ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಕೃಷಿಯಲ್ಲಿ ಬ್ಯುಸಿಯಾಗಿದ್ದಾರೆ. ಕೃಷಿ ಮಾಡುತ್ತಿರುವ ಫೋಟೋವನ್ನು ಸಾಯಿ ಪಲ್ಲವಿ ಸಾಮಾಜಿಕ ಜಾಲಾತಣದಲ್ಲಿ ಶೇರ್ ಮಾಡಿದ್ದಾರೆ.
ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ(Sai Pallavi ) ಬಣ್ಣದ ಲೋಕದಿಂದ ದೂರ ಸರಿಯುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಈ ಸುದ್ದಿ ಕೇಳಿ ಸಾಯಿ ಪಲ್ಲವಿ ನಟನೆ ಬಿಡುತ್ತಾರಾ ಎಂದು ಅಭಿಮಾನಿಗಳು ಶಾಕ್ ಆಗಿದ್ದರು. ಆದರೆ ಈ ಬಗ್ಗೆ ಪ್ರೇಮಂ(Premam) ಸುಂದರಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಸಾಯಿ ಪಲ್ಲವಿ ಕೃಷಿ ಕಡೆ ಮುಖ ಮಾಡಿದ್ದಾರೆ. ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಹೊಲದಲ್ಲಿ ಕೆಲಸ ಮಾಡುತ್ತಿರುವ ಫೋಟೋಗಳು ವೈರಲ್ ಆಗಿದೆ.
ಲವ್ ಸ್ಟೋರಿ ಮತ್ತು ಶ್ಯಾಮ್ ಸಿಂಗ ರಾಯ್(Shyam Singha Roy) ಸಿನಿಮಾದ ಸಕ್ಸಸ್ ನಲ್ಲಿರುವ ಸಾಯಿ ಪಲ್ಲವಿ ಸದ್ಯ ವಿರಾಟ ಪರ್ವಂ(Virata Parvam) ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಆದರೆ ಈ ಸಿನಿಮಾ ಬಳಿಕ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಸಾಯಿ ಪಲ್ಲವಿ ಯಾವುದೇ ಸಿನಿಮಾಗೆ ಸಹಿ ಮಾಡದೆ ಇರುವುದು ಅಭಿಮಾನಿಗಳಲ್ಲಿ ಅನುಮಾನ ಮತ್ತಷ್ಟು ಹೆಚ್ಚಾಗಿದೆ. ನಿಜಕ್ಕೂ ಸಾಯಿ ಪಲ್ಲವಿ ಸಿನಿಮಾರಂಗದಿಂದ ದೂರ ಸರಿಯುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. ಈ ನಡುವೆ ಕೃಷಿ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ.
ಅಂದಹಾಗೆ ಲಾಕ್ ಡೌನ್ ಸಮಯದಲ್ಲಿ ಅನೇಕ ಕಲಾವಿದರು ಕೃಷಿ ಕಡೆ ಮುಖ ಮಾಡಿದ್ದರು. ತಮ್ಮ ಹೊಲಗಳಲ್ಲಿ ಕೆಲಸ ಮಾಡುವ ಮೂಲಕ ಲಾಕ್ ಡೌನ್ ಕಳೆದಿದ್ದರು. ಇದೀಗ ಸಾಯಿ ಪಲ್ಲವಿ ಕೃಷಿ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೊಲದಲ್ಲಿ ಕೆಲಸ ಮಾಡುವವರ ಜೊತೆ ಸೇರಿ ತಾನು ಕೆಲಸ ಮಾಡಿದ್ದಾರೆ. ಬಳಿಕ ಅವರ ಜೊತೆ ಕ್ಯಾಮರಾಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬುರ್ಖಾ ತೊಟ್ಟು ಶ್ರೀರಾಮ ಚಿತ್ರ ಮಂದಿರಕ್ಕೆ ಬಂದ Simple Beauty ಸಾಯಿ ಪಲ್ಲವಿ!
ಸಾಯಿ ಪಲ್ಲವಿ ಫೋಟೋಗೆ ಅಭಿಮಾನಿಗಳು ಮತ್ತು ಸ್ನೆಹಿತರಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದು ಬಂದಿವೆ. ಸಾಯಿ ಪಲ್ಲವಿ ಸರಳತೆಗೆ ಮನ ಸೋತಿದ್ದಾರೆ. ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಕೂಡ ಕಾಮೆಂಟ್ ಮಾಡಿದ್ದಾರೆ. ನಿಮ್ಮ ಹಾಗೆ ಯಾರು ಇಲ್ಲ ಎಂದು ಹೇಳಿದ್ದಾರೆ. ಸಹಜ ನಟನೆ ಮತ್ತು ಸಹಜ ಸೌಂದರ್ಯದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿರುವ ನಟಿ ಸಾಯಿ ಪಲ್ಲವಿ ಕೃಷಿಗೆ ಮನಸೋತಿದ್ದಾರೆ.
Sai Pallavi No Makeup Look: ಝೀರೋ ಮೇಕಪ್, ಸಾಯಿ ಪಲ್ಲವಿ ಸಹಜ ಸುಂದರಿ
ಸಾಯಿ ಪಲ್ಲವಿ ಕೊನೆಯದಾಗಿ ಶ್ಯಾಮ್ ಸಿಂಗ ರಾಯ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ತೆಲುಗು ಸ್ಟಾರ್ ನಾನಿ ಜೊತೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಸಾಯಿ ಪಲ್ಲವಿ ಬಳಿ ರಿಲೀಸ್ ಗೆ ಒಂದು ಸಿನಿಮಾವಿದೆ. ರಾಣಾ ದಗ್ಗುಬಾಟಿ ಜೊತೆ ಸಾಯಿ ಪಲ್ಲವಿ ತೆರೆಹಂಚಿಕೊಂಡಿದ್ದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ಸಾಯಿ ಪಲ್ಲವಿ ಯಾವುದೇ ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡಿಲ್ಲ. ಹಾಗಾಗಿ ಸಾಯಿ ಪಲ್ಲವಿ ಮುಂದಿನ ಸಿನಿಮಾ ಭಾರಿ ಕುತೂಹಲ ಮೂಡಿಸಿದೆ.