ಬೆಂಗಳೂರಿನ ಈ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರು

Published : May 27, 2022, 06:02 PM IST
ಬೆಂಗಳೂರಿನ ಈ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರು

ಸಾರಾಂಶ

ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅಗಲಿಕೆ ಬಳಿಕ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿನ ರಸ್ತೆ ಸರ್ಕಲ್‌ಗಳಿಗೆ ಪುನೀತ್ ರಾಜಕುಮಾರ್ ಹೆಸರನ್ನು ಇಡಲಾಗಿದೆ. ಅದರಂತೆ ಬೆಂಗಳೂರಿನ ರಸ್ತೆಗೂ ಪುನೀತ್ ಹೆಸರು ಇಡಬೇಕು ಎಂಬ ಕೂಗು ಕೇಳಿಬಂದಿದ್ದು, ಅಭಿಮಾನಗಳ ಆಶಯದಂತೆ ಬೆಂಗಳೂರಿನ 12 ಕಿ. ಮೀ ಉದ್ದದ ರಸ್ತೆಗೆ ಪವರ್ ಸ್ಟಾರ್ ಪುನೀತ್ ಹೆಸರನ್ನು ಇಡಲಾಗ್ತಿದೆ.

ವಿಕ್ರಮ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್ ಬೆಂಗಳೂರು

ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅಗಲಿಕೆ ಬಳಿಕ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿನ ರಸ್ತೆ ಸರ್ಕಲ್‌ಗಳಿಗೆ ಪುನೀತ್ ರಾಜಕುಮಾರ್ ಹೆಸರನ್ನು ಇಡಲಾಗಿದೆ. ಅದರಂತೆ ಬೆಂಗಳೂರಿನ ರಸ್ತೆಗೂ ಪುನೀತ್ ಹೆಸರು ಇಡಬೇಕು ಎಂಬ ಕೂಗು ಕೇಳಿಬಂದಿದ್ದು, ಅಭಿಮಾನಗಳ ಆಶಯದಂತೆ ಬೆಂಗಳೂರಿನ 12 ಕಿ. ಮೀ ಉದ್ದದ ರಸ್ತೆಗೆ ಪವರ್ ಸ್ಟಾರ್ ಪುನೀತ್ ಹೆಸರನ್ನು ಇಡಲಾಗ್ತಿದೆ.

ಹೌದು, ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನ ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್‌ಆರ್ ರಮೇಶ್ ಸೇರಿದಂತೆ ಹಲವರು ಬಿಬಿಎಂಪಿ ಆಯುಕ್ತರಿಗೆ ಈ ಬಗ್ಗೆ ಮನವಿ ಮಾಡಿದ್ದು, ಇದೀಗ

ಈ ಮನವಿಗೆ ಬಿಬಿಎಂಪಿ ಅಧಿಕಾರಿಗಳು ಅನುಮೋದನೆ ನಾಡಿದ್ದಾರೆ. ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ರಸ್ತೆಯ ವೇಗಾ ಸಿಟಿ ಮಾಲ್ ಜಂಕ್ಷನ್‌ವರೆಗಿನ 12 ಕಿ.ಮೀ ಉದ್ದದ ರಸ್ತೆಗೆ 'ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ ರಸ್ತೆ' ಎಂದು ನಾಮಕರಣ ಮಾಡಲಾಗಿದೆ. ಅಷ್ಟೇ ಅಲ್ಲದೆ ಈಗ ಅದರ ನಾಮಫಲಕವನ್ನು ಅಳವಡಿಸುವ ಕಾರ್ಯವನ್ನು ಸಹ ಮಾಡಲಾಗ್ತಿದೆ.

ಡ್ಯಾನ್ಸಿಂಗ್ ಚಾಂಪಿಯನ್‌ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್; ಧ್ರುವ ಸರ್ಜಾ ಸ್ಪೆಷಲ್ ಜಡ್ಜ್‌!

ಈ 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ರಾಜ್‌ಕುಮಾರ್ ರಸ್ತೆ ಎಂದು ನಾಮಕರಣ ಮಾಡಿರುವುದು ಮಾತ್ರವಲ್ಲದೆ, ಪ್ರಮುಖ ಸ್ಥಳಗಳಾದ ಹೊಸಕೆರೆ ಹಳ್ಳಿ, ದೇವೆಗೌಡ ಪೆಟ್ರೋಲ್ ಬಂಕ್, ಕದಿರೇನಹಳ್ಳಿ ಪಾರ್ಕ್, ಸಾರಕ್ಕಿ ಸಿಗ್ನಲ್, ಜೆಪಿ ನಗರ ಹಾಗೂ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಜಂಕ್ಷನ್ ಗಳಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ ರಸ್ತೆ ಎಂಬ ನಾಮಫಲಕವನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಸದ್ಯ ರಿಂಗ್ ರೋಡ್ ಅಂತ ಕರೆಯಲಾಗುತ್ತಿದ್ದ ಈ ರಸ್ತೆಯನ್ನ ಇನ್ಮುಂದೆ ಪುನೀತ್ ರಾಜಕುಮಾರ್ ರಸ್ತೆ ಅಂತ ಕರಿಯೋಕೆ ಹಾಗೂ ಈ ರಸ್ತೆಯುದ್ದಕ್ಕೂ ಪುನೀತ್ ರಾಜಕುಮಾರ್ ರಸ್ತೆ ಎಂಬ ನಾಮಫಲಕ ಕಾಣಸಿಗ್ತಿರೋ ಬಗ್ಗೆ ಅಪ್ಪು ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಚೆನ್ನಾಗಿ ಡ್ಯಾನ್ಸ್‌ ಮಾಡದಿದ್ರೆ ಹೊಡೀತೀನಿ ಅಂದಿದ್ರು ಪುನೀತ್‌: ವಿಕ್ರಂ ರವಿಚಂದ್ರನ್‌

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ 2021 ಅಕ್ಟೋಬರ್ 29ರಂದು ಇಹಲೋಕ ತ್ಯಜಿಸಿದರು. ಪುನೀತ್ ಹಠಾತ್ ಸಾವಿನ ಸುದ್ದಿ ಅಭಿಮಾನಿಗಳಿಗೆ ಬರಸಿಡಿಲಿನಂತೆ ಬಂದು ಅಪ್ಪಳಿಸಿತ್ತು. ಆರೋಗ್ಯವಾಗಿ, ಸಖತ್ ಆಕ್ಟೀವ್ ಆಗಿದ್ದ ನಟ ದಿಢೀರ್ ಇಲ್ಲ ಎನ್ನುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಪುನೀತ್ ನಿಧನಹೊಂದಿ ಅನೇಕ ತಿಂಗಳುಗಳೇ ಕಳೆದಿವೆ. ಆದರೂ ಅವರ ಅಗಲಿಕೆಯ ನೋವು ಇನ್ನು ಮಾಸಿಲ್ಲ. ಕಂಠೀರವ ಸ್ಟೂಡಿಯೋದಲ್ಲಿರುವ ಅವರ ಸಮಾಧಿಗೆ ಇಂದಿಗೂ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಧನ್ಯರಾಗುತ್ತಿದ್ದಾರೆ. ಅಪ್ಪು ಇನ್ಮುಂದೆ ನೆನಪು ಮಾತ್ರ. ಅಭಿಮಾನಿಗಳು ಅವರ ಸಿನಿಮಾಗಳನ್ನು ನೋಡುತ್ತಾ ಅಪ್ಪು ನೆನಪಲ್ಲೇ ಕಾಲಕಳೆಯುತ್ತಿದ್ದಾರೆ. ಇದೀಗ ರಸ್ತೆಗೆ ಪುನೀತ್ ಹೆಸರಿಡುವ ಮೂಲಕ ಅಪ್ಪು ಹೆಸರನ್ನು ಮತ್ತಷ್ಟು ಜೀವಂತವಾಗಿ ಇಡುವ ಕೆಲಸ ಮಾಡಲಾಗಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?