ಅನಿಮಲ್​ ಚಿತ್ರಕ್ಕಾಗಿ ಸಂಪೂರ್ಣ ಬೆತ್ತಲಾದ ನಟಿ ತೃಪ್ತಿ: ಸಿನಿಮಾದಲ್ಲಿ ಕತ್ತರಿ ಹಾಕಿದ್ದ ವಿಡಿಯೋ ವೈರಲ್​!

Published : Dec 03, 2023, 05:22 PM IST
ಅನಿಮಲ್​ ಚಿತ್ರಕ್ಕಾಗಿ ಸಂಪೂರ್ಣ ಬೆತ್ತಲಾದ ನಟಿ ತೃಪ್ತಿ: ಸಿನಿಮಾದಲ್ಲಿ ಕತ್ತರಿ ಹಾಕಿದ್ದ ವಿಡಿಯೋ ವೈರಲ್​!

ಸಾರಾಂಶ

ಅನಿಮಲ್​ ಚಿತ್ರಕ್ಕಾಗಿ ನಟ ರಣಬೀರ್​ ಕಪೂರ್​ ಜೊತೆ ಸಂಪೂರ್ಣ ಬೆತ್ತಲಾಗಿದ್ದಾರೆ ನಟಿ ತೃಪ್ತಿ ಡಿಮ್ರಿ. ಸಿನಿಮಾದಲ್ಲಿ ಕತ್ತರಿ ಹಾಕಿದ್ದ ವಿಡಿಯೋ ವೈರಲ್​ ಆಗಿದೆ.   

 ನಟ ರಣಬೀರ್‌ ಕಪೂರ್‌ (Ranbir Kapoor)  ಮತ್ತು ರಶ್ಮಿಕಾ ಮಂದಣ್ಣ ಅವರ ಅನಿಮಲ್‌ ಚಿತ್ರ ಇದೇ 1ರಂದು ಬಿಡುಗಡೆಯಾಗಿದ್ದು, ಭಾರಿ  ಸದ್ದು ಮಾಡುತ್ತಿದೆ.  ಅಡಲ್ಟ್​ ಸರ್ಟಿಫಿಕೇಟ್​ ಪಡೆದಿರುವ ಈ ಚಿತ್ರದಲ್ಲಿನ ಕೆಲವು ಹಸಿಬಿಸಿ ದೃಶ್ಯಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಇದಾಗಲೇ ಕತ್ತರಿ ಹಾಕಿದೆ. ಕತ್ತರಿ ಹಾಕಿದ  ಮೇಲಷ್ಟೇ ಚಿತ್ರ ಬಿಡುಗಡೆಯಾಗಿದೆ. ಚಿತ್ರ ಬಿಡುಗಡೆಗೂ ಮೊದಲು ರಿಲೀಸ್​ ಆಗಿದ್ದ ಹಾಡೊಂದು ಹಲ್​ಚಲ್​ ಸೃಷ್ಟಿಸಿತ್ತು. ಅದರಲ್ಲಿ  ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರ ಲಿಪ್​ಲಾಕ್​ ಸೀನ್​ ನೋಡಿ ಫ್ಯಾನ್ಸ್​ ಉಫ್​ ಎಂದಿದ್ದರು.  .  ವಿಮಾನವೊಂದರಲ್ಲಿ ರಶ್ಮಿಕಾ ಮಂದಣ್ಣ, ಆಲಿಯಾ ಕಪೂರ್​ ಪತಿ ರಣಬೀರ್​ ಜೊತೆ ದೀರ್ಘ ಲಿಪ್​ಲಾಕ್​  ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು, ಈಗಲೂ ಅದು ಸಾಕಷ್ಟು ವೈರಲ್​ ಆಗುತ್ತಲೇ ಇದೆ.  ಇವರಿಬ್ಬರ ಈ ಸುದೀರ್ಘ ಚುಂಬನ ನೋಡಿ ಫ್ಯಾನ್ಸ್​ ಉಫ್​ ಎಂದಿದ್ದರು. ಆದರೆ ಇಂಥ ದೃಶ್ಯಗಳು ಚಿತ್ರಗಳಲ್ಲಿ ಹೇರಳವಾಗಿರುವ ಕಾರಣ ಎಲ್ಲಾ ದೃಶ್ಯಗಳನ್ನೂ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಕಟ್​ ಮಾಡುವಂತೆ ಆದೇಶಿಸಿದೆ. ಈ ಚಿತ್ರದಲ್ಲಿ ಇಂಟಿಮೇಟ್​ ಸೀನ್​ ಹೇರಳವಾಗಿರುವ ಕಾರಣ, ಅಡಲ್ಟ್​ ಸರ್ಟಿಫಿಕೇಟ್​ (A Certificate) ನೀಡಲಾಗಿದ್ದರೂ, ಕೆಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಮಂಡಳಿ ನಿರ್ದೇಶಿಸಿತ್ತು.

ಅಷ್ಟಕ್ಕೂ, ಚಿತ್ರ ಬಿಡುಗಡೆಯಾಗಿ ಮೂರೇ ದಿನದಲ್ಲಿ 230 ಕೋಟಿ ರೂಪಾಯಿಗಳನ್ನು ಗಳಿಸಿದೆ.  ಅನಿಮಲ್​ (Animal) ಚಿತ್ರ ಬಿಡುಗಡೆಗೂ ಮುನ್ನವೇ ಜವಾನ್​ ಮತ್ತು ಬ್ರಹ್ಮಾಸ್ತ್ರದ ದಾಖಲೆಗಳನ್ನು ಮುರಿದು ಹಾಕಿದೆ. ಉತ್ತರ ಅಮೆರಿಕದಲ್ಲಿ 888 ಪರದೆಗಳಲ್ಲಿ ರಿಲೀಸ್ ಆಗುತ್ತಿದ್ದು, ಇಲ್ಲಿಯ ಸ್ಕ್ರೀನಿಂಗ್​ಗೆ ಸಂಬಂಧಿಸಿದಂತೆ ಅನಿಮಲ್​ ದಾಖಲೆ ಬರೆದಿದೆ.  ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಹಾಗೂ ರಶ್ಮಿಕಾ ತೆಲುಗಿನಲ್ಲಿ ಫೆಮಿಲಿಯರ್ ಆಗಿರುವುದರಿಂದ ತೆಲುಗಿನಲ್ಲಿ ತಮಿಳಿಗಿಂತ ಅಧಿಕ ಟಿಕೆಟ್ ಸೇಲ್ ಆಗಿದೆ. ಹಿಂದಿಯಲ್ಲಿಯೂ ಒಳ್ಳೆಯ ರೀತಿಯಲ್ಲಿ ಟಿಕೆಟ್​ ಮಾರಾಟವಾಗಿದೆ.  ಪ್ಯಾನ್ ಇಂಡಿಯಾ ಸಿನಿಮಾವನ್ನು ಕಬೀರ್ ಸಿಂಗ್ ಹಾಗೂ ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ  ಅನಿಲ್ ಕಪೂರ್, ಬಾಬಿ ಡಿಯೋಲ್,  ತೃಪ್ತಿ ದಿಮ್ರಿಯೂ ನಟಿಸಿದ್ದಾರೆ.  ಭೂಷಣ್ ಕುಮಾರ್ ಹಾಗೂ ಕೃಷ್ಣ ಕುಮಾರ್ ಅವರ ಟಿ ಸಿರೀಸ್ ಈ ಸಿನಿಮಾವನ್ನು ನಿರ್ಮಿಸಿದೆ.  ಸಿನಿಮಾ ಹಿಂದಿ, ತಮಿಳು, ಕನ್ನಡ, ಮಲಯಾಳದಲ್ಲಿ ರಿಲೀಸ್ ಆಗಿದೆ.

ರಣಬೀರ್​ ಕಪೂರ್​- ರಶ್ಮಿಕಾ ಬೆಡ್​ರೂಮ್​ ಸೀನ್​ ಲೀಕ್​: ಇನ್ನೇನ್​ ಉಳಿಸಿದ್ಯಪ್ಪಾ ಎಂದು ಕೇಳಿದ ಫ್ಯಾನ್ಸ್​

ಸೆನ್ಸಾರ್​ ಮಂಡಳಿ ಹಲವು ದೃಶ್ಯಗಳಿಗೆ ಕತ್ತರಿ ಹಾಕಿದ್ದರೂ ರಶ್ಮಿಕಾ ಮಂದಣ್ಣ ಜೊತೆಗಿನ ಬೆಡ್​ರೂಮ್​ ಸೀನ್​ ಲೀಕ್​ ಆಗಿರುವ ಬೆನ್ನಲ್ಲೇ, ರಣಬೀರ್​ ಜೊತೆ ಇನ್ನೋರ್ವ ನಟಿ ಸಂಪೂರ್ಣವಾಗಿ ಬೆತ್ತಲಾಗಿದ್ದ ವಿಡಿಯೋ ವೈರಲ್​ ಆಗಿದೆ.  ಇವರಿಬ್ಬರ ಲಿಪ್​ಲಾಕ್​ ಸೀನ್​ ಹಾಗೂ ಬೆಡ್​ ಮೇಲಿನ ದೃಶ್ಯಗಳು ವೈರಲ್​ ಆಗಿವೆ. ಅಷ್ಟಕ್ಕೂ ಈ ನಟಿಯ ಹೆಸರು ತೃಪ್ತಿ ಡಿಮ್ರಿ. 2017 ರಲ್ಲಿ ಶ್ರೀದೇವಿ ಅಭಿನಯದ ಮಾಮ್ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡ ತೃಪ್ತಿ ಡಿಮ್ರಿ ಇದೀಗ ರಣಬೀರ್​ ಕಪೂರ್​ ಜೊತೆ ಬೆತ್ತಲಾಗಿ ಚಿತ್ರೀಕರಣ ಮಾಡಿದ್ದಾರೆ. ಅಂದಹಾಗೆ, ಈ ಹಿಂದೆ ತೃಪ್ತಿ ನಾಗಿನ್ ಸೀರೀಸ್ 3ರಲ್ಲಿ ಕಾಣಿಸಿಕೊಂಡಿದ್ದರು. ಈಗ ಬೆಳ್ಳಿತೆರೆ ಮೇಲೆ ಆಫರ್ ಗಳು ಬರುತ್ತಿವೆ. ಆದರೆ ಸೆನ್ಸಾರ್‌ ಬಿಡುಗಡೆಗೂ ಮುನ್ನ ಅತಿಯಾದ ರೋಮ್ಯಾಂಟಿಕ್ ಬೋಲ್ಡ್ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿತ್ತು. ಆದರೂ ಇದೆಲ್ಲದರ ಹೊರತಾಗಿ ತೃಪ್ತಿ ಅವರ ಗ್ಲಾಮರ್ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. 


ಇದೇವೇಳೆ, ರಶ್ಮಿಕಾ ಮಂದಣ್ಣ ಜೊತೆಗಿನ  ಹಸಿಬಿಸಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ಇದನ್ನು ನೋಡಿ ಆಲಿಯಾ ಭಟ್​ ಪತಿ ರಣಬೀರ್​ ಕಪೂರ್​ಗೆ ಫ್ಯಾನ್ಸ್​ ಇನ್ನೇನು ಬಾಕಿ ಉಳಿಸಿದ್ಯಪ್ಪಾ ಎಂದು ಪ್ರಶ್ನಿಸುತ್ತಿದ್ದಾರೆ!  ಮತ್ತೆ ಕೆಲವರು ಇದೇ ಕಾರಣಕ್ಕೆ ರಶ್ಮಿಕಾರನ್ನು ನೋಡಿ ಆಲಿಯಾ ಭಟ್​ ಉರಿದುಕೊಂಡಿರುವುದು ಎಂದು ಕಾಲೆಳೆಯುತ್ತಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂದರೆ,  ಅನಿಮಲ್‌ ಚಿತ್ರ ಭರ್ಜರಿ ಓಡುತ್ತಿರುವ ನಡುವೆಯೇ, ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಮತ್ತು ಆಲಿಯಾ ಭಟ್‌ ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಅವರು ತಬ್ಬಿಕೊಂಡಿದ್ದಾರೆ. ಆದರೆ ರಶ್ಮಿಕಾ ಆಲಿಯಾ ಅವರನ್ನು ಸರಿಯಾಗಿ ಹಗ್‌ ಮಾಡದೇ ಇರುವುದು ಗಮನ ಸೆಳೆದರೆ, ಅದೇ ಇನ್ನೊಂದೆಡೆ ಆಲಿಯಾ ಭಟ್‌ ರಶ್ಮಿಕಾರನ್ನು ನೋಡಿ ಅಸಡ್ಡೆಯಿಂದ ಹಗ್‌ ಮಾಡಿರುವುದನ್ನು ನೋಡಬಹುದು. 

ಅನುಕಂಪ ಗಿಟ್ಟಿಸಿಕೊಳ್ಳಲು ಸುಳ್ಳು ಹೇಳಿ ತಗ್ಲಾಕೊಂಡ್ರಾ ಪ್ರತಾಪ್​? 2 ದಿನಗಳಲ್ಲಿ ತಪ್ಪು ಒಪ್ಪಿಕೊಳ್ಳದಿದ್ರೆ ಕೇಸ್​ ದಾಖಲು!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?