ಕೊರೋನಾ ಕಾಟ; ಇದೀಗ ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು

Published : Jul 17, 2020, 10:45 PM ISTUpdated : Jul 17, 2020, 10:47 PM IST
ಕೊರೋನಾ ಕಾಟ; ಇದೀಗ ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು

ಸಾರಾಂಶ

ನಟಿ ಐಶ್ವರ್ಯಾ ರೈ  ಬಚ್ಚನ್, ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು/ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು/  ಅಮಿತಾಬ್ ಮತ್ತು ಅಭಿಷೇಕ್ ಈಗಾಗಲೇ ಚಿಕಿತ್ಸೆ ಪಡೆದುಕೊಳ್ಳುತ್ತ ಇದ್ದಾರೆ.

ಮುಂಬೈ (ಜು 17 )  ಬಿಗ್ ಬಿ ಅಮಿತಾಬ್ ಬಚ್ಚನ್ ಕುಟುಂಬಕ್ಕೆ ಕೊರೋನಾ ಕಾಟ ನಿಂತಿಲ್ಲ. ಇದೀಗ  ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಶ್ವರ್ಯಾ ರೈಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಕೆಲ ದಿನಗಳ ಹಿಂದೆ ಖಚಿತವಾಗಿತ್ತು ಈಗ ಐಶ್ವರ್ಯಾ ಜತೆ ಪುತ್ರಿ ಆರಾಧ್ಯ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್ ಸೋಂಕು ತಗುಲಿರುವುದು ಖಚಿತವಾದ ಬಳಿಕ ಐಶ್ವರ್ಯಾ ರೈ ಹೋಂ ಕ್ವಾರಂಟೈನ್‌ನಲ್ಲಿದ್ದರು. ಶುಕ್ರವಾರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಶ್ವರ್ಯಾ ಆರೋಗ್ಯದ ಬಗ್ಗೆ ಆಸ್ಪತ್ರೆ ಇನ್ನೂ  ಅಧಿಕೃತ ಮಾಹಿತಿ ನೀಡಿಲ್ಲ.

ಹೇಗಿದ್ದರು ನೋಡಿ ಬಚ್ಚನ್ ಸೊಸೆ, ಗುರುತೇ ಸಿಗಲ್ಲ

ಈಗಾಗಲೇ  ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಶ್ವರ್ಯಾ ಅವರು ಪುತ್ರಿ ಜೊತೆ ಹೋಂ ಕ್ವಾರಂಟೈನ್‌ನಲ್ಲಿದ್ದರು. ಇಂದು ಅವರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿಗೆ ಇಡಿ ಬಚ್ಚನ್ ಕುಟುಂಬ ನಾನಾವತಿ ಆಸ್ಪತ್ರೆ ಸೇರಿದಂತೆ ಆಗಿದೆ. . ಅಮಿತಾಬ್ ಬಚ್ಚನ್ ಪತ್ನಿ ಜಯಾ ಬಚ್ಚನ್  ಮಾತ್ರ ಕೊರೋನಾದಿಂದ ಬಚಾವ್ ಆಗಿದ್ದಾರೆ. 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಮದುವೆ ಆಗದೇ ಆ ಸ್ಟಾರ್ ನಟನಿಂದ ಮಗುವನ್ನು ಪಡೆಯಲು ಬಯಸಿದ್ದ ಆ ನಟಿಗೆ ಕೊನೆಗೆ ಆಗಿದ್ದೇನು?
ಈಗ್ಲೂ ಬ್ಯಾಚ್ಯುಲರ್ Salman Khan ಡಿಸೆಂಬರ್ 27ಕ್ಕೆ ಹುಟ್ಟಿದ್ದೇ ಒಂಟಿತನಕ್ಕೆ ಕಾರಣವಾಯ್ತಾ?