
ಬಾಲಿವುಡ್ ಸಿಂಪಲ್ ಮ್ಯಾನ್ ಅಭಿಷೇಕ್ ಬಚ್ಚನ್ ಕೆಲವು ದಿನಗಳಿಂದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ತಮಿಳಿನ 'ಓಟು ಸೇರಪ್ಪು ಸೈಜ್ 7' ಸಿನಿಮಾ ಹಿಂದಿಯಲ್ಲಿ ರಿಮೇಕ್ ಆಗುತ್ತಿದ್ದು ಅಭಿಷೇಕ್ ವಿಭಿನ್ನ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣದ ವೇಳೆ ಅಭಿಷೇಕ್ ಕೈಗೆ ಸಣ್ಣ ಪೆಟ್ಟು ಬಿದ್ದಿದೆ ಎನ್ನಲಾಗಿದೆ.
ಚಿತ್ರೀಕರಣದ ವೇಳೆ ಅಭಿಷೇಕ್ ಬಚ್ಚನ್ ಕೈಗೆ ಗಾಯವಾಗಿದ್ದು, ತಕ್ಷಣವೇ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೀಲಾವತಿ ಆಸ್ಪತ್ರೆಗೆ ಅಮಿತಾಭ್ ಹಾಗೂ ಸಹೋದರಿ ಶ್ವೇತಾ ಆಗಮಿಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಅಭಿಷೇಕ್‌ಗೆ ಏನ್ ಆಗಿದೆ ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಚಿತ್ರತಂಡದವರನ್ನು ಅನೇಕರು ಸಂಪರ್ಕಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಸಿನಿಮಾ ಸೆಟ್‌ನಿಂದ ಬಂದಿರುವ ಮಾಹಿತಿ ಪ್ರಕಾರ ಕೈಗೆ ಮಾತ್ರ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಪತ್ನಿ ಐಶ್ವರ್ಯ ರೈ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು, ಪತಿಗೆ ಗಾಯವಾಗಿರುವ ವಿಚಾರ ತಿಳಿದು ಖಾಸಗಿ ಜೆಟ್ ಮೂಲಕ ಮುಂಬೈಗೆ ಆಗಮಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.