ಸ್ಟಾರ್ ಲಾರೆನ್ಸ್‌ ಬಿಷ್ಣೋಯ್  ಸಹಾಯಕನಾದ ಸಂಪತ್ ನೆಹ್ರಾ  ಸಲ್ಮಾನ್‌ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಕಣ್ಣಿಟ್ಟಿದ್ದಾನೆ ಎಂದು ಈ ಹಿಂದೆ ಘೋಷಿಸಿದ್ದ. ಆದರೆ ಹರ್ಯಾಣ ವಿಶೇಷ ಪೊಲೀಸ್ ಪಡೆಯ ಪೊಲೀಸರು ನಂತರದಲ್ಲಿ  ಸಂಪತ್ ನೆಹ್ರಾನನ್ನು ಬಂಧಿಸಿದ್ದರು.

ಕಳೆದ ವರ್ಷ ಏಪ್ರಿಲ್ 11 ರಂದು ಬಂದ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ಈಗಾಗಲೇ ನಟ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಮುಂಬೈ ಪೊಲೀಸರು ಹೆಚ್ಚಿಸಿದ್ದಾರೆ. ಅವರ ಭದ್ರತೆಯನ್ನು ಜೆಡ್‌ನಿಂದ ವೈ ಪ್ಲಸ್‌ಗೆ ಏರಿಸಲಾಗಿದೆ. ಇದರ ಜೊತೆಗೆ ಸಲ್ಮಾನ್ ಖಾನ್‌ಗೆ ಬೆದರಿಕೆ ಒಡ್ಡಿದ ಇ ಮೇಲ್ ಕಳುಹಿಸಿದ ಕಾರಣಕ್ಕೆ ಯುಕೆಯಲ್ಲಿರುವ ಭಾರತೀಯ ವಿದ್ಯಾರ್ಥಿಯ ವಿರುದ್ಧ ಲುಕೌಟ್ ನೋಟೀಸ್ ಹೊರಡಿಸಲಾಗಿದೆ.


ಕೆನಾಡ ಖಲಿಸ್ತಾನಿ ಉಗ್ರ ಸುಖಾ ಹತ್ಯೆ ಹೊಣೆಹೊತ್ತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್!

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?