
ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಇಂದು (ಏಪ್ರಿಲ್ 8) ಹುಟ್ಟುಹಬ್ಬದ ಸಂಭ್ರಮ. ಸ್ಟೈಲಿಶ್ ಸ್ಟಾರ್ ಹುಟ್ಟುಹಬ್ಬಕ್ಕೆ ಅನೇಕ ಸೆಲೆಬ್ರಿಟಿಗಳು, ಅಪಾರ ಸಂಖ್ಯೆಯ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿಂದ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಅಲ್ಲು ಅರ್ಜುನ್ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪುಷ್ಪ ಸಿನಿಮಾದ ಸಕ್ಸಸ್ ನಲ್ಲಿರುವ ಅರ್ಜುನ್ ಅವರಿಗೆ ಡಬಲ್ ಸಂಭ್ರಮ. ಹುಟ್ಟುಹಬ್ಬದ ಆಚರಣೆ ಜೊತೆಗೆ ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆಯನ್ನು ಸೆಲೆಬ್ರೇಶನ್ ಮಾಡುತ್ತಿದ್ದಾರೆ.
ಅಂದಹಾಗೆ ಅಲ್ಲು ಅರ್ಜುನ್ ಸದ್ಯ ವಿದೇಶದಲ್ಲಿದ್ದಾರೆ. ಸಿನಿಮಾ ಕೆಲಸದಿಂದ ಬಿಡುವು ಮಾಡಿಕೊಂಡು ಅಲ್ಲು ಅರ್ಜುನ್ ವಿದೇಶಕ್ಕೆ ಹಾರಿದ್ದಾರೆ. ತನ್ನ ಕುಟುಂಬದ ಜೊತೆ ಸರ್ಬಿಯಾದಲ್ಲಿರುವ ಅಲ್ಲು ಅರ್ಜುನ್ ಅಲ್ಲೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮ್ಮ ಆಪ್ತರಾದ 50 ಜನ ಸ್ನೇಹಿತರೊಂದಿಗೆ ಸೆರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಪುಷ್ಪ ಚಿತ್ರದ ಮೂಲಕ ಯಶಸ್ಸಿನ ದೊಡ್ಡ ಅಲೆಯನ್ನೇ ಎಬ್ಬಿಸಿರುವ ಇವರು ಎಲ್ಲೆಡೆ ಬಹುದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಪ್ರವಾಹವನ್ನೇ ಸೃಷ್ಟಿಸಿದೆ.
ದೇಶದಾದ್ಯಂತ ವಿವಿಧ ನಗರಗಳಲ್ಲಿ ಅಭಿಮಾನಿ ಸಂಘಗಳು ಸ್ಟೈಲಿಶ್ ಸ್ಟಾರ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ 100 ದಿನಗಳ ಮುಂಚೆಯೇ ಆಚರಣೆಗಳು ಪ್ರಾರಂಭವಾಗಿದ್ದವು. ಹಲವೆಡೆ ಅಭಿಮಾನಿಗಳು ಆಹಾರವನ್ನು ವಿತರಿಸಿವುದರ ಜೊತೆಗೆ ಅನಾಥಾಶ್ರಮಗಳು ಮತ್ತು ವೃದ್ಧಾಶ್ರಮಗಳಿಗೆ ಭೇಟಿ ನೀಡಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಕೆಲವು ಕಡೆಗಳಲ್ಲಿ ಅಭಿಮಾನಿಗಳು ಸಸಿಗಳನ್ನು ನೆಡುವಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಆಚರಿಸಿದರು. ಇನ್ನು ಅಲ್ಲು ಅರ್ಜುನ್ ಅವರಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮದ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
10 ಕ್ಲಾಸ್ ಉತ್ತರ ಪತ್ರಿಕೆಯಲ್ಲಿ ಅಲ್ಲು ಅರ್ಜುನ್ ಪುಷ್ಪ ಡೈಲಾಗ್ ಬರೆದ ಯುವಕ, ಶಿಕ್ಷಕರೇ ಶಾಕ್!
ಅಲ್ಲು ಅರ್ಜುನ್ ಹುಟ್ಟುಹಬ್ಬ ಆಚರಣೆಗೆ ವಿದೇಶಕ್ಕೆ ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪತ್ನಿ ಸ್ನೇಹ ಮತ್ತು ಇಬ್ಬರು ಮಕ್ಕಳಾದ ಅಯಾನ್ ಮತ್ತು ಅರ್ಹಾ ಜೊತೆ ವಿದೇಶಕ್ಕೆ ಹಾರಿದ್ದರು. ಅಂದಹಾಗೆ ಪುಷ್ಪ-2 ಚಿತ್ರೀಕರಣ ಪ್ರಾರಂಭವಾಗುವ ಮೊದಲು ಕುಟುಂಬದ ಜೊತೆ ವಿದೇಶಿ ಪ್ರವಾಸ ಎಂಜಾಯ್ ಮಾಡಿ ವಾಪಾಸ್ ಆಗುವ ಯೋಜನೆಯೊಂದಿಗೆ ಅಲ್ಲು ವಿದೇಶಿ ಫ್ಲೈಟ್ ಹತ್ತಿದ್ದಾರೆ.
Allu Arjun Birthday; ವಿದೇಶಕ್ಕೆ ಹಾರಿದ ಸ್ಟೈಲಿಶ್ ಸ್ಟಾರ್, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ
ಅಲ್ಲು ಅರ್ಜುನ್ ಸದ್ಯ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡ ಬಳಿಕ ಪಾರ್ಟ್-2 ಮೇಲೆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಮಲಯಾಳಂನ ಖ್ಯಾತ ನಟ ಫಹಾದ್ ಫಾಸಿಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಭಾಗದ ಕೊನೆಯಲ್ಲಿ ಬಂದಿದ್ದ ಫಹಾದ್, ಪಾರ್ಟ್-2ನಲ್ಲಿ ಅಬ್ಬರಿಸಲಿದ್ದಾರೆ. ಪುಷ್ಪ ಸಿನಿಮಾ ಬಳಿಕ ಅಲ್ಲು ಅರ್ಜುನ್ ಮಾರುಕಟ್ಟೆ ಕೂಡ ದೊಡ್ಡದಾಗಿದೆ. ಹಿಂದಿಯಲ್ಲೂ ಅತೀ ಹೆಚ್ಚು ಬೇಡಿಕೆ ಸೃಷ್ಟಿಯಾಗಿದೆ. ಹಾಗಾಗಿ ಮುಂದಿನ ಸಿನಿಮಾದ ಮೇಲು ನಿರೀಕ್ಷೆ ಹೆಚ್ಚಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.