15 ವರ್ಷದ ವೈವಾಹಿಕ ಜೀವನದ ನಂತರ ಬೇರಾಗುತ್ತಿದ್ದಾರೆ ಅಮೀರ್-ಕಿರಣ್

Published : Jul 03, 2021, 12:09 PM ISTUpdated : Jul 03, 2021, 04:38 PM IST
15 ವರ್ಷದ ವೈವಾಹಿಕ ಜೀವನದ ನಂತರ ಬೇರಾಗುತ್ತಿದ್ದಾರೆ ಅಮೀರ್-ಕಿರಣ್

ಸಾರಾಂಶ

ಬಾಲಿವುಡ್ ನಟ ಅಮೀರ್ ಖಾನ್-ಕಿರಣ್ ರಾವ್ ವಿಚ್ಛೇದನೆ 15 ವರ್ಷದ ನಂತರ ಬೇರ್ಪಡುತ್ತಿರುವ ಲಗಾನ್ ಜೋಡಿ

ಬಾಲಿವುಡ್‌ನ ಫೇಮಸ್ ಸೆಲೆಬ್ರಿಟಿ ಜೋಡಿ ಅಮೀರ್ ಖಾನ್ ಮತ್ತೆ ಕಿರಣ್ ರಾವ್ ತಮ್ಮ ವಿಚ್ಛೇದನೆಯನ್ನು ಘೋಷಿಸಿದ್ದಾರೆ. ಅಮೀರ್‌ಖಾನ್ ಮತ್ತು ಅವರ ಪತ್ನಿ ಕಿರಣ್‌ರಾವ್ ಜಂಟಿ ಹೇಳಿಕೆಯಲ್ಲಿ ಮದುವೆಯಾದ 15 ವರ್ಷಗಳ ನಂತರ ಬೇರೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.

"ನಾವು ನಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ - ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರು ಮತ್ತು ಕುಟುಂಬವಾಗಿ ಜೊತೆ ಇರಲಿದ್ದೇವೆ" ಎಂದು ದಂಪತಿಗಳು ಹೇಳಿದ್ದಾರೆ.

ಅಮೀರ್ ಖಾನ್ ಬಾಳಲ್ಲಿ ಹೊಸ ಗೆಳತಿ: ಶೀಘ್ರದಲ್ಲೇ ಕಿರಣ್ ರಾವ್'ಗೆ ಸೋಡಾ ಚೀಟಿ !

ಈ 15 ಸುಂದರ ವರ್ಷಗಳಲ್ಲಿ ನಾವು ಜೀವಮಾನದ ಅನುಭವಗಳು, ಸಂತೋಷ ಮತ್ತು ನಗೆಯನ್ನು ಹಂಚಿಕೊಂಡಿದ್ದೇವೆ ಮತ್ತು ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ. ಈಗ ನಾವು ನಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ - ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರು ಮತ್ತು ಕುಟುಂಬವಾಗಿರುತ್ತೇವೆ ಎಂದಿದ್ದಾರೆ ಕಿರಣ್ ರಾವ್.

ದಂಪತಿಗಳು ತಮ್ಮ ಮಗ ಆಜಾದ್ ರಾವ್ ಖಾನ್ ಅವರ ಸಹ-ಪೋಷಕರಾಗುತ್ತಾರೆ. ಜೊತೆಗೆ ಪಾನಿ ಫೌಂಡೇಶನ್ ಮತ್ತು ‘ಅವರು (ಅವರು) ಭಾವೋದ್ರಿಕ್ತರಾಗಿರುವ ಇತರ ಯೋಜನೆಗಳ ವೃತ್ತಿಪರ ಸಹಭಾಗಿತ್ವವನ್ನು ಮುಂದುವರಿಸುತ್ತಾರೆ’ ಎಂದು ಹೇಳಿದ್ದಾರೆ.

ಲಗಾನ್ ಚಿತ್ರೀಕರಣದ ಸಮಯದಲ್ಲಿ ಅಮೀರ್ ಮತ್ತು ಕಿರಣ್ ಮೊದಲ ಬಾರಿಗೆ ಭೇಟಿಯಾದರು. ಇದರಲ್ಲಿ ಅಮೀರ್ ಖಾನ್ ಪ್ರಮುಖ ಪಾತ್ರವನ್ನು ನಿರ್ವಹಿಸಿದರು. ಅವರು ಕಿರಣ್ ಸಹಾಯಕ ನಿರ್ದೇಶಕಿಯಾಗಿದ್ದರು. ಅವರು ಡಿಸೆಂಬರ್ 28, 2005 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಮೀರ್ ಅದಕ್ಕೂ ಮುನ್ನ ರೀನಾ ದತ್ತಾ ಅವರನ್ನು ಮದುವೆಯಾಗಿದ್ದರು. ಮೊದಲ ಮದುವೆಯಲ್ಲಿ ಜುನೈದ್ ಖಾನ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ.

ಈ ಹಿಂದೆಯೇ ಬೇರೆ ಬೇರೆಯಾಗಿ ವಾಸಿಸುತ್ತಿದ್ದ ಅಮೀರ್ ಹಾಗೂ ಕಿರಣ್ ಮಕ್ಕಳ ವಿಚಾರಕ್ಕೆ ಬಂದಾಗ ಮಾತ್ರ ಒಂದಾಗುತ್ತಿದ್ದರು. ಒಟ್ಟಿಗೇ ವೆಕೇಷನ್, ಟ್ರಿಪ್‌ಗಳನ್ನು ಎಂಜಾಯ್ ಮಾಡುತ್ತಿದ್ದರು. ಲಾಕ್‌ಡೌನ್ ಸಮಯದಲ್ಲೂ ಈ ಜೋಡಿ ಮಕ್ಕಳೊಂದಿಗೆ ಜೊತೆಯಾಗಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

3 idiots 2 : ಬಾಕ್ಸ್ ಆಫೀಸ್ ನಲ್ಲಿ ಸುನಾಮಿ, ಬರ್ತಿದೆ 3 ಈಡಿಯಟ್ಸ್ ಸೀಕ್ವೆಲ್
ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!