ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಅಶ್ಲೀಲ ಫೋಟೋ ಹರಿಬಿಟ್ಟ ಗಾಯಕ ಅರೆಸ್ಟ್

Published : Jun 10, 2023, 02:58 PM ISTUpdated : Jun 10, 2023, 03:02 PM IST
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಅಶ್ಲೀಲ ಫೋಟೋ ಹರಿಬಿಟ್ಟ ಗಾಯಕ ಅರೆಸ್ಟ್

ಸಾರಾಂಶ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಫೋಟೋ ಹರಿಬಿಟ್ಟ ಗಾಯಕ ಭೋಜ್‌ಪುರಿ ಗಾಯಕ ಅಭಿಷೇಕ್ ಅಕಾ ಬಾಬುಲ್ ಬಿಹಾರಿಯನ್ನು ಪೊಲೀಸರು ಬಂಧಸಿದ್ದಾರೆ.  

ಅಪ್ರಾಪ್ತೆ ಮೇಲೆ ಅತ್ಯಾಚಾರ ಮತ್ತು ಆಕೆಯ ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟ ಅರೋಪದ ಮೇಲೆ 21 ವರ್ಷದ ಭೋಜ್‌ಪುರಿ ಗಾಯಕ ಅಭಿಷೇಕ್ ಅಕಾ ಬಾಬುಲ್ ಬಿಹಾರಿ ಎಂಬಾತನನ್ನು ಬಂಧಿಸಲಾಗಿದೆ. ಬಿಹಾರದ ಗುರುಗ್ರಾಮ್‌ನಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಯೂಟ್ಯೂಬ್ ಚಾನೆಲ್ ಹೊಂದಿದ್ದು ಸಾವಿರಗಟ್ಟಲೇ ಫಾಲೋವರ್ಸ್ ಹೊಂದಿದ್ದಾರೆ. 

ಎರಡು ವರ್ಷಗಳ ಹಿಂದೆ ಗಾಯಕ ಅಭಿಷೇಕ್ 13 ವರ್ಷದ ಬಾಲಕಿಯ ಜೊತೆ ಸ್ನೇಹ ಬೆಳಸಿ ತನ್ನೊಂದಿಗೆ ಹೋಟೆಲ್ ಕೋಣೆಗೆ ಕರೆದೊಯ್ದು ಆಮಿಷ ಒಡ್ಡಿ ಅಲ್ಲಿ ಅತ್ಯಾಚಾರ ಎಸಗಿದ್ದಾನೆ. ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾನೆ. ಆದರೆ ಘಟನೆಯ ಬಳಿಕ ಬಾಲಕಿ ಆತನಿಂದ ದೂರವಾಗಿದ್ದು, ಈ ಬಗ್ಗೆ ಯಾರೊಂದಿಗೂ ಮಾತನಾಡಿರಲಿಲ್ಲ. ಆದರೆ ಅಭಿಷೇಕ್ ಇತ್ತೀಚೆಗೆ ಆಕೆಯ ಆಕ್ಷೇಪಾರ್ಹ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ನಂತರ ಬಾಲಕಿಯ ಕುಟುಂಬವು ಅವಳೊಂದಿಗೆ ಮಾತನಾಡಿದೆ. ಆಗ ಆಕೆ ತನ್ನ ಅಭಿಷೇಕ್ ಕರ್ಮಕಾಂಡ ಬಹಿರಂಗಪಡಿಸಿದ್ದಾಳೆ.

ಲವ್‌ ಮಾಡ್ತಿದ್ದ ಹುಡ್ಗಿನ ಬೆಂಗ್ಳೂರಿಗೆ ಕರೆಸಿ, ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ಮಾಡಿದ ಪ್ರಿಯಕರ

ತಕ್ಷಣ ಪೋಷಕರು ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಅಭಿಷೇಕ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದರು. ಪ್ರಕರಣ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಅಭಿಷೇಕ್‌ನನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಯುತ್ತಿದೆ. ಅಭಿಷೇಕ್  ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?
ಸಾವಿರ ಕೋಟಿ ಕುಬೇರ 'ಮಹಾಪುರುಷ'ನಿಗೆ ಡಿವೋರ್ಸ್ ಕೊಡ್ತಾರಾ ಈ ನಟಿ? ಇದೆಂಥ ಶಾಕಿಂಗ್ ಮ್ಯಾಟರ್!