ಗಾಯಕ ಗಿಪ್ಪಿ ಗ್ರೆವಾಲ್ ಅವರ ಕೆನಡಾದ ಬಂಗಲೆ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಘಟನೆಗೆ ನಟ ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡಿರುವುದೇ ಕಾರಣ ಎನ್ನಲಾಗಿದೆ.
ಆಘಾತಕಾರಿ ಘಟನೆಯೊಂದರಲ್ಲಿ, ಕೆನಡಾದ ವ್ಯಾಂಕೋವರ್‌ನಲ್ಲಿರುವ ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಅವರ ಮನೆಯ ಹೊರಗೆ ಗುಂಡಿನ ಸದ್ದು ಕೇಳಿಸಿದೆ. ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಿಂಸಾತ್ಮಕ ಕೃತ್ಯದ ತಾನೇ ಹೊಣೆಗಾರ ಎಂದು ಹೇಳಿಕೊಂಡಿದ್ದಾನೆ! ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ಗಿಪ್ಪಿ ನಿಕಟ ಸಂಬಂಧ ಹೊಂದಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಷ್ಣೋಯ್ ಆರೋಪಿಸಿದ್ದಾನೆ. ಈ ಘಟನೆಯಿಂದ ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಾರ್ವಜನಿಕ ವ್ಯಕ್ತಿಗಳ ಸುರಕ್ಷತೆಯ ಬಗ್ಗೆ ಹಲವರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಗುಂಡಿನ ದಾಳಿಯ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಗುಂಡಿನ ದಾಳಿ ನಡೆಸಿರುವ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರಿಗೂ ಎಚ್ಚರಿಕೆ ನೀಡಿದ್ದಾನೆ. ದಾಳಿಯ ಈ ಕೃತ್ಯವನ್ನು ತಾನೇ ಎಸಗಿರುವುದಾಗಿ ಹೇಳಿರುವ ಆತ, ಸಲ್ಮಾನ್ ಖಾನ್ನನ್ನೂ ಯಾರೂ ರಕ್ಷಿಸಲು ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ಯಾವುದೇ ದೇಶಕ್ಕೆ ಪಲಾಯನ ಮಾಡು, ಆದ್ರೆ ನೆನಪಿಡು. ಸಾವಿಗೆ ವೀಸಾ ಅಗತ್ಯವಿಲ್ಲ, ಅದು ಆಹ್ವಾನಿಸದೇ ಬರುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾನೆ.
ಮದ್ವೆ ದಿನವೂ ಮೂವಿ ಹೆಂಡ್ತಿ ಫೋಟೋ ಹಾಕಿ ಅಭಿಮಾನಿಗಳನ್ನು ಕನ್ಫ್ಯೂಸ್ ಮಾಡಿದ ಪ್ರಥಮ್!
ಅಷ್ಟಕ್ಕೂ ಲಾರೆನ್ಸ್ ಬಿಷ್ಣೋಯ್ ನಟ ಸಲ್ಮಾನ್ ಖಾನ್ (Salman Khan) ಅವರನ್ನು ಕೊಲ್ಲುವುದಾಗಿ ಇದಾಗಲೇ ಹಲವಾರು ಬಾರಿ ಬೆದರಿಕೆ ಹಾಕಿದ್ದಾನೆ. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ (Blackbuck poaching case) ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿದ್ದೇ ಈ ಬೆದರಿಕೆಗೆ ಕಾರಣ. ಈ ಪ್ರಕರಣದಲ್ಲಿ ಸಲ್ಮಾನ್ ಸದ್ಯ ಜಾಮೀನಿನ ಮೇಲೆ ಇದ್ದರೂ, ಬಿಷ್ಣೋಯ್ ಸಮುದಾಯವರು ಮಾತ್ರ ನಟನ ಬೆನ್ನ ಬಿದ್ದಿದ್ದಾನೆ. ಏಕೆಂದರೆ, ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಅದಕ್ಕಾಗಿಯೇ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದಾನೆ.
ಕೊಲೆ ಬೆದರಿಕೆ ಒಡ್ಡಿರುವ ಆರೋಪ ಹೊತ್ತ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿ ಇದ್ದು, ಈಗ ಪದೇ ಪದೇ ಮತ್ತೆ ಬೆದರಿಕೆ ಹಾಕುತ್ತಲೇ ಇದ್ದಾನೆ. ಅಷ್ಟಕ್ಕೂ ಆತನ ಬೇಡಿಕೆ ಎಂದರೆ ಕೃಷ್ಣಮೃಗವನ್ನು ಕೊಂದಿರುವುದಕ್ಕೆ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು ಎನ್ನುವುದು. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರ ಭವಿಷ್ಯವನ್ನು ಯಾವುದೇ ನ್ಯಾಯಾಲಯ ನಿರ್ಧರಿಸುವುದಿಲ್ಲ ಎಂದು ಲಾರೆನ್ಸ್ ಬಿಷ್ಣೋಯ್ ಇದಾಗಲೇ ಹೇಳಿದ್ದಾನೆ. ಪೊಲೀಸರ ಮುಂದೆ ನೀಡಿದ ಹೇಳಿಕೆಯಲ್ಲಿ, ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಈ ವಿಷಯದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರೆ (Apology) ತಮ್ಮ ಮನಸ್ಸು ಕೂಡ ಬದಲಾಗಬಹುದು ಎಂದು ಲಾರೆನ್ಸ್ ಬಿಷ್ಣೋಯ್ ಈ ಹಿಂದೆ ಹೇಳಿದ್ದ. ಇದರ ಹೊರತಾಗಿಯೂ ಸಲ್ಮಾನ್ ಖಾನ್ ಕ್ಷಮೆ ಕೋರಿಲ್ಲ ಎನ್ನುವುದು ಅವರಿಗೆ ಇರುವ ಆಕ್ರೋಶ. ಕ್ಷಮೆ ಕೋರದೇ ಹೋದರೆ ಪರಿಣಾಮ ಎದುರಿಸಲು ಸಿದ್ಧ ಇರಿ ಎಂದು ಗ್ಯಾಂಗ್ ಎಚ್ಚರಿಕೆ ನೀಡುತ್ತಲೇ ಇದೆ. ಕ್ಷಮೆ ಕೋರದ ಸಲ್ಮಾನ್ ಅವರ ಅಹಂಕಾರವನ್ನು ಮುರಿಯುತ್ತೇವೆ ಎಂದಿದ್ದಾನೆ. ಇದರ ಬೆನ್ನಲ್ಲೇ ಇದೀಗ ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮನೆಯ ಮೇಲೆ ಗುಂಡಿನ ದಾಳಿ ನಡೆದಿದೆ.
ಇವಳು ಹೊಟ್ಟೆಯಲ್ಲಿದ್ದಾಗ ಸಾಯಿಸಲು ಹೊರಟಿದ್ವಿ: ಆ ದಿನಗಳ ನೆನೆದ ಶ್ರೀರಸ್ತು ಶುಭಮಸ್ತು ಪೂರ್ಣಿಯ ಅಪ್ಪ
2022ರ ಮೇ 29 ರಂದು ಪಂಜಾಬ್‌ನ ಮಾನ್ಸಾ ಬಳಿ ಗಾಯಕ ಸಿಧು ಮೂಸ್ ವಾಲಾ (Sidhu Moosewala) ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ (Saleem Khan) ಅವರಿಗೆ ಈ ಬೆದರಿಕೆ ಕರೆ ಬಂದಿದ್ದವು.