ಪುಷ್ಪ ಚಿತ್ರ ಭಾರಿ ಸದ್ದು ಮಾಡಿದ್ದ ಬೆನ್ನಲ್ಲೇ ಈಗ ಪುಷ್ಪ- 2 ಚಿತ್ರವೂ ಸದ್ದು ಮಾಡುತ್ತಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಸಾವಿರ ಕೋಟಿ ರೂಪಾಯಿ ಬಾಚಿಕೊಂಡಿರುವುದಾಗಿ ಹೇಳಲಾಗುತ್ತಿದೆ. ಏನಿದು ಸುದ್ದಿ?
ಅಲ್ಲು ಅರ್ಜುನ್ (Allu Arjun) ಅಭಿನಯದ ಪುಷ್ಪ ಸಿನಿಮಾ ದೇಶದಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿ ದಾಖಲೆ ಬರೆದಿತ್ತು. ಹಲವು ದಾಖಲೆಗಳನ್ನು ಹಿಂದಿಕ್ಕಿತ್ತು. ಈಗ ಪುಷ್ಪ-2 ತೆರೆ ಮೇಲೆ ಬರಲು ಸಜ್ಜಾಗಿ ನಿಂತಿದೆ. ಮೊದಲ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ (Rashmika Mandanna) ಕಾಣಿಸಿಕೊಂಡಿದ್ದರೆ, Pushpa 2ದಲ್ಲಿ ಸಾಯಿ ಪಲ್ಲವಿ ಸಾಥ್ ನೀಡ್ತಿದ್ದಾರೆ ಎನ್ನಲಾಗಿದೆ. ಆದರೆ ಈಕೆ ನಾಯಕಿಯಲ್ಲ, ಬದಲಿಗೆ 10 ನಿಮಿಷಗಳ ಪಾತ್ರದಲ್ಲಿ ಮಿಂಚಲಿದ್ದಾರೆ ಎಂಬ ಸುದ್ದಿ ಇದೆ. ಸಾಯಿ ಪಲ್ಲವಿ ಕಥೆಗೆ ತಿರುವು ನೀಡುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬುಡಕಟ್ಟು ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೂ ಇದೆ. ರಶ್ಮಿಕಾ ಮಂದಣ್ಣನವರೇ ಇದರಲ್ಲಿಯೂ ನಾಯಕಿ ಎಂದೂ ಹೇಳಲಾಗುತ್ತಿದೆ. ಇದಕ್ಕೂ ಮುನ್ನ ರಶ್ಮಿಕಾ ಬದಲು ಸಾಯಿ ಪಲ್ಲವಿ ನಾಯಕಿ ಎನ್ನಲಾಗಿತ್ತು. ಈ ಎಲ್ಲ ಕುತೂಹಲಕ್ಕೆ ಸದ್ಯವೇ ತೆರೆ ಬೀಳಲಿದೆ. ಆದರೆ ಬಾಲಿವುಡ್ (Bollywood) ಅಂಗಳದಲ್ಲೂ ಭಾರೀ ಸದ್ದು ಮಾಡಿದ್ದ ಪುಷ್ಪ ಸಿನಿಮಾದಂತೆಯೇ ಪುಷ್ಪ 2 ಕೂಡ ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ.
ಪುಷ್ಪ 2 ಸಿನಿಮಾವನ್ನು ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿಯಲ್ಲಿ ರಿಲೀಸ್ (release) ಮಾಡಲು ಚಿತ್ರತಂಡ ನಿರ್ಧರಿಸಿದೆ. ಏಕಾಕಾಲದಲ್ಲಿ ದೇಶ-ವಿದೇಶಗಳಲ್ಲಿ ಪುಷ್ಪ 2 ಚಿತ್ರ ರಿಲೀಸ್ ಆಗಲಿದೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಸಿನಿಮಾ ಮೇಕರ್ಸ್ ಎಲ್ಲಾ ಭಾಷೆಗಳ ಥಿಯೇಟ್ರಿಕಲ್ ರೈಟ್ಸ್ (Theatric rights) ಡೀಲ್ಗಾಗಿ ಒಂದು ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬೇಡಿಕೆ ಇಟ್ಟಿದ್ದಾರೆ ಎಂದು Siasat.com ವರದಿಯಲ್ಲಿ ಉಲ್ಲೇಖ ಮಾಡಿದೆ. ಇದು ನಿಜವೇ ಆಗಿದ್ದರೆ, ಪುಷ್ಪ 2 ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಹಣವನ್ನು ಕೊಳ್ಳೆ ಹೊಡೆಯಲಿದೆ. ಪುಷ್ಪ 2 ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಈಗಿರುವ ಟ್ರೆಂಡ್ ಗಮನಿಸಿದರೆ ಇದು ಎಸ್ಎಸ್ ರಾಜಮೌಳಿಯವರ RRR ದಾಖಲೆಗಳನ್ನು ಉಡೀಸ್ ಮಾಡುತ್ತದೆ ಎಂದೇ ಸಿನಿ ಪ್ರಿಯರು ಆಡಿಕೊಳ್ಳುತ್ತಿದ್ದಾರೆ.
'ಪುಷ್ಪ-2' ಮುಗಿಯೋ ಮೊದಲೇ ಮತ್ತೊಂದು ಸಿನಿಮಾದಲ್ಲಿ ಅಲ್ಲು ಅರ್ಜುನ್; ನಿರ್ದೇಶಕ ಯಾರು?
ಇದಕ್ಕೆ ಕಾರಣವೂ ಇದೆ. ಜೂನಿಯರ್ ಎನ್ಟಿಆರ್ (Jr NTR) ಹಾಗೂ ರಾಮ್ ಚರಣ್ ಸಿನಿಮಾ RRR ಥಿಯೇಟ್ರಿಕಲ್ ಹಕ್ಕುಗಳಲ್ಲಿ 900 ಕೋಟಿಗಳ ಗಳಿಸಿತ್ತು. ಈಗಿನ ವರದಿಯ ಪ್ರಕಾರ, ಪುಷ್ಪ 2 ಸಿನಿಮಾ ಥಿಯೇಟ್ರಿಕಲ್ ರೈಟ್ಸ್ ನೀಡಲು 1000 ಕೋಟಿ (Thousand crores) ಬೇಡಿಕೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಹೊಸ ದಾಖಲೆ ಬರೆಯುವ ತವಕದಲ್ಲಿದೆ ಎಂದು ಹೇಳಲಾಗುತ್ತಿದೆ. ಪುಷ್ಪ 2 ಚಿತ್ರದ ಶೂಟಿಂಗ್ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಬನ್ನಿ ಅಭಿಮಾನಿಗಳು ಈ ಚಿತ್ರದ ಅಪ್ಡೇಟ್ಗಾಗಿ ಕಾಯುತ್ತಿದ್ದಾರೆ. ಅಲ್ಲು ಅರ್ಜುನ್ ಸದ್ಯ ಪುಷ್ಪ 2 ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ (Busy) ಆಗಿದ್ದಾರೆ. ನಿರ್ದೇಶಕ ಸುಕುಮಾರ್ (Sukumar) ತಡ ಮಾಡದೇ ಬೇಗ ಬೇಗ ಶೂಟಿಂಗ್ ಕಂಪ್ಲೀಟ್ ಮಾಡುವ ಆತುರದಲ್ಲಿದ್ದಾರೆ.
ಅಂದಹಾಗೆ,`ಪುಷ್ಪ-2 ಚಿತ್ರೀಕರಣ ಮುಗಿಯೋ ಮೊದಲೇ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾಗೆ ಸಹಿ (Signature) ಮಾಡಿದ್ದಾರೆ. ಪುಷ್ಪ-2 ಬಳಿಕ ಅಲ್ಲು ಅರ್ಜುನ್ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಆದರೀಗ ಕುತೂಹಲಕ್ಕೆ ತೆರೆಬಿದ್ದಿದೆ. ಪ್ಯಾನ್ ಇಂಡಿಯಾ ಸ್ಟಾರ್ ಇದೀಗ ತೆಲುಗಿನ ಖ್ಯಾತ ನಿರ್ದೇಶಕ ʻಅರ್ಜುನ್ ರೆಡ್ಡಿʼ ಖ್ಯಾತಿಯ ಸಂದೀಪ್ ರೆಡ್ಡಿ ವಾಂಗ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ.
Valentines Day: ಬೆಡ್ರೂಮಲ್ಲಿ ತಬ್ಬಿ ಮುದ್ದಾಡಿದ ವೀಡಿಯೋ ಪೋಸ್ಟ್ ಮಾಡಿದ ರಶ್ಮಿಕಾ ಮಂದಣ್ಣ!