
ಬಾಲಿವುಡ್ ಸ್ಟಾರ್ ನಟಿ ಕಾಜೋಲ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. 90ರ ದಶಕದ ಸೆನ್ಸೇಷನ್ ಕಾಜೋಲ್ ಇದೀಗ ಸಿನಿಮಾದಿಂದ ದೂರ ಇದ್ದರೂ ಆಗಾಗ ಗಮನ ಸೆಳೆಯುತ್ತಿರುತ್ತಾರೆ. ಅಪರೂಪಕ್ಕೆ ಸಿನಿಮಾ ಮಾಡುವ ಕಾಜೋಲ್ ಹೆಚ್ಚಾಗಿ ಫ್ಯಾಷನ್ ಈವೆಂಟ್, ಪ್ರಶಸ್ತಿ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಪತ್ನಿ ಕಾಜೋಲ್ ತನ್ನ ಅದ್ಭುತ ನಟನೆ ಮೂಲಕವೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇತ್ತೀಚೆಗೆ ಕಾಜೋಲ್ ಸಿನಿಮಾಗಳ ಸಂಖ್ಯೆ ಕಡಿಮೆಯಾದರೂ ಅಭಿಮಾನಿಗಳ ಸಂಖ್ಯೆ ಕಮ್ಮಿಯಾಗಿಲ್ಲ.
ಕಾಜೋಲ್ ಉತ್ತೀಚೆಗಷ್ಟೆ ಲಸ್ಟ್ ಸ್ಟೋರಿ 2 ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಒಟಿಟಿ ಮೂಲಕ ಸದ್ದು ಮಾಡುತ್ತಿರುವ ಕಾಜೋಲ್ ಇತ್ತೀಚೆಗೆ ಹೆಚ್ಚಾಗಿ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ. ಹೈ ಹೀಲ್ಸ್ ಧರಿಸಿ ಓಡಾಡಲು ಕಷ್ಟ ಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೈ ಹೀಲ್ಸ್ ಹಾಕಿದ್ದ ಕಾಜೋಲ್ ಮೆಟ್ಟಿಗಳನ್ನು ಇಳಿದು ಬರಲು ಪರದಾಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ಇದೆಲ್ಲಾ ಬೇಕಿತ್ತಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಟ್ರೋಲ್‌ಗಳಿಗೆಲ್ಲ ಹೆಚ್ಚು ತಲೆಕೆಡಿಸಿಕೊಳ್ಳದ ಕಾಜೋಲ್ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿರುತ್ತಾರೆ.
Beauty Tips: ಯಾರದ್ದೋ ಒತ್ತಾಯಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸ್ಕೊಂಡು ಅನುಭವಿಸ್ಬೇಡಿ, ಕಾಜೋಲ್ ಹೇಳಿದ್ದು
ಕಾಜೋಲ್ ಸಿನಿಮಾ ವಿಚಾರಕ್ಕೆ ಬರುವುದಾರೆ ಅಪರೂಪಕ್ಕೆ ಒಂದು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಕೊನೆಯದಾಗಿ ಕಾಜೋಲ್ ಸಲಾಮ್ ವೆಂಕಿ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರು ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ಮಾಡಲು ವಿಫಲವಾಗಿತ್ತು. ಬಳಿಕ ಲೆಸ್ಟ್ ಸ್ಟೋರಿ 2 ಮೂಲಕ ಒಟಿಟಿಗೆ ಎಂಟ್ರಿ ಕೊಟ್ಟಿದ್ದರು. ಸದ್ಯ ನೆಟ್‌ಫ್ಲಿಕ್ಸ್ ಸೀರಿಸ್ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ಕಾಜೋಲ್ ವಿವಾದ
ಇತ್ತೀಚಿಗಷ್ಟೆ ಕಾಜೋಲ್ ರಾಜಕೀಯ ನಾಯಕರ ಬಗ್ಗೆ ಮಾತನಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. 'ಶೈಕ್ಷಣಿಕ ವ್ಯವಸ್ಥೆಯ ಹಿನ್ನೆಲೆ ಇಲ್ಲದ ರಾಜಕೀಯ ನಾಯಕರಿದ್ದಾರೆ' ಎಂದು ಹೇಳಿದ್ದರು. 'ನಿಮ್ಮಲ್ಲಿ ಶೈಕ್ಷಣಿಕ ವ್ಯವಸ್ಥೆಯ ಹಿನ್ನೆಲೆ ಇಲ್ಲದ ರಾಜಕೀಯ ನಾಯಕರಿದ್ದಾರೆ. ನನ್ನನ್ನು ಕ್ಷಮಿಸಿ, ಆದರೆ ನಾನು ಈ ಬಗ್ಗೆ ಹೇಳುತ್ತೇನೆ. ನಾನು ನಾಯಕರಿಂದ ಆಳಲ್ಪಡುತ್ತಿದ್ದೇನೆ, ಅವರಲ್ಲಿ ಅನೇಕರು, ಅಂತಹ ದೃಷ್ಟಿಕೋನವನ್ನು ಹೊಂದಿಲ್ಲ. ಇಂತಹ ದೃಷ್ಟಿಕೋನವನ್ನು ಶಿಕ್ಷಣವು ನಿಮಗೆ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ಕನಿಷ್ಠ ವಿಭಿನ್ನ ದೃಷ್ಟಿಕೋನವನ್ನು ನೋಡುವ ಅವಕಾಶವನ್ನು ನೀಡುತ್ತದೆ' ಎಂದೂ ಕಾಜೋಲ್ ಹೇಳಿದರು
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.