Pushpa Bangalore Press meet: ತೆಲುಗು ಮಾತಾಡಿ ಕನ್ನಡನೇ ಬರ್ತಿಲ್ಲ ಎಂದ ರಶ್ಮಿಕಾ

Published : Dec 15, 2021, 04:32 PM ISTUpdated : Dec 15, 2021, 06:39 PM IST
Pushpa Bangalore Press meet: ತೆಲುಗು ಮಾತಾಡಿ ಕನ್ನಡನೇ ಬರ್ತಿಲ್ಲ ಎಂದ ರಶ್ಮಿಕಾ

ಸಾರಾಂಶ

Pushpa Bangalore Press Meet: ಬೆಂಗಳೂರಿನಲ್ಲಿ ಪುಷ್ಪ ಪ್ರೆಸ್‌ಮೀಟ್ ನಡೆದಿದ್ದು ಈ ಸಂದರ್ಭ ನಟಿ ರಶ್ಮಿಕಾ ಮಂದಣ್ಣ ಮತ್ತೆ ಕಾಂಟ್ರವರ್ಸಿಯಾಗುವಂತೆ ಹೇಳಿಕೆ ಕೊಟ್ಟಿದ್ದಾರೆ. ಅದೂ ಕನ್ನಡದ ಬಗ್ಗೆ

ತೆಲುಗು ಮಾತಾಡಿ ಮಾತಾಡಿ ನನಗೆ ಕನ್ನಡವೇ ಬರುತ್ತಿಲ್ಲ ಎಂದು ಸೌತ್ ನಟಿ, ಸ್ಯಾಂಡಲ್‌ವುಡ್‌ನ ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಬಹುನಿರೀಕ್ಷಿತ ಟಾಲಿವುಡ್ ಸಿನಿಮಾ ಪುಷ್ಪಾ: ದಿ ರೈಸ್‌ನ ಪ್ರೆಸ್ ಮೀಟ್ ಬೆಂಗಳೂರಿನಲ್ಲಿ ನಡೆದಿದ್ದು ಇದರಲ್ಲಿ ರಶ್ಮಿಕಾ ಭಾಗವಹಿಸಿ ಮಾತನಾಡಿದ್ದಾರೆ. ತೆಲುಗು ಮಾತನಾಡಿ ಕನ್ನಡವೇ ಬರುತ್ತಿಲ್ಲ ಎಂದ ನಟಿ ಮತ್ತೆ ಸುದ್ದಿಯಾಗಿದ್ದಾರೆ. ಇದೀಗ ಅಭಿಮಾನಿಗಳಲ್ಲಿ ರಶ್ಮಿಕಾ ಕನ್ನಡ ಮಾತನಾಡೋದನ್ನ ಮರೆತಿದ್ದಾರಾ ಎನ್ನುವ ಚರ್ಚೆ ಶುರುವಾಗಿದೆ.

ಪುಷ್ಪ ಸಿನಿಮಾ ಸುದ್ದಿಗೋಷ್ಟಿಯಲ್ಲಿ ರಶ್ಮಿಕಾ ಎಡವಟ್ಟು ಮಾಡಿಕೊಂಡಿದ್ದು ಜೊತೆಯಲ್ಲಿ ಡಾಲಿ ಧನಂಜಯ್ ಹಾಗೂ ಅಲ್ಲು ಅರ್ಜುನ್ ಅವರೂ ಇದ್ದರು. ನಮ್ಮೂರಿಗೆ ಬಂದು ತುಂಬಾ ಖುಷಿಯಾಗುತ್ತಿದೆ. 17 ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ತುಂಬಾ ಚನ್ನಾಗಿ ಮಾಡಿದ್ದೇವೆ. ಶ್ರೀವಲ್ಲಿ ಪಾತ್ರ ನನಗೆ ತುಂಬಾ ಸ್ಪೆಷಲ್. ಪುಷ್ಪ ಸಿನಿಮಾ ನಾರ್ಮಲ್ ಸ್ಟೋರಿ ಅಲ್ಲ ಎಂದು ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ(Rashmika Mandanna) ಹೇಳಿದ್ದಾರೆ.

ಸಿನಿಮಾ ಚೆನ್ನಾಗಿ ಮಾಡಿದ್ದೇವೆ, ಶ್ರೀವಲ್ಲಿ ಪಾತ್ರ ನಂಗೆ ಸ್ಪೆಷಲ್ ಎಂದ ಕಿರಿಕ್ ಚೆಲುವೆ

ಬೆಂಗಳೂರಿನಲ್ಲಿ(Bengaluru) ಸಿನಿಮಾ ಪ್ರೆಸ್‌ಮೀಟ್‌ನಲ್ಲಿ(Press Meet) ಮಾತನಾಡಿದ ರಶ್ಮಿಕಾ, ನಾನು ಅಲ್ಲು ಅರ್ಜುನ್(Allu Arjun) ಸರ್ ಜೊತೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ. ಅಲ್ಲು ಅರ್ಜುನ್ ಸರ್ ಗೆ ಇರೋ ಹೆಸರಿಗೆ ನಾನು ಫುಲ್ ಫಿಲ್ ಮಾಡುವಷ್ಡು ಕೆಲಸ ಮಾಡಿದ್ದೇನೆ. ಡಾಲಿ ಧನಂಜಯ್ ಜೊತೆ ಕೂಡ ನಟಿಸಿದ್ದೇನೆ. ಸೆಟ್ ನಲ್ಲಿ ಕನ್ನಡದಲ್ಲಿ ಮಾತನಾಡುತ್ತಿದ್ದೆ ಎಂದಿದ್ದಾರೆ ರಶ್ಮಿಕಾ. ಟಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ ಪುಷ್ಪ(Pushpa) ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದೆ. ಪುಷ್ಪ  ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅಲ್ಲು ಅರ್ಜನ್ ,ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್ ಭಾಗಿಯಾಗಿದ್ದಾರೆ.

ರಶ್ಮಿಕಾರನ್ನು ಹೊಗಳಿದ ಅಲ್ಲು:

ಪ್ರೆಸ್‌ಮೀಟ್‌ನಲ್ಲಿ ಮಾತನಾಡಿದ ಅಲ್ಲು ಅರ್ಜುನ್, 18 ವರ್ಷ ಇದ್ದಾಗ ನಾನು ಬೆಂಗಳೂರಿಗೆ ಬಂದಿದ್ದೆ. ಆಗ ನನ್ನ ಸಿನಿಮಾ ರಿಲೀಸ್ ಆಗುತ್ತೆ ಅಂತ ನಾನು ಅನ್ಕೊಂಡಿರಲಿಲ್ಲ. ಈಗ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಧನಂಜಯ್ ಸಿನಿಮಾದಲ್ಲಿ ನಟಿಸಿದ್ದಾರೆ. ರಶ್ಮಿಕಾ ಮಂದಣ್ಣ ನ್ಯಾಷನಲ್ ಕ್ರಶ್. ಕನ್ನಡದಿಂದ ಚಿತ್ರರಂಗಕ್ಕೆ ಬಂದ ರಶ್ಮಿಕಾ ಇವತ್ತು ದೇಶಾದ್ಯಂತ ಹೆಸರು ಮಾಡಿದ್ದಾರೆ. ಇದು ಕನ್ನಡಿಗರಿಗೆ ಹೆಮ್ಮೆ ವಿಚಾರ ಎಂದಿದ್ದಾರೆ. ಈ‌ ಸಿನಿಮಾಗೆ ಡಬ್ಬಿಂಗ್ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ. ದೇವಿ ಶ್ರೀ ಪ್ರಸಾದ್ ಅದ್ಭುತವಾದ ಮ್ಯೂಸಿಕ್ ಕೊಟ್ಟಿದ್ದಾರೆ. ಕರ್ನಾಟಕದಲ್ಲಿರೋ ನನ್ನ ಅಭಿಮಾನಿಗಳಿಗೆ ಧನ್ಯವಾದಗಳು ಎಂದಿದ್ದಾರೆ.

ಪುಷ್ಪ ಡಿ.17 ಕ್ಕೆ ವಿಶ್ವದಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದು ಪುಷ್ಪ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಇದೇ ವಾರ ಮೊದಲನೆ ಭಾಗ ರಿಲೀಸ್ ಆಗಲಿದೆ. ಹೀಗಾಗಿ ಬೆಂಗಳೂರಿನಲ್ಕಿ ಪುಷ್ಪ ಸಿನಿಮಾ ಪ್ರಚಾರ ಭರದಿಂದ ಸಾಗಿದೆ.

ಪುಷ್ಪ: ದಿ ರೈಸ್ ಅನ್ನು ಮುತ್ತಂಶೆಟ್ಟಿ ಮೀಡಿಯಾ ಸಹಯೋಗದಲ್ಲಿ ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದೆ. ಮಲಯಾಳಂ ಹಾರ್ಥ್ರೋಬ್ ಫಹಾದ್ ಫಾಸಿಲ್ ಮುಖ್ಯ ವಿಲನ್ ಆಗಿ ನಟಿಸಿದ್ದಾರೆ. ಪುಷ್ಪಾ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ದೂರದ ಭಾಗಗಳಲ್ಲಿ ಕೆಂಪು ಚಂದನದ ಕಳ್ಳಸಾಗಣೆಯ ಕುರಿತಾದ ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದೆ.

"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು?