
ಬೆಂಗಳೂರು (ನ.07): ಕಾಂತಾರ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಸಾರ್ವಜನಿಕರಿಂದ ಹಣ ಕೇಳುತ್ತಿರುವ ವಿಚಾರವೊಂದು ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ರುಕ್ಮಿಣಿ ವಸಂತ್ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಇಂದು (ನ.07) ಮಧ್ಯಾಹ್ನ ಅವರು ಮಾಡಿರುವ ಟ್ವೀಟ್‌ನಲ್ಲಿ, ಅನಾಮಿಕ ವ್ಯಕ್ತಿಯೊಬ್ಬ ನನ್ನ ಹೆಸರಿನಲ್ಲಿ ಪೋನ್ ಮಾಡಿ ಹಣ ಕೇಳುತ್ತಿದ್ದಾನೆ. ಯಾರೂ ಆತನನ್ನು ನಂಬಿ ಹಣ ಕಳಿಸಬಾರದು ಎಂದು ಮನವಿ ಮಾಡಿದ್ದಾರೆ.
ರುಕ್ಮಿಣಿ ವಸಂತ್ ಮಾಡಿರುವ ಟ್ವೀಟ್‌ನಲ್ಲಿ, 9445893273 ಸಂಖ್ಯೆಯನ್ನು ಬಳಸುವ ವ್ಯಕ್ತಿಯೊಬ್ಬ ನನ್ನಂತೆ ನಟಿಸಿ ನಾನಾ ಜನರನ್ನು ಸಂಪರ್ಕಿಸಿ ಹಣ ಕೇಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಂಖ್ಯೆ ನನ್ನದಲ್ಲ ಮತ್ತು ಇದರಿಂದ ಬರುವ ಯಾವುದೇ ಸಂದೇಶಗಳು ಅಥವಾ ಕರೆಗಳು ಸಂಪೂರ್ಣವಾಗಿ ನಕಲಿ. ದಯವಿಟ್ಟು ಅಂತಹ ಸಂದೇಶಗಳಿಗೆ ಉತ್ತರಿಸಬೇಡಿ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಥವಾ ಅವರೊಂದಿಗೆ ಯಾವುದೇ ರೀತಿಯ ವ್ಯವಹಾರದಲ್ಲೂ ತೊಡಗಿಸಿಕೊಳ್ಳಬೇಡಿ ಎಂದು ರುಕ್ಮಿಣಿ ಎಚ್ಚರಿಸಿದ್ದಾರೆ.
ಏನೇ ವಿಷಯವಿದ್ದರೂ ನನ್ನದೊಂದಿಗೆ ಮಾತನಾಡಿ, ಮೋಸ ಹೋಗಬೇಡಿ. ನನ್ನ ಹೆಸರಿನಲ್ಲಿ ಕರೆ ಅಥವಾ ಆ ಸಂದೇಶ ಕಳುಹಿಸುವವರು ಸೈಬರ್ ಅಪರಾಧಿಗಳು, ಅವರಿಗೆ ಖಂಡಿತಾ ಶಿಕ್ಷೆ ಇದ್ದೇ ಇರುತ್ತದೆ. ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರಲ್ಲದೇ ಯಾವುದೇ ಸ್ಪಷ್ಟೀಕರಣ ಅಥವಾ ಪರಿಶೀಲನೆಗಾಗಿ, ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ ಎಂದು ನಟಿ ರುಕ್ಮಿಣಿ ವಸಂತ್ ಅವರು ಜನರನ್ನು ಎಚ್ಚರಿಸಿದ್ದಾರೆ. ಜೊತೆಗೆ ಬೆಂಗಳೂರು ಸಿಟಿ ಪೊಲೀಸ್ ಹಾಗೂ ಸೈಬರ್ ಕ್ರೈಮ್ ಸಿಐಡಿ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.