
ಟಾಲಿವುಡ್‌ನಲ್ಲಿ ಸ್ಟಾರ್ ನಟ ಬಾಲಕೃಷ್ಣ ಅವರ ವೃತ್ತಿಜೀವನ ಉತ್ತುಂಗದಲ್ಲಿದೆ. ನಾಲ್ಕು ಚಿತ್ರಗಳ ಯಶಸ್ಸಿನೊಂದಿಗೆ ಖುಷಿಯಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ರಾಜಕೀಯದಲ್ಲೂ ಯಶಸ್ಸು ಕಾಣುತ್ತಿದ್ದಾರೆ. 'ಅನ್‌ಸ್ಟಾಪಬಲ್ ವಿತ್ ಎನ್‌ಬಿಕೆ' ಕಾರ್ಯಕ್ರಮದ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ್ದಾರೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಈಗ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ತೆಲುಗು ಚಿತ್ರರಂಗದಲ್ಲಿ ಈ ಬಾರಿ ಒಬ್ಬರಿಗೆ ಮಾತ್ರ ಪದ್ಮ ಪ್ರಶಸ್ತಿ ಲಭಿಸಿದೆ.
ಪದ್ಮಭೂಷಣ ಅನಂತ್ ನಾಗ್‌ಗೆ ಶುಭ ಕೋರಿದ ಅಲ್ಲು ಅರ್ಜುನ್; ಆದ್ರೆ ಬಾಲಕೃಷ್ಣಗೆ ಹೇಳಿದ್ದೇನು?
ಪ್ರಶಸ್ತಿ ಬಂದ ಬೆನ್ನಲ್ಲೇ ಬಾಲಕೃಷ್ಣ ಅವರ ಹಳೆಯ ವಿಡಿಯೋವೊಂದನ್ನು ವೈರಲ್ ಮಾಡಲಾಗುತ್ತಿದೆ. ಈ ವಿಡಿಯೋದಲ್ಲಿ ಅವರು ಭಾರತ ರತ್ನ ಪ್ರಶಸ್ತಿಯ ಬಗ್ಗೆ ಮಾತನಾಡಿದ್ದಾರೆ. ಎನ್‌ಟಿಆರ್‌ಗೆ ಭಾರತ ರತ್ನ ಸಿಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂದರ್ಶನವೊಂದರಲ್ಲಿ ಬಾಲಕೃಷ್ಣ, 'ರಾಮರಾವ್‌ಗೆ ಭಾರತ ರತ್ನ ಅಂದ್ರೆ ಅವರ ಕಾಲ್ಬೆರಳಿನಷ್ಟು ಮೌಲ್ಯ. ಅದನ್ನು ಕೊಟ್ಟವರಿಗೆ ಗೌರವ ಇರಬಹುದು, ಆದರೆ ಅವರಿಗೆ ಏನು ಗೌರವ?' ಎಂದು ಹೇಳಿದ್ದಾರೆ.
ಪದ್ಮಭೂಷಣ ಪ್ರಶಸ್ತಿ ವಿಜೇತ ಬಾಲಯ್ಯಗೆ ಆ ನಟ ಮಾತ್ರ ವಿಶ್ ಮಾಡ್ಲಿಲ್ಲೇಕೆ? ಏನಿದು ವೈರತ್ವ?
ಈ ವಿಡಿಯೋ ವೈರಲ್ ಆಗುತ್ತಿದ್ದು, ಬಾಲಕೃಷ್ಣ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಭಾರತ ರತ್ನವನ್ನು ಟೀಕಿಸಿದವರಿಗೆ ಪದ್ಮಭೂಷಣ ಹೇಗೆ ಕೊಡುತ್ತಾರೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.